ದೇಶ

ಲೈಂಗಿಕ ವಿವಾದದಲ್ಲಿ ಬಿಜೆಪಿ ಸಂಸದ: ಮಹಿಳೆ ವಶಕ್ಕೆ ಪಡೆದ ಪೊಲೀಸರು

ಬಿಜೆಪಿ ಸಂಸದ ಕೆ.ಸಿ ಪಟೇಲ್ ವಿರುದ್ಧ ಲೈಂಗಿಕ ದೌರ್ಜನವ್ಯ ಕೇಸು ದಾಖಲಿಸಿದ್ದ ಮಹಿಳೆಯನ್ನು ದೆಹಲಿ ಪೊಲೀಸರು ..

ಲೈಂಗಿಕ ವಿವಾದದಲ್ಲಿ ಬಿಜೆಪಿ ಸಂಸದ: ಮಹಿಳೆ ವಶಕ್ಕೆ ಪಡೆದ ಪೊಲೀಸರು
ಕೆ.ಸಿ ಪಟೇಲ್
Published On :
ನವದೆಹಲಿ: ಬಿಜೆಪಿ ಸಂಸದ ಕೆ.ಸಿ ಪಟೇಲ್ ವಿರುದ್ಧ ಲೈಂಗಿಕ ದೌರ್ಜನವ್ಯ ಕೇಸು ದಾಖಲಿಸಿದ್ದ ಮಹಿಳೆಯನ್ನು ದೆಹಲಿ ಪೊಲೀಸರು  ವಶಕ್ಕೆ ಪಡೆದಿದ್ದಾರೆ.
ನಾವು ಮಹಿಳೆಯನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸುತ್ತಿರುವುದಾಗಿ ಪೊಲೀಸರು ಹೇಳಿದ್ದಾರೆ. ಉತ್ತರ ಪ್ರದೇಶದ ಇಂದಿರಾಪುರಂ ನಲ್ಲಿರುವ ಮನೆಯಿಂದ ಆಕೆಯನ್ನು ಕರೆತಂದು ವಿಚಾರಣೆ ನಡೆಸಲಾಗಿದೆ. 
ಮಹಿಳೆಯೊಬ್ಬರು ತಮಗೆ ಪಾನೀಯದಲ್ಲಿ ಮಾದಕ ಪದಾರ್ಥ ನೀಡಿ, ವಿಡಿಯೊ ಚಿತ್ರೀಕರಿಸಿಕೊಂಡಿದ್ದಾರೆ ಎಂದು ಆರೋಪಿಸಿ ಬಿಜೆಪಿ ಸಂಸದ ಕೆ.ಸಿ. ಪಟೇಲ್ ಅವರು ದೆಹಲಿ ಪೊಲೀಸರಿಗೆ ದೂರು ನೀಡಿದ್ದರು. 
ಸಂಸದರು ತಮ್ಮ ಅಧಿಕೃತ ನಿವಾಸದಲ್ಲಿ ಮಾರ್ಚ್ 3ರಂದು ನನ್ನ ಮೇಲೆ ಅತ್ಯಾಚಾರ ಎಸಗಿದ್ದು, ಈ ಸಂಬಂಧ ದೂರು ಸ್ವೀಕರಿಸಲು ಪೊಲೀಸರು ನಿರಾಕರಿಸಿದ್ದಾರೆ’ ಎಂದು ಆರೋಪಿಸಿ ಮಹಿಳೆಯು ಕೋರ್ಟ್ ಮೊರೆ ಹೋಗಿದ್ದಾರೆ.
ಆಹ್ವಾನದ ಮೇರೆಗೆ ಅಂದು ರಾತ್ರಿ ಊಟಕ್ಕೆಂದು ಸಂಸದರ ನಿವಾಸಕ್ಕೆ ಹೋಗಿದ್ದಾಗ ಲೈಂಗಿಕ ದೌರ್ಜನ್ಯ ನಡೆದಿದೆ ಎಂದಿರುವ ಅವರು, ಈ ಮೊದಲು ಕೂಡಾ ಹಲವಾರು ಬಾರಿ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿದ್ದೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.