ಎಟಿಎಂ, ಕ್ರೆಡಿಟ್, ಡೆಬಿಟ್ ಕಾರ್ಡ್ ಕಣ್ಮರೆಯಾಗಲಿವೆ: ನೀತಿ ಆಯೋಗದ ಸಿಇಒ
ಕ್ರೆಡಿಟ್ ಕಾರ್ಡ್, ಡೆಬಿಟ್ ಕಾರ್ಡ್ ಗಳು ಗಣನೀಯವಾಗಿ ಕಣ್ಮರೆಯಾಗಲಿವೆ ಎಂದು ನೀತಿ ಆಯೋಗದ ಸಿಇಒ ಅಮಿತಾಬ್ ಕಾಂತ್ ಹೇಳಿದ್ದರೆ.

Published On :
ನವದೆಹಲಿ: ಭಾರತ ವೇಗವಾಗಿ ತಂತ್ರಜ್ಞಾನಗಳ ಅಪ್ಲಿಕೇಶನ್ ಗಳನ್ನು ಒಪ್ಪಿಕೊಳ್ಳುತ್ತಿದ್ದು, ಮೊಬೈಲ್ ವ್ಯಾಲೆಟ್, ಬೈಯೋಮೆಟ್ರಿಕ್ ಮೋಡ್ ಮೂಲಕ ಡಿಜಿಟಲ್ ವಹಿವಾಟುಗಳು ನಡೆಯಲಿದ್ದು, ಕ್ರೆಡಿಟ್ ಕಾರ್ಡ್, ಡೆಬಿಟ್ ಕಾರ್ಡ್ ಗಳು ಗಣನೀಯವಾಗಿ ಕಣ್ಮರೆಯಾಗಲಿವೆ ಎಂದು ನೀತಿ ಆಯೋಗದ ಸಿಇಒ ಅಮಿತಾಬ್ ಕಾಂತ್ ಹೇಳಿದ್ದಾರೆ.
ಟ್ರೇಡ್-ಇನ್ವೆಸ್ಟ್ ಮೆಂಟ್ ಫೆಸಿಲಿಟೇಷನ್ ಸರ್ವೀಸಸ್ (ಟಿಐಎಫ್ಎಸ್) ನ್ನು ಉದ್ಘಾಟಿಸಿ ಮಾತನಾಡಿರುವ ಸಿಇಒ ಅಮಿತಾಬ್ ಕಾಂತ್, ದೇಶದ ಅಭಿವೃದ್ಧಿಯಲ್ಲಿ ತಂತ್ರಜ್ಞಾನ ಪ್ರಮುಖ ಪಾತ್ರ ವಹಿಸಲಿದ್ದು, ಮುಂದಿನ 3-4 ವರ್ಷಗಳಲ್ಲಿ ಡಿಜಿಟಲ್ ವಹಿವಾಟು ವ್ಯಾಪಕವಾಗಿ ನಡೆಯಲಿದೆ, ನಂತರ ಡೆಬಿಟ್, ಕ್ರೆಡಿಟ್ ಕಾರ್ಡ್ ಗಳು ಕ್ರಮೇಣವಾಗಿ ಕಣ್ಮರೆಯಾಗಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ಜಗತ್ತಿನಾದ್ಯಂತ ಆರ್ಥಿಕ ಬೆಳವಣಿಗೆ ಕ್ಷೀಣಿಸುತ್ತಿದ್ದರೂ ವಾರ್ಷಿಕವಾಗಿ ಭಾರತ ಶೇ.7.6 ರಷ್ಟು ಬೆಳವಣಿಗೆ ಸಾಧಿಸುತ್ತಿದೆ. ಅಮೆರಿಕಾ, ಯುರೋಪ್ ನ ಜನ ಸಂಖ್ಯೆಯಲ್ಲಿ ಬಹುತೇಕ ಜನರು ವೃದ್ಧರಿದ್ದಾರೆ. ಆದರೆ ಭಾರತದ ಜನಸಂಖ್ಯೆ ಮಾತ್ರ ಯುವಕರಿಂದ ಕೂಡಿದೆ ಎಂದು ಅಮಿತಾಬ್ ಕಾಂತ್ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


