ದೇಶ

ಕಪಿಲ್ ಮಿಶ್ರಾ ಆರೋಪ ಅಸಂಬದ್ಧ, ಪ್ರತಿಕ್ರಿಯೆ ಅನಗತ್ಯ: ಮನೀಷ್ ಸಿಸೋಡಿಯಾ

ಆಮ್ ಆದ್ಮಿ ಪಕ್ಷದ ಮುಖಂಡ ಹಾಗೂ ದೆಹಲಿ ಮಾಜಿ ಸಚಿವ ಕಪಿಲ್‌ ಮಿಶ್ರಾ ಅವರು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ವಿರುದ್ದ ಮಾಡಿರುವ ಲಂಚದ ಆರೋಪ ಅಸಂಬದ್ಧ ಮತ್ತು...

Published On :

ನವದೆಹಲಿ: ಆಮ್ ಆದ್ಮಿ ಪಕ್ಷದ ಮುಖಂಡ ಹಾಗೂ ದೆಹಲಿ ಮಾಜಿ ಸಚಿವ ಕಪಿಲ್‌ ಮಿಶ್ರಾ  ಅವರು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ವಿರುದ್ದ ಮಾಡಿರುವ ಲಂಚದ ಆರೋಪ ಅಸಂಬದ್ಧ ಮತ್ತು ತೀರಾ ಕೆಳಮಟ್ಟದ ಆರೋಪ ಎಂದು ಆಪ್ ಮುಖಂಡ ಮನೀಶ್ ಸಿಸೋಡಿಯಾ ಹೇಳಿದ್ದಾರೆ.

ಮಾಜಿ ಸಚಿವ ಕಪಿಲ್ ಮಿಶ್ರಾ ಅವರು, ಈ ಹಿಂದೆ ಅರವಿಂದ್ ಕೇಜ್ರಿವಾಲ್ ಅವರು ಸತ್ಯೇಂದ್ರ ಜೈನ್ ಅವರಿಂದ ಎರಡು ಕೋಟಿ ರು. ಪಡೆದಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿ ಪ್ರತಿಕ್ರಿಯೆ ನೀಡಿರುವ ಸಿಸೋಡಿಯಾ ಅವರು  "ಇಂತಹ ಆರೋಪದ  ಬಗ್ಗೆ ನಾನೇನು ಹೇಳಲಿ?. ಇದು ಅತ್ಯಂತ ಕೆಳಮಟ್ಟದ ಆರೋಪವಾಗಿದ್ದು, ಇದಕ್ಕೆ ಪ್ರತಿಕ್ರಿಯೆ ಅನಗತ್ಯ ಎಂದು ಹೇಳಿದ್ದಾರೆ.

ಅಲ್ಲದೆ ಕಪಿಲ್ ಮಿಶ್ರಾ ಅವರನ್ನು ಸಂಪುಟದಿಂದ ಕೈಬಿಟ್ಟ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಸಿಸೋಡಿಯಾ, ನೀರು ಪೂರೈಕೆಯ ವ್ಯವಸ್ಥೆಯ ವೈಫಲ್ಯದ ಹಿನ್ನೆಲೆಯಲ್ಲಿ ಮಿಶ್ರಾ ಅವರನ್ನು ಜಲ ಸಚಿವ ಸ್ಥಾನದಿಂದ ಕೆಳಗಿಳಿಸಲಾಗಿತ್ತು. ನೀರು ಪೂರೈಕೆಯ ವ್ಯವಸ್ಥೆಯ ವೈಫಲ್ಯದ ಹಲವು ಮಂದಿ ಸಚಿವರು ಅತೃಪ್ತಿಗೊಂಡಿದ್ದರು. ಈ ಕಾರಣದಿಂದಾಗಿ ಮುಖ್ಯ ಮಂತ್ರಿ ಕೇಜ್ರಿವಾಲ್‌ ಸಂಪುಟ ಪುನರ್ರಚನೆ ಮಾಡಲು ಬಯಸಿದ್ದರು ಎಂದು ಸ್ಪಷ್ಟನೆ  ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.