ದೇಶ

ಆತ್ಮಹತ್ಯೆಯನ್ನು ಲೈವ್ ಸ್ಟ್ರೀಮಿಂಗ್ ಮಾಡಲು ಯತ್ನಿಸಿದ ಮಹಿಳೆ; ಪೊಲೀಸರಿಂದ ರಕ್ಷಣೆ

ಆತ್ಮಹತ್ಯೆ ಮಾಡಿಕೊಂಡ ಯುವಕನೊಬ್ಬ ತನ್ನ ಜೀವನದ ಕೊನೆಯ ಕ್ಷಣಗಳನ್ನು ಫೇಸ್ ಬುಕ್ ನಲ್ಲಿ ಲೈವ್ ಮಾಡಿದ್ದ ಬೆನ್ನಲ್ಲೇ ಇಂಥಹದ್ದೇ ಘಟನೆಯೊಂದು ಮರುಕಳಿಸಿದೆ. ಆದರೆ ಪೊಲೀಸರ ಸಮಯಪ್ರಜ್ಞೆಯಿಂದ ಅನಾಹುತ ತಪ್ಪಿದೆ.

ಆತ್ಮಹತ್ಯೆಯನ್ನು ಲೈವ್ ಸ್ಟ್ರೀಮಿಂಗ್ ಮಾಡಲು ಯತ್ನಿಸಿದ ಮಹಿಳೆ; ಪೊಲೀಸರಿಂದ ರಕ್ಷಣೆ
Facebook
Published On :
ಮುಂಬೈ: ಆತ್ಮಹತ್ಯೆ ಮಾಡಿಕೊಂಡ ಯುವಕನೊಬ್ಬ ತನ್ನ ಜೀವನದ ಕೊನೆಯ ಕ್ಷಣಗಳನ್ನು ಫೇಸ್ ಬುಕ್ ನಲ್ಲಿ ಲೈವ್ ಮಾಡಿದ್ದ ಬೆನ್ನಲ್ಲೇ ಇಂಥಹದ್ದೇ ಘಟನೆಯೊಂದು ಮರುಕಳಿಸಿದೆ. ಆದರೆ ಪೊಲೀಸರ ಸಮಯಪ್ರಜ್ಞೆಯಿಂದ ಅನಾಹುತ ತಪ್ಪಿದೆ. 
ಪ್ರಿಯಾಂಕ ಜೆಥಾಲಾಲ್ ಮರು ಎಂಬ ಮಹಿಳೆ ಮುಂಬೈ ನ ಸ್ವೆರಿ ಎಂಬಲ್ಲಿ ನಿರ್ಮಾಣ ಹಂತದಲ್ಲಿದ್ದ ಕಟ್ಟಡದ 18 ನೇ ಮಹಡಿಯಿಂದ ಧುಮುಕಿ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸುತ್ತಿದ್ದರು. ಆತ್ಮಹತ್ಯೆಯನ್ನು ಫೇಸ್ ಬುಕ್ ನಲ್ಲಿ ಲೈವ್ ಸ್ಟ್ರೀಮಿಂಗ್ ಮಾಡಿದಾಗ ಸ್ಥಳೀಯರೊಬ್ಬರು ಪೊಲೀಸ್ ಕಂಟ್ರೋಲ್ ರೂಮ್ ಗೆ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳಕ್ಕೆ ಧಾವಿಸಿದ ಪೊಲೀಸರು ಆಕೆಯನ್ನು ಆತ್ಮಹತ್ಯೆ ಮಾಡಿಕೊಳ್ಳದಂತೆ ಮನವೊಲಿಕೆ ಮಾಡಿದ್ದಾರೆ. 
ಇಂತಹ ಪರಿಸ್ಥಿತಿಗಳನ್ನು ನಿಭಾಯಿಸಲೆಂದೇ ವಿಶೇಷ ತರಬೇತಿ ಪಡೆದಿರುವ ಇನ್ಸ್ ಪೆಕ್ಟರ್ ಶಾಲಿನಿ ಶರ್ಮಾ ಆತ್ಮಹತ್ಯೆಯನ್ನು ತಡೆಗಟ್ಟುವುದರಲ್ಲಿ ಯಶಸ್ವಿಯಾಗಿದ್ದು, ಆಸ್ಪತ್ರೆಗೆ ದಾಖಲಿಸಿದ್ದಾರೆ. ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.