ಅಂದು ಅಮಿತ್ ಶಾಗೆ ಅಡುಗೆ ಮಾಡಿ ಬಡಿಸಿದರು, ಇಂದು ತೃಣಮೂಲ ಕಾಂಗ್ರೆಸ್ ಸೇರಿದರು!
ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರಿಗೆ ಕಳೆದ ವಾರ ಔತಣಕೂಟ ಏರ್ಪಡಿಸಿದ್ದ ದಂಪತಿಗಳು ಇದೀಗ ಮಮತಾ ಬ್ಯಾನರ್ಜಿ ಅವರ ತೃಣಮೂಲ ಕಾಂಗ್ರೆಸ್...

Published On :
ನವದೆಹಲಿ: ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರಿಗೆ ಕಳೆದ ವಾರ ಔತಣಕೂಟ ಏರ್ಪಡಿಸಿದ್ದ ದಂಪತಿಗಳು ಇದೀಗ ಮಮತಾ ಬ್ಯಾನರ್ಜಿ ಅವರ ತೃಣಮೂಲ ಕಾಂಗ್ರೆಸ್ ಪಕ್ಷವನ್ನು ಸೇರಿದ್ದಾರೆ.
ಏಪ್ರಿಲ್ 25ರಂದು ಅಮಿತ್ ಶಾ ಅವರು ಪಶ್ಚಿಮ ಬಂಗಾಳ ರಾಜ್ಯ ಪ್ರವಾಸ ಕೈಗೊಂಡಿದ್ದರು ಈ ವೇಳೆ ಮಹಲಿ ದಂಪತಿಗಳ ಮನೆಯಲ್ಲಿ ಮಧ್ಯಾಹ್ನ ಊಟಕ್ಕೆ ತಂಗಿದ್ದರು. ಅಂದು ಅಮಿತ್ ಶಾ ಅವರು ಸಾಮಾನ್ಯರಂತೆ ನೆಲದ ಮೇಲೆ ಬಾಳೆ ಎಲೆಯಲ್ಲಿ ಊಟ ಮಾಡಿದ್ದರು. ಅಮಿತ್ ಶಾ ಅವರಿಗೆ ಪಶ್ಚಿಮ ಬಂಗಾಳ ರಾಜ್ಯಾಧ್ಯಕ್ಷ ದಿಲೀಪ್ ಘೋಷ್ ಕೂಡಾ ಸಾಥ್ ನೀಡಿದ್ದರು. ಈ ವೇಳೆ ದಂಪತಿಗಳು ಸೆಲ್ಫಿಯನ್ನು ತೆಗೆದುಕೊಂಡಿದ್ದರು.
ಇದೀಗ ರಾಜು ಮಹಲಿ ಮತ್ತು ಗೀತಾ ಮಹಲಿ ಅವರು ಟಿಎಂಸಿ ಪಕ್ಷವನ್ನು ಸೇರಿದ್ದಾರೆ. ಅಲ್ಲದೆ ತಾವು ಮಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಅಭಿವೃದ್ಧಿ ಕೆಲಸಗಳಿಂದ ಪ್ರೇರಣೆಗೊಂಡು ಮನಪೂರ್ವಕವಾಗಿ ಟಿಎಂಸಿ ಪಕ್ಷವನ್ನು ಸೇರಿದ್ದೇವೆ ಎಂದು ಗೀತಾ ಮಹಲಿ ಹೇಳಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಬಿಜೆಪಿ ಮಹಲಿ ದಂಪತಿಗಳನ್ನು ಅಪಹರಣ ಮಾಡಿ ಬಲವಂತಾಗಿ ತೃಣಮೂಲಕ ಕಾಂಗ್ರೆಸ್ ಗೆ ಸೇರಿಸಿಕೊಳ್ಳಲಾಗಿದೆ ಎಂದು ಆರೋಪಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


