ದೇಶವನ್ನು ರಕ್ಷಿಸುವ ಅಗತ್ಯವಿದೆ, ಗೋವುಗಳನಲ್ಲ: ಉದ್ಧವ್ ಠಾಕ್ರೆ
ಬಿಜೆಪಿ ಸರ್ಕಾರದ ವಿರುದ್ಧ ಶಿವಸೇನಾ ಮುಖ್ಯಸ್ಥ ಉದ್ಧವ್ ಠಾಕ್ರೆಯವರು ತಮ್ಮ ವಾಗ್ದಾಳಿಯನ್ನು ಮುಂದುವರೆಸಿದ್ದು, ಗೋವುಗಳಲ್ಲ, ಮೊದಲು ದೇಶವನ್ನು ರಕ್ಷಣೆ ಮಾಡುವ ಅಗತ್ಯವಿದೆ...

Published On :
ಮುಂಬೈ: ಬಿಜೆಪಿ ಸರ್ಕಾರದ ವಿರುದ್ಧ ಶಿವಸೇನಾ ಮುಖ್ಯಸ್ಥ ಉದ್ಧವ್ ಠಾಕ್ರೆಯವರು ತಮ್ಮ ವಾಗ್ದಾಳಿಯನ್ನು ಮುಂದುವರೆಸಿದ್ದು, ಗೋವುಗಳಲ್ಲ, ಮೊದಲು ದೇಶವನ್ನು ರಕ್ಷಣೆ ಮಾಡುವ ಅಗತ್ಯವಿದೆ ಎಂದು ಬುಧವಾರ ಹೇಳಿದ್ದಾರೆ.
ಶಿವಸೇನೆ ಕಚೇರಿಯಲ್ಲಿ ಸರಣಿ ಸಭೆಗಳನ್ನು ನಡೆಸಿ ಮಾತನಾಡಿರುವ ಉದ್ಧವ್ ಠಾಕ್ರೆಯವರು ಮಹಾರಾಷ್ಟ್ರ ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.
ಪ್ರಸ್ತುತ ಇರುವ ಪರಿಸ್ಥಿತಿಯಲ್ಲಿ ಗೋವುಗಳಿಗಿಂತಲೂ ದೇಶವನ್ನು ರಕ್ಷಣೆ ಮಾಡುವುದು ಮುಖ್ಯವಾಗಿದೆ ಎಂದಿದ್ದಾರೆ.
ಇದೇ ವೇಳೆ ಇವಿಎಂ ವಿವಾದ ಸಂಬಂಧ ಮಾತನಾಡಿರುವ ಅವರು, ಮತ ಯಂತ್ರವನ್ನು ನಾನು ದೂಷಿಸುವುದಿಲ್ಲ. ನಾನು ಹಾಕಿದ ಮತ ಯಾವ ಖಾತೆಗೆ ಹೋಗಿದೆ ಎಂಬುದರ ಬಗ್ಗೆ ನನಗೆ ಸುಳಿವಿಲ್ಲ. ಇವಿಎಂ ಮೂಲಕ ದೊಡ್ಡ ಗಣಿಗಾರಿಗೆ ನಡೆಸುತ್ತಿದೆ ಎಂದೆನಿಸುತ್ತಿದೆ ಎಂದಿದ್ದಾರೆ.
ಬಿಜೆಪಿ ಕಂಡರೆ ಇತರ ಪಕ್ಷಗಳಿಗೆ ಬೆದರುತ್ತಿವೆ ಎಂದು ಹೇಳಲಾಗುತ್ತಿದೆ. ಬಿಜೆಪಿಗೆ ಧೈರ್ಯವಿದ್ದರೆ ಮಧ್ಯಂತರ ಅವಧಿಯಲ್ಲಿ ಚುನಾವಣೆಯನ್ನು ನಡೆಸಲಿ. ಮಧ್ಯಂತರ ಅವಧಿ ಚುನಾವಣೆ ಕುರಿತಂತೆ ಪ್ರಸ್ತಾಪ ಮಾಡಿದ್ದೇ ಆದರೆ, ಇದಕ್ಕೆ ನಾವು ಒಪ್ಪುತ್ತೇವೆಂದು ತಿಳಿಸಿದ್ದಾರೆ.
ಇದೇ ವೇಳೆ ಪಾಕಿಸ್ತಾನದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಠಾಕ್ರೆ, ಸೀಮಿತ ದಾಳಿಯಿಂದ ಪಾಕಿಸ್ತಾನ ಬುದ್ಧಿ ಕಲಿಯುವುದಿಲ್ಲ. ನೀವೇ ಪಾಕಿಸ್ತಾನದೊಳಗೆ ನುಗ್ಗಿ, ಆ ದೇಶವನ್ನು ತುಂಡರಿಸಬೇಕು. ಶಿವಸೇನೆ ಎಂದಿಗೂ ನಿಮ್ಮೊಂದಿಗಿರುತ್ತದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


