ಅಕ್ರಮ ಹಣ ವರ್ಗಾವಣೆ: ಯುನಿಟೆಕ್ ಎಂಡಿ ಸಂಜಯ್ ಚಂದ್ರ ಬಂಧನ
ಅಕ್ರಮ ಹಣ ವರ್ಗಾವಣೆ ಆರೋಪದಡಿಯಲ್ಲಿ ರಿಯಲ್ ಎಸ್ಟೇಟ್ ಸಂಸ್ಥೆ ಯುನಿಟೆಕ್ ನ ಎಂಡಿ ಸಂಜಯ್ ಚಂದ್ರ ಸೇರಿದಂತೆ ಇಬ್ಬರನ್ನು ಆರ್ಥಿಕ ಅಪರಾಧ ವಿಭಾಗದ ಅಧಿಕಾರಿಗಳು ಬಂಧಿಸಿದ್ದು ದೆಹಲಿಯ ನ್ಯಾಯಾಲಯದ

Published On :
ನವದೆಹಲಿ: ಅಕ್ರಮ ಹಣ ವರ್ಗಾವಣೆ ಆರೋಪದಡಿಯಲ್ಲಿ ರಿಯಲ್ ಎಸ್ಟೇಟ್ ಸಂಸ್ಥೆ ಯುನಿಟೆಕ್ ನ ಎಂಡಿ ಸಂಜಯ್ ಚಂದ್ರ ಸೇರಿದಂತೆ ಇಬ್ಬರನ್ನು ಆರ್ಥಿಕ ಅಪರಾಧ ವಿಭಾಗದ ಅಧಿಕಾರಿಗಳು ಬಂಧಿಸಿದ್ದು ದೆಹಲಿಯ ನ್ಯಾಯಾಲಯದ ಎದುರು ಹಾಜರುಪಡಿಸಲಿದ್ದಾರೆ.
ಸಂಜಯ್ ಚಂದ್ರ ಅವರ ಸಹೋದರನನ್ನೂ ಅಕ್ರಮ ಹಣ ವರ್ಗಾವಣೆ ಆರೋಪದಡಿಯಲ್ಲಿ ಬಂಧಿಸಲಾಗಿದ್ದು, ಮಧ್ಯಾಹ್ನ 2 ಗಂಟೆ ವೇಳೆಗೆ ಎಲ್ಲಾ ಆರೋಪಿಗಳನ್ನೂ ಕೋರ್ಟ್ ಎದುರು ಹಾಜರುಪಡಿಸಲಾಗುತ್ತದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಗ್ರೇಟರ್ ನೋಯ್ಡಾದಲ್ಲಿ ಯುನಿಟೆಕ್ ರಿಯಲ್ ಎಸ್ಟೇಟ್ ಯೋಜನೆಯ ಮೂಲಕ ಒಂದಷ್ಟು ಜನರು ಫ್ಲಾಟ್ ಗಳನ್ನು ಬುಕ್ ಮಾಡಿದ್ದರು. ಆದರೆ ಖರೀದಿಸಿರುವವರಿಗೆ ಫ್ಲಾಟ್ ನ್ನೂ ನೀಡದೇ ಹಣವನ್ನೂ ವಾಪಸ್ ಮಾಡದೇ ಮೋಸ ಮಾಡಿರುವ ಆರೋಪ ಸುರೇಶ್ ಚಂದ್ರ ವಿರುದ್ಧ ಕೇಳಿಬಂದಿದ್ದು, ಅಕ್ರಮ ಹಣ ವರ್ಗಾವಣೆಯ ಆರೋಪವೂ ಕೇಳಿಬಂದಿದೆ. ಸಂಜಯ್ ಚಂದ್ರ ಇದಕ್ಕೂ ಮುನ್ನ 2ಜಿ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐ ನಿಂದ ಬಂಧನಕ್ಕೊಳಗಾಗಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ರಿಯಲ್ ಎಸ್ಟೇಟ್ ಸಂಸ್ಥೆಯುನಿಟೆಕ್money launderingಅಕ್ರಮ ಹಣ ವರ್ಗಾವಣೆUnitechReal estate firmMD Sanjay Chandraಸಂಜಯ್ ಚಂದ್ರ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


