ಪಾಕ್ ಪ್ರಾಯೋಜಿತ ಭಯೋತ್ಪಾದನೆಯಿಂದ ಪ್ರೇರಿತರಾಗಬೇಡಿ: ಕಾಶ್ಮೀರಿ ಯುವಕರಿಗೆ ರಾಜನಾಥ್ ಸಿಂಗ್ ಸಲಹೆ
ಪಾಕಿಸ್ತಾನ ಪ್ರಾಯೋಜಿತ ಭಯೋತ್ಪಾದಕರು ತಮ್ಮ ಚಟುವಟಿಕೆಗಳಿಗೆ ಸಾಮಾಜಿಕ ಜಾಲತಾಣಗಳನ್ನು ಬಳಕೆ ಮಾಡುತ್ತಿದ್ದು, ಇದರಿಂದ ಕಾಶ್ಮೀರದ ಯುವಕರು ಪ್ರಭಾವಿತರಾಗಬಾರದು ಎಂದು ಕೇಂದ್ರ ಗೃಹ ಸಚಿವ ರಾಜನಾಥ ಸಿಂಗ್ ಅವರು ಶುಕ್ರವಾರ ಹೇಳಿದ್ದಾರೆ.

ನವದೆಹಲಿ: ಪಾಕಿಸ್ತಾನ ಪ್ರಾಯೋಜಿತ ಭಯೋತ್ಪಾದಕರು ತಮ್ಮ ಚಟುವಟಿಕೆಗಳಿಗೆ ಸಾಮಾಜಿಕ ಜಾಲತಾಣಗಳನ್ನು ಬಳಕೆ ಮಾಡುತ್ತಿದ್ದು, ಇದರಿಂದ ಕಾಶ್ಮೀರದ ಯುವಕರು ಪ್ರಭಾವಿತರಾಗಬಾರದು ಎಂದು ಕೇಂದ್ರ ಗೃಹ ಸಚಿವ ರಾಜನಾಥ ಸಿಂಗ್ ಅವರು ಶುಕ್ರವಾರ ಹೇಳಿದ್ದಾರೆ.
ಕಾಶ್ಮೀರ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಲೋಕಸಭೆಯಲ್ಲಿ ಮಾತನಾಡಿದ ಕೇಂದ್ರ ಗೃಹ ಸಚಿವ ರಾಜ್ ನಾಥ್ ಸಿಂಗ್ ಅವರು, ಪಾಕಿಸ್ತಾನ ಪ್ರಾಯೋಜಿತ ಭಯೋತ್ಪಾದಕರು ಜಮ್ಮು ಮತ್ತು ಕಾಶ್ಮೀರದಲ್ಲಿ ಭಯಭೀತಿ ವಾತಾವರಣ ಸೃಷ್ಟಿಸಲು ಯತ್ನಿಸುತ್ತಿದ್ದಾರೆ. ಆ ಮೂಲಕ ರಾಜ್ಯವನ್ನು ಅಸ್ಥಿರಗೊಳಿಸಲು ಯತ್ನಿಸುತ್ತಿದ್ದು, ಅವರಿಗೆ ನಾವು ಸರಿಯಾದ ರೀತಿಯಲ್ಲಿಯೇ ಉತ್ತರವನ್ನು ನೀಡುತ್ತಿದ್ದೇವೆ ಎಂದು ಹೇಳಿದ್ದಾರೆ.
"ಭದ್ರತಾ ಪಡೆ ಉಗ್ರರ ವಿರುದ್ಧ ಕಾರ್ಯಾಚರಣೆ ನಡೆಸುತ್ತಿರುವಾಗ ಆವರ ಮೇಲೆ ಕಲ್ಲು ತೂರಾಟ ನಡೆಸುವುದು ಇತ್ತೀಚೆಗೆ ಹೊಸ ಟ್ರೆಂಡ್ ಆಗಿ ಹೋಗಿದೆ. ಕಲ್ಲು ತೂರಾಟ ನಡೆಸುವವರು ಪಾಕಿಸ್ತಾನ ಪಡೆಗಳ ಕಡೆಗೆ ಪ್ರಭಾವಿತರಾಗಿದ್ದಾರೆ. ಇಂತರರ ಪ್ರಭಾವಕ್ಕೆ ಒಳಗಾಗದಂತೆ ನಾನು ಈ ಮೂಲಕ ಕಾಶ್ಮೀರಿ ಯುವಕರಲ್ಲಿ ಮನವಿ ಮಾಡಿಕೊಳ್ಳುತ್ತಿದ್ದೇನೆ. ಜನರನ್ನು ಒಗ್ಗೂಡಿಸಲು ಪಾಕಿಸ್ತಾನದ ಭಯೋತ್ಪಾದಕರು ಸಾಮಾಜಿಕ ಜಾಲತಾಣಗಳನ್ನು ಬಳಕೆ ಮಾಡುತ್ತಿದ್ದಾರೆ. ಭಯೋತ್ಪಾದನೆಯನ್ನು ಮಟ್ಟಹಾಕುವಲ್ಲಿ ಭಾರತ ಯಶಸ್ವಿಯಾಗಲಿದೆ ಎಂದು ಅವರು ತಿಳಿಸಿದ್ದಾರೆ.
ನಿನ್ನೆಯಷ್ಟೇ ಹೇಳಿಕೆ ನೀಡಿದ್ದ ಜಮ್ಮು ಮತ್ತು ಕಾಶ್ಮೀರದ ಡಿಜಿಪಿ ಎಸ್.ಪಿ. ವೈದ್ ಅವರು, ಪಾಕಿಸ್ತಾನದ ಕಾಶ್ಮೀರ ಯುವಕರನ್ನು ತನ್ನ ಪ್ರಭಾವಕ್ಕೊಳಗಾಗುವಂತೆ ಮಾಡುತ್ತಿದ್ದು, ಎನ್ ಕೌಂಟರ್ ಸ್ಥಳದಲ್ಲಿ ಕಲ್ಲು ತೂರಾಟ ನಡೆಯುವಂತೆ ಮಾಡುತ್ತಿದೆ. ಜನರು ಸಾಮಾಜಿಕ ಜಾಲತಾಣಗಳನ್ನು ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ. ಇದು ಕಾಶ್ಮೀರ ಹಾಗೂ ದೇಶದ ಶಾಂತಿ ಹಳಸು ಮಾಡುತ್ತಿದೆ ಎಂದು ಹೇಳಿದ್ದರು.
ಎನ್ ಕೌಂಟರ್ ಆರಂಭವಾಗುತ್ತಿದ್ದಂತೆಯೇ ಸಾಮಾಜಿಕ ಜಾಲತಾಣಗಳ ಬಳಕೆ ಹೆಚ್ಚಾಗತೊಡಗುತ್ತದೆ. ಸಾಮಾಜಿಕ ಜಾಲತಾಣಗಳ ಮೂಲಕ ಮಾಹಿತಿ ಪಡೆದುಕೊಳ್ಳುವ ಕಾಶ್ಮೀರ ಯುವಕರು ಸ್ಥಳಕ್ಕೆ ಬಂದು ಉಗ್ರರು ತಪ್ಪಿಸಿಕೊಳ್ಳುವ ಸಲುವಾಗಿ ಭದ್ರತಾ ಪಡೆಗಳ ಮೇಲೆ ಕಲ್ಲು ತೂರಾಟ ನಡೆಸುತ್ತಾರೆ. ಈ ಬಗ್ಗೆ ನಾವು ಪರಿಶೀಲನೆ ನಡೆಸಿದ್ದು, ಇಂತಹ ಸಾಕಷ್ಟು ನೆಟ್ ವರ್ಕ್ ಗಳು ಪಾಕಿಸ್ತಾನದಲ್ಲಿರುವುದಾಗಿ ಪತ್ತೆಯಾಗಿವೆ ಎಂದು ತಿಳಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


