ದಾಖಲೆ ನೀಡಿ ಇಲ್ಲವೇ ಕ್ಷಮೆಯಾಚಿಸಿ: ದಿಗ್ವಿಜಯ್ ಸಿಂಗ್'ಗೆ ನಾಯ್ಡು ಆಗ್ರಹ
ಇಸ್ಲಾಮಿಕ್ ಸ್ಟೇಟ್ ಆಫ್ ಇರಾಕ್ ಅ್ಯಂಡ್ ಸಿರಿಯಾ (ಇಸಿಸ್) ಉಗ್ರ ಸಂಘಟನೆ ಸೇರಲು ತೆಲಂಗಾಣ ಪೊಲೀಸರೇ ಪ್ರೇರೇಪಿಸುತ್ತಿದ್ದಾರೆಂದ ಕಾಂಗ್ರೆಸ್ ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ಅವರ ಆರೋಪವನ್ನು ಕೇಂದ್ರ ಸಚಿವ ವೆಂಕಯ್ಯ ನಾಯ್ಡು ಅವರು...

Published On :
ನವದೆಹಲಿ: ಇಸ್ಲಾಮಿಕ್ ಸ್ಟೇಟ್ ಆಫ್ ಇರಾಕ್ ಅ್ಯಂಡ್ ಸಿರಿಯಾ (ಇಸಿಸ್) ಉಗ್ರ ಸಂಘಟನೆ ಸೇರಲು ತೆಲಂಗಾಣ ಪೊಲೀಸರೇ ಪ್ರೇರೇಪಿಸುತ್ತಿದ್ದಾರೆಂದ ಕಾಂಗ್ರೆಸ್ ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ಅವರ ಆರೋಪವನ್ನು ಕೇಂದ್ರ ಸಚಿವ ವೆಂಕಯ್ಯ ನಾಯ್ಡು ಅವರು ಮಂಗಳವಾರ ತಳ್ಳಿಹಾಕಿದ್ದಾರೆ.
ದಿಗ್ವಿಜಯ್ ಸಿಂಗ್ ಅವರ ಹೇಳಿಕೆ ಕುರಿತಂತೆ ಇಂದು ಪ್ರತಿಕ್ರಿಯೆ ನೀಡಿರುವ ಅವರು, ಇದು ಆಧಾರರಹಿತ ಹೇಳಿಕೆಯಾಗಿದ್ದು, ದಿಗ್ವಿಜಯ್ ಸಿಂಗ್ ಅವರ ಬಳಿ ಈ ಬಗ್ಗೆ ದಾಖಲೆಗಳಿದ್ದರೆ ಬಹಿರಂಗಪಡಿಸಲಿ ಎಂದು ಸವಾಲು ಹಾಕಿದ್ದಾರೆ.
ಮುಸ್ಲಿಂ ಯುವಕರು ಇಸಿಸ್ ಸೇರ್ಪಡೆಗೊಳ್ಳಲು ತೆಲಂಗಾಣ ಪೊಲೀಸರೇ ಕುಮ್ಮಕ್ಕು ನೀಡುತ್ತಿದ್ದಾರೆಂಬ ದಿಗ್ವಿಜಯ್ ಸಿಂಗ್ ಅವರ ಈ ಆರೋಪದಿಂದ ಆಘಾತವಾಗಿದೆ. ಅವರ ಬಳಿ ದಾಖಲೆಗಳಿದ್ದರೆ ಬಹಿರಂಗ ಪಡಿಸಲಿ. ಇಲ್ಲವೇ, ಕ್ಷಮೆಯಾಚಿಸಲಿ ಎಂದು ಆಗ್ರಹಿಸಿದ್ದಾರೆ.
ನಿನ್ನೆಯಷ್ಟೇ ಹೇಳಿಕೆ ನೀಡಿದ್ದ ದಿಗ್ವಿಜಯ್ ಸಿಂಗ್ ಅವರು, ತೆಲಂಗಾಣ ಪೊಲೀಸರು ಮುಸ್ಲಿಂ ಯುವಕರನ್ನು ತೀವ್ರಗಾಮಿಗಳಾಗಲು ಪ್ರೇರೇಪಿಸುತ್ತಿದ್ದು, ಇದಕ್ಕಾಗಿಯೇ ವೆಬ್ ಸೈಟ್ ವೊಂದನ್ನು ತೆರೆದಿದ್ದಾರೆ. ಯುವಕರು ಉಗ್ರ ಸಂಘಟನೆಗೆ ಸೇರಲು ಪ್ರೇರೇಪಿಸುವಂತೆ ತೆಲಂಗಾಣ ಮುಖ್ಯಮಂತ್ರಿ ಪೊಲೀಸರಿಗೆ ಆದೇಶಿದ್ದಾರೆಯೇ ಎಂದು ಪ್ರಶ್ನಿಸಿದ್ದರು. ಅಲ್ಲದೆ, ಇಂತಹ ಆದೇಶ ನೀಡಿದ್ದೇ ಆದಲ್ಲಿ ಕೂಡಲೇ ತೆಲಂಗಾಣ ಸಿಎಂ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಇಸಿಸ್ದಿಗ್ವಿಜಯ್ ಸಿಂಗ್ISISದಾಖಲೆevidenceವೆಂಕಯ್ಯ ನಾಯ್ಡುVenkaiah NaiduDigvijaya SinghTelangana Policeತೆಲಂಗಾಣ ಪೊಲೀಸ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


