ನೈಜೀರಿಯಾ ವಿದ್ಯಾರ್ಥಿಗಳ ಮೇಲೆ ಹಲ್ಲೆ: ಭಾರತೀಯ ರಾಯಭಾರಿಗೆ ಸಮನ್ಸ್, ಸೂಕ್ತ ಕ್ರಮಕ್ಕೆ ಆಗ್ರಹ
ಭಾರತದಲ್ಲಿರುವ ನೈಜೀರಿಯಾದ 4 ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆದಿರುವ ಘಟನೆಗೆ ಸಂಬಂಧಿಸಿದಂತೆ ಭಾರತೀಯ ರಾಯಭಾರಿಗೆ ನೈಜೀರಿಯಾ ಸಮನ್ಸ್ ನೀಡಿದ್ದು, ಹಲ್ಲೆ ನಡೆಸಿದವರ ವಿರುದ್ಧ ಸೂಕ್ತ ಕ್ರಮ

Published On :
ಅಬುಜಾ: ಭಾರತದಲ್ಲಿರುವ ನೈಜೀರಿಯಾದ 4 ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆದಿರುವ ಘಟನೆಗೆ ಸಂಬಂಧಿಸಿದಂತೆ ಭಾರತೀಯ ರಾಯಭಾರಿಗೆ ನೈಜೀರಿಯಾ ಸಮನ್ಸ್ ನೀಡಿದ್ದು, ಹಲ್ಲೆ ನಡೆಸಿದವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದೆ.
ಭಾರತ ಸರ್ಕಾರ ಹಲ್ಲೆ ನಡೆಸಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ನೈಜೀರಿಯಾದ ವಿದೇಶಾಂಗ ಇಲಾಖೆಯ ಕಾರ್ಯದರ್ಶಿ ಭಾರತದ ರಾಯಭಾರಿ ನಾಗಭೂಷಣ್ ರೆಡ್ಡಿ ಅವರೊಂದಿಗೆ ನಡೆಸಿದ ಸಭೆಯಲ್ಲಿ ಒತ್ತಾಯಿಸಿದ್ದಾರೆ. ಇತ್ತೀಚೆಗಷ್ಟೇ ಡ್ರಗ್ ನ ಓವರ್ ಡೋಸ್ ನಿಂದಾಗಿ ಗ್ರೇಟರ್ ನೋಯ್ಡಾದಲ್ಲಿ 17 ವರ್ಷದ ಬಾಲಕನೊಬ್ಬ ಮೃತಪಟ್ಟಿದ್ದ, ಈ ಹಿನ್ನೆಲೆಯಲ್ಲಿ ಆಯೋಜಿಸಲಾಗಿದ್ದ ಕ್ಯಾಂಡಲ್ ಲೈಟ್ ಮಾರ್ಚ್ ನಲ್ಲಿ ನೈಜೀರಿಯಾ ಮೂಲದ ವಿದ್ಯಾರ್ಥಿಗಳನ್ನು ಥಳಿಸಲಾಗಿತ್ತು.
ವಿದೇಶಿಗರು ತಮ್ಮ ಮಗನನ್ನು ಅಪಹರಿಸಿ ಡ್ರಗ್ಸ್ ನೀಡಿದ್ದರು, ಇದರಿಂದಾಗಿಯೇ ತಮ್ಮ ಮಗ ಮೃತಪಟ್ಟಿದ್ದು ಎಂದು ಬಾಲಕನ ಪೋಷಕರು ಆರೋಪಿಸಿದ್ದರು. ಈ ಘಟನೆಗೆ ನೈಜೀರಿಯಾ ಮೂಲದ ವ್ಯಕ್ತಿಗಳೇ ಕಾರಣ ಎಂದು ಭಾವಿಸಿದ್ದ ಜನರು ನೈಜೀರಿಯಾ ಮೂಲದ 4 ವಿದ್ಯಾರ್ಥಿಗಳನ್ನು ಥಳಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
attackದಾಳಿIndian Envoyಭಾರತೀಯ ರಾಯಭಾರಿGreater Noidaಗ್ರೇಟರ್ ನೋಯ್ಡಾNigerian studentsನೈಜೀರಿಯಾ ವಿದ್ಯಾರ್ಥಿಗಳು
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


