ಫೆರಾ ಉಲ್ಲಂಘನೆ ಪ್ರಕರಣ: ವಿಡಿಯೋ ಕಾನ್ಫರೆನ್ಸ್ ಮೂಲಕವೇ ವಿಚಾರಣೆ- ಶಶಿಕಲಾಗೆ ಅನುಮತಿ
ವಿದೇಶಿ ವಿನಿಮಯ ಕಾಯ್ದೆ (ಫೆರಾ) ಉಲ್ಲಂಘನೆ ಪ್ರಕರಣದಲ್ಲಿ ಎಐಡಿಎಂಕೆ ಪ್ರಧಾನ ಕಾರ್ಯದರ್ಶಿ ವಿ.ಕೆ. ಶಶಿಕಲಾಗೆ ವಿಡಿಯೋ ಕಾನ್ಫರೆನ್ಸ್ ಮೂಲಕವೇ ವಿಚಾರಣೆಗೆ ಹಾಜರಾಗಲು ಸ್ಥಳೀಯ ನ್ಯಾಯಾಲಯ ಗುರುವಾರ ಅನುಮತಿ ನೀಡಿದೆ...

Published On :
ಚೆನ್ನೈ: ವಿದೇಶಿ ವಿನಿಮಯ ಕಾಯ್ದೆ (ಫೆರಾ) ಉಲ್ಲಂಘನೆ ಪ್ರಕರಣದಲ್ಲಿ ಎಐಡಿಎಂಕೆ ಪ್ರಧಾನ ಕಾರ್ಯದರ್ಶಿ ವಿ.ಕೆ. ಶಶಿಕಲಾಗೆ ವಿಡಿಯೋ ಕಾನ್ಫರೆನ್ಸ್ ಮೂಲಕವೇ ವಿಚಾರಣೆಗೆ ಹಾಜರಾಗಲು ಸ್ಥಳೀಯ ನ್ಯಾಯಾಲಯ ಗುರುವಾರ ಅನುಮತಿ ನೀಡಿದೆ.
ಭ್ರಷ್ಟಾಚಾರ ಪ್ರಕರಣದಲ್ಲಿ ಜೈಲು ಶಿಕ್ಷೆಗೆ ಗುರಿಯಾಗಿರುವ ಶಶಿಕಲಾ ಸದಸ್ಯ ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಜೈಲಿನಲ್ಲಿದ್ದಾರೆ. ಅಲ್ಲಿಂದಲೇ ವಿಚಾರಣೆಗೆ ಹಾಜರಾಗಲು ನ್ಯಾಯಾಲಯವು ಅನುಮತಿ ನೀಡಿದೆ.
ನ್ಯಾಯಾಧೀಶ ಎ. ಝಾಕೀರ್ ಹುಸೇನ್ ಅವರು ಈ ಕುರಿತಂತೆ ವಿಚಾರಣೆ ನಡೆಸಿದ್ದು, ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆಗೆ ಹಾಜರಾಗಲು ಅನುಮತಿ ನೀಡಿದ್ದಾರೆ. ಅಲ್ಲದೆ, ವಿಡಿಯೋ ಕಾನ್ಫರೆನ್ಸ್ ನಲ್ಲಿ ಯಾವ ಭಾಷೆಯನ್ನು ಬಳಕೆ ಮಾಡುತ್ತೀರಿ ಎಂಬುದರ ಕುರಿತಂತೆ ನ್ಯಾಯಾಲಯಕ್ಕೆ ಮಾಹಿತಿ ನೀಡಿ, ನಂತರ ಪ್ರಕರಣ ಕುರಿತಂತೆ ಜೈಲು ಅಧಿಕಾರಿಗಳಿಗೆ ಮಾಹಿತಿ ತಿಳಿಸಿ ಎಂದು ತಿಳಿಸಿದ್ದಾರೆಂದು ತಿಳಿದುಬಂದಿದೆ.
ಜೆಜೆ ಟೀವಿ (ಹಾಲಿ ಸ್ಥಗಿತಗೊಂಡಿರುವ) ಪ್ರಕರಣದಲ್ಲಿ ಶಶಿಕಲಾ, ಭಾಸ್ಕರನ್ ವಿದೇಶಿ ವಿನಿಯಮ ಕಾಯ್ಗೆ ಉಲ್ಲಂಘಿಸಿದ್ದಾರೆಂದು 1995ರಲ್ಲಿ ಜಾರಿ ನಿರ್ದೇಶನಾಲಯ ಪ್ರಕರಣವನ್ನು ದಾಖಲಿಸಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


