ದೇಶ

ಉತ್ತರ ಪ್ರದೇಶದಲ್ಲಿ ಗೋವು 'ಮಮ್ಮಿ' ಆಗಿದ್ದರೆ, ಈಶಾನ್ಯದಲ್ಲಿ 'ಯಮ್ಮಿ' ಆಗಿದೆ: ಓವೈಸಿ

ಗೋಹತ್ಯೆ ವಿರುದ್ದ ಬಿಜೆಪಿ ಸರ್ಕಾರ ಕ್ರಮ ಕೈಗೊಳ್ಳುತ್ತಿರುವುದಕ್ಕೆ ಎಐಎಂಐಎಂ ಅಧ್ಯಕ್ಷ ಅಸಾದುದ್ದೀನ್ ಓವೈಸಿ ಶನಿವಾರ ತೀವ್ರವಾಗಿ ಕಿಡಿಕಾರಿದ್ದಾರೆ...

ಉತ್ತರ ಪ್ರದೇಶದಲ್ಲಿ ಗೋವು 'ಮಮ್ಮಿ' ಆಗಿದ್ದರೆ, ಈಶಾನ್ಯದಲ್ಲಿ 'ಯಮ್ಮಿ' ಆಗಿದೆ: ಓವೈಸಿ
ಎಐಎಂಐಎಂ ಅಧ್ಯಕ್ಷ ಅಸಾದುದ್ದೀನ್ ಓವೈಸಿ
Published On :
ನವದೆಹಲಿ: ಗೋಹತ್ಯೆ ವಿರುದ್ದ ಬಿಜೆಪಿ ಸರ್ಕಾರ ಕ್ರಮ ಕೈಗೊಳ್ಳುತ್ತಿರುವುದಕ್ಕೆ ಎಐಎಂಐಎಂ ಅಧ್ಯಕ್ಷ ಅಸಾದುದ್ದೀನ್ ಓವೈಸಿ ಶನಿವಾರ ತೀವ್ರವಾಗಿ ಕಿಡಿಕಾರಿದ್ದಾರೆ. 
ಅಕ್ರಮ ಕಸಾಯಿಖಾನೆಗಳ ವಿರುದ್ಧ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಕ್ರಮ ಕೈಗೊಳ್ಳುತ್ತಿರುವ ಹಿನ್ನಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಓವೈಸಿ, ಉತ್ತರಪ್ರದೇಶದಲ್ಲಿ ಗೋವನ್ನು ಮಮ್ಮಿ ಎಂದು ಪರಿಗಣಿಸಲಾಗುತ್ತಿದೆ. ಇದು ಬಿಜೆಪಿಯ ಬೂಟಾಟಿಕೆಯಾಗಿದೆ. ಆದರೆ, ಈಶಾನ್ಯಾ ಭಾಗದಲ್ಲಿ ಗೋವನ್ನು 'ಯಮ್ಮಿ' ಎಂದೇ ಹೇಳಲಾಗುತ್ತದೆ ಎಂದು ಹೇಳಿದ್ದಾರೆ. 
ಕೆಲ ದಿನಗಳ ಹಿಂದಷ್ಟೇ ಹೇಳಿಕೆ ನೀಡಿದ್ದ ಓವೈಸಿ, ಅಕ್ರಮ ಕಸಾಯಿಖಾನೆಗಳಿಗೆ ಏಕಾಏಕಿ ಬೀಗ ಜಡಿಯುವುದಕ್ಕೂ ಮುನ್ನ ರಾಜ್ಯ ಸರ್ಕಾರ ಕಾಲಾವಕಾಶಗಳನ್ನು ಕೊಡಬೇಕಿತ್ತು ಎಂದು ಹೇಳಿದ್ದರು. 
ಈಶಾನ್ಯ ರಾಜ್ಯಗಳಾದ ಅರುಣಾಚಲ ಪ್ರದೇಶ, ಮಿಜೋರಾಂ, ಮೇಘಾಲಯ, ನಾಗಾಲ್ಯಾಂಡ್, ತ್ರಿಪುರ ಮತ್ತು ಸಿಕ್ಕಿಂಗಳಲ್ಲಿ ಗೋ ಹತ್ಯೆಯನ್ನು ನಿಷೇಧಿಸಲಾಗಿದೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.