ವಿದೇಶಿ ದೇಣಿಗೆ ವಿವರ ನೀಡಿ: ಆಪ್ ಗೆ ಗೃಹ ಸಚಿವಾಲಯದ ಪ್ರಶ್ನೆ!
ವಿದೇಶಿ ದೇಣಿಗೆ ನಿಯಂತ್ರಣ ಕಾಯಿದೆಯನ್ನು ಉಲ್ಲಂಘಿಸಿದ ಶಂಕೆ ಮೇರೆಗೆ ವಿದೇಶಿ ದೇಣಿಗೆ ವಿವರ ನೀಡುವಂತೆ ಕೇಂದ್ರ ಗೃಹ ವ್ಯವಹಾರಗಳ ಸಚಿವಾಲಯ ಆಮ್ ಆದ್ಮಿ ಪಕ್ಷಕ್ಕೆ ಸೂಚಿಸಿದೆ.

ನವದೆಹಲಿ: ವಿದೇಶಿ ದೇಣಿಗೆ ನಿಯಂತ್ರಣ ಕಾಯಿದೆಯನ್ನು ಉಲ್ಲಂಘಿಸಿದ ಶಂಕೆ ಮೇರೆಗೆ ವಿದೇಶಿ ದೇಣಿಗೆ ವಿವರ ನೀಡುವಂತೆ ಕೇಂದ್ರ ಗೃಹ ವ್ಯವಹಾರಗಳ ಸಚಿವಾಲಯ ಆಮ್ ಆದ್ಮಿ ಪಕ್ಷಕ್ಕೆ ಸೂಚಿಸಿದೆ.
ಇದೊಂದು ಸಾಮಾನ್ಯ ತನಿಖೆಯಾಗಿದ್ದು, ಆಮ್ ಆದ್ಮಿ ಪಕ್ಷದ ರೀತಿಯಂತೆಯೇ ಇತರೆ ಪಕ್ಷಗಳಿಗೂ ಇದೇ ರೀತಿ ಸೂಚನೆ ನೀಡಿಲಾಗಿದೆ. ಇದೊಂದು ಸಾಮಾನ್ಯ ತನಿಖೆಯಷ್ಟೇ. ಪಕ್ಷಗಳಿಗೆ ವಿದೇಶಿ ದೇಣಿಗೆ ವಿವರ ನೀಡುವಂತೆ ಕೇಳಿಲಾಗಿದೆ ಎಂದು ಎಂಹೆಚ್ ಎ ತಿಳಿಸಿದೆ. ಅಂತೆಯೇ ಈ ಬಗ್ಗೆ ಯಾವುದೇ ನೋಟಿಸ್ ನೀಡಿಲ್ಲ. ಆದರೆ ಆಮ್ ಆದ್ಮಿ ಪಕ್ಷದಿಂದ ಪ್ರತಿಕ್ರಿಯೆ ಬಂದ ಬಳಿಕ ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ.
ದ್ವೇಷದ ರಾಜಕಾರಣ ಎಂದು ಟೀಕಿಸಿದ ಅರವಿಂದ್ ಕೇಜ್ರಿವಾಲ್
ಇದೇ ವೇಳೆ ಕೇಂದ್ರ ಸರ್ಕಾರದ ನಡೆಯನ್ನು ಟೀಕಿಸಿರುವ ಅರವಿಂದ್ ಕೇಜ್ರಿವಾಲ್ ಅವರು, ಇದು ಕೇಂದ್ರ ಸರ್ಕಾರದ ದ್ವೇಷದ ರಾಜಕಾರಣ ಎಂದು ಬಿಂಬಿಸಿದ್ದಾರೆ. ಕೇಂದ್ರದ ಎನ್ ಡಿಎ ಸರ್ಕಾರ ಸರ್ಕಾರಿ ಸಂಸ್ಥೆಗಳನ್ನು ತನ್ನ ಕಾರ್ಯಗಳಿಗೆ ಬಳಕೆ ಮಾಡಿಕೊಳ್ಳುತ್ತಿದ್ದು, ಸರ್ಕಾರಿ ಸಂಸ್ಥೆಗಳನ್ನು ದುರುಪಯೋಗ ಪಡಿಸಿಕೊಳ್ಳುತ್ತಿದೆ ಎಂದು ಆರೋಪಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


