ದೇಶ

ಗೋಹತ್ಯೆ ಅಪರಾಧಕ್ಕೆ ಗುಜರಾತ್ ನಲ್ಲಿ ಇನ್ಮುಂದೆ ಜೀವಾವಧಿ ಶಿಕ್ಷೆ

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅಕ್ರಮ ಕಸಾಯಿಖಾನೆಗಳಿಗೆ ಬೀಗ ಹಾಕಿಸುತ್ತಿದ್ದಾರೆ, ಇದೇ ವೇಳೆ ಗುಜರಾತ್ ಸರ್ಕಾರ ಗೋಹತ್ಯೆ ...

ಗೋಹತ್ಯೆ ಅಪರಾಧಕ್ಕೆ ಗುಜರಾತ್ ನಲ್ಲಿ ಇನ್ಮುಂದೆ ಜೀವಾವಧಿ ಶಿಕ್ಷೆ
ಸಂಗ್ರಹ ಚಿತ್ರ
Published On :

ಅಹಮದಾಬಾದ್: ಅಹಮದಾಬಾದ್: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅಕ್ರಮ ಕಸಾಯಿಖಾನೆಗಳಿಗೆ ಬೀಗ ಹಾಕಿಸುತ್ತಿದ್ದಾರೆ, ಇದೇ ವೇಳೆ ಗುಜರಾತ್  ಸರ್ಕಾರ ಗೋಹತ್ಯೆ ಮಾಡುವವರಿಗೆ ಜೀವಾವಧಿ ಶಿಕ್ಷೆ ವಿಧಿಸುವ ಕಾನೂನನ್ನು ಜಾರಿಗೆ ತಂದಿದೆ.

ಗೋಹತ್ಯೆ ಮಾಡುವವರಿಗೆ 7 ವರ್ಷಗಳ ಜೀವಾವಧಿ ಶಿಕ್ಷೆ ವಿಧಿಸುವ ತಿದ್ದುಪಡಿ ಕಾಯಿದೆಗೆ ಗುಜರಾತ್ ವಿಧಾನಸಭೆ ಅನುಮೋದನೆ ನೀಡಿದೆ.

ನರೇಂದ್ರ ಮೋದಿ ಅವರು ಗುಜರಾತ್ ಮುಖ್ಯಮಂತ್ರಿಯಾಗಿದ್ದಾಗ ,1954ರ ಗುಜರಾತ್ ಪ್ರಾಣಿ ಸಂರಕ್ಷಣಾ ಕಾಯ್ದೆ ಅನುಸಾರ ಗುಜರಾತ್ ನಲ್ಲಿ ಗೋಹತ್ಯೆ, ಸಾಗಣೆ ಮತ್ತು ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿತ್ತು.

ಗೋಹತ್ಯೆ ಸಂಬಂಧದ ಯಾವುದೇ ಅಪರಾಧಗಳಿಗೂ 2011 ರಲ್ಲಿ ಗುಜರಾತ್ ಪ್ರಾಣಿ ಸಂರಕ್ಷಣಾ ತಿದ್ದುಪಡಿ ಕಾಯಿದೆ ಅಡಿಯಲ್ಲಿ ಶಿಕ್ಷೆ ವಿಧಿಸಲಾಗುತ್ತಿತ್ತು.

2011ರ ಗುಜರಾತ್ ಪ್ರಾಣಿ ಸಂರಕ್ಷಣಾ ತಿದ್ದುಪಡಿ ಕಾಯಿದೆ ಅನ್ವಯ ಅಪರಾಧಿಗಳಿಗೆ 7 ವರ್ಷ ಜೀವಾವಧಿ ಶಿಕ್ಷೆ, 50 ಸಾವಿರ ರು ದಂಡ ಹಾಗೂ ವಾಹನ ಸೀಜ್ ಮಾಡಿದರೇ ಆರು ತಿಂಗಳ ಕಾಲ ವಾಹನದ ಸಂಚಾರ ರದ್ದುಗೊಳಿಸಬಹುದಾಗಿದೆ.

ದೇಶದಲ್ಲಿರುವ ಹಸುಗಳನ್ನು ರಕ್ಷಿಸಲು ಮುಂದಾಗಿರುವ ಗುಜರಾತ್ ಸರ್ಕಾರ ಗೋಹತ್ಯೆ ಮಾಡುವವರಿಗೆ 7 ವರ್ಷಗಳ ಜೀವಾವಧಿ ಶಿಕ್ಷೆ ವಿಧಿಸುವ ತಿದ್ದುಪಡಿ ಕಾಯಿದೆಯನ್ನು ಅನುಮೋದಿಸಿದ್ದು ಇಂದಿನಿಂದ ಕಾಯಿದೆ ಜಾರಿಯಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.