ಅರವಿಂದ್ ಕೇಜ್ರಿವಾಲ್ ವಿರುದ್ಧ ಲಂಚ ಆರೋಪ: ದೆಹಲಿ ಸಿಎಂ ರಾಜಿನಾಮೆಗೆ ಆಗ್ರಹಿಸಿದ ಬಿಜೆಪಿ
ದೆಹಲಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಅವರಿಂದ 2 ಕೋಟಿ ಲಂಚ ಪಡೆದ ಆರೋಪಕ್ಕೆ ತುತ್ತಾಗಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಕೂಡಲೇ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಬೇಕು ಎಂದು ಬಿಜೆಪಿ ಪಕ್ಷ ಆಗ್ರಹಿಸಿದೆ.

ನವದೆಹಲಿ: ದೆಹಲಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಅವರಿಂದ 2 ಕೋಟಿ ಲಂಚ ಪಡೆದ ಆರೋಪಕ್ಕೆ ತುತ್ತಾಗಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಕೂಡಲೇ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಬೇಕು ಎಂದು ಬಿಜೆಪಿ ಪಕ್ಷ ಆಗ್ರಹಿಸಿದೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ದೆಹಲಿ ಬಿಜೆಪಿ ಘಟಕದ ಅಧ್ಯಕ್ಷ ಮನೋಜ್ ತಿವಾರಿ ಅವರು, ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರು ನೈತಿಕ ಹೊಣೆ ಹೊತ್ತು ರಾಜಿನಾಮೆ ನೀಡಬೇಕು ಎಂದು ಆಗ್ರಹಿಸಿದ್ದಾರೆ. ದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಮನೋಜ್ ತಿವಾರಿ, ಈ ಹಿಂದೆಯೇ ಸಾಕಷ್ಟು ಬಾರಿ ನಾನು ಹೇಳಿದ್ದೆ. ಅರವಿಂದ್ ಕೇಜ್ರಿವಾಲ್ ಅವರು ನೇರವಾಗಿ ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ ಎಂದು. ಇದೀಗ ಅವರದ್ದೇ ಪಕ್ಷದ ಸಚಿವರೊಬ್ಬರು ಅವರ ವಿರುದ್ಧ ನೇರವಾಗಿ ಆರೋಪಿಸಿದ್ದಾರೆ.ಹೀಗಾಗಿ ಕೂಡಲೇ ಸಿಎಂ ಕೇಜ್ರಿವಾಲ್ ನೈತಿಕ ಹೊಣೆ ಹೊತ್ತು ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಕೂಡಲೇ ಕೇಂದ್ರ ಭ್ರಷ್ಟಾಚಾರ ನಿಗ್ರಹ ದಳ ಹಾಗೂ ಸಿಬಿಐ ಈ ಬಗ್ಗೆ ಕ್ರಮ ಕೈಗೊಂಡು ತನಿಖೆ ನಡೆಸಬೇಕು. ಕೇಜ್ರಿವಾಲ್ ವಿರುದ್ಧ ಎಫ್ ಐಆರ್ ದಾಖಲಿಸಿ ತನಿಖೆ ನಡೆಸಬೇಕು ಎಂದು ಹೇಳಿದ್ದಾರೆ.
ಕೇಜ್ರಿವಾಲ್ ವಿರುದ್ಧ ಲಂಚ ಆರೋಪ ಸತ್ಯಕ್ಕೆ ದೂರವಾದದ್ದು: ಕುಮಾರ್ ವಿಶ್ವಾಸ್
ಇನ್ನು ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಆಪ್ ಮುಖಂಡ ಕುಮಾರ್ ವಿಶ್ವಾಸ್ ಅವರು, ಕೇಜ್ರಿವಾಲ್ ಲಂಚ ಪಡೆದಿದ್ದಾರೆ ಎಂಬುದನ್ನು ಅವರ ಶತ್ರುಗಳು ಕೂಡ ನಂಬುವುದಿಲ್ಲ. ಅಂತಹುದರಲ್ಲಿ ಈ ಆರೋಪ ನಿರಾಧಾರವಾದದ್ದು ಎಂದು ಕೇಜ್ರಿವಾಲ್ ಪರ ಬ್ಯಾಟ್ ಬೀಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


