ದೇಶ

ಕಾಶ್ಮೀರ ಹಿಂಸಾಚಾರದಲ್ಲಿ ಪಾಕಿಸ್ತಾನದ ಕೈವಾಡ ಬಯಲು: ಬಿಜೆಪಿ

ಕಣಿವೆ ರಾಜ್ಯ ಕಾಶ್ಮೀರದಲ್ಲಿ ಅತಿರೇಕದ ಭಯೋತ್ಪಾದಕ ಚಟುವಟಿಕೆಗಳ ಹಿಂದೆ ಪಾಕಿಸ್ತಾನವೇ....

ಕಾಶ್ಮೀರ ಹಿಂಸಾಚಾರದಲ್ಲಿ ಪಾಕಿಸ್ತಾನದ ಕೈವಾಡ ಬಯಲು: ಬಿಜೆಪಿ
ಸಾಂದರ್ಭಿಕ ಚಿತ್ರ
Published On :
ನವದೆಹಲಿ: ಕಣಿವೆ ರಾಜ್ಯ ಕಾಶ್ಮೀರದಲ್ಲಿ ಅತಿರೇಕದ ಭಯೋತ್ಪಾದಕ ಚಟುವಟಿಕೆಗಳ ಹಿಂದೆ ಪಾಕಿಸ್ತಾನವೇ ಮುಖ್ಯ  ಕಾರಣವಾಗಿದೆ ಎಂಬ ವಾಸ್ತವವನ್ನು ಅರಿತುಕೊಳ್ಳುವ ಸಮಯ ಬಂದಿದೆ ಎಂದು ಭಾರತೀಯ ಜನತಾ ಪಕ್ಷ ಹೇಳಿದೆ.
ಜಮ್ಮು ಮತ್ತು ಕಾಶ್ಮೀರದ ಬಗ್ಗೆ ವಾಸ್ತವ ಸತ್ಯ ಬೇರೆಯೇ ಆಗಿದ್ದು ಅದನ್ನು ಜಗತ್ತಿಗೆ ಸಾರಬೇಕಾಗಿದೆ. ಸತ್ಯವನ್ನು ಅರಿತು ಕಣಿವೆ ರಾಜ್ಯದ ಜನರ ಪರಿಸ್ಥಿತಿಯನ್ನು ಸುಧಾರಿಸಲು ಪ್ರಯತ್ನಿಸಬೇಕಾಗಿದೆ ಎಂದು ಬಿಜೆಪಿ ನಾಯಕ ಸುದೇಶ್ ವರ್ಮ ಎಎನ್ಐ ಸುದ್ದಿ ಸಂಸ್ಥೆ ಜೊತೆ ಮಾತನಾಡುತ್ತಾ ಹೇಳಿದರು. ಕಾಶ್ಮೀರದಲ್ಲಿ ಸಮಸ್ಯೆಯನ್ನು ಸೃಷ್ಟಿಸುವುದೇ ಪಾಕಿಸ್ತಾನದ ಏಕೈಕ ಉದ್ದೇಶವಾಗಿದ್ದು ಪ್ರತಿಯೊಬ್ಬರಿಗೂ ಅದು ತಿಳಿದಿದೆ ಎಂದರು.
ಹುಸಿ ಉದಾರಾವಾದಿಗಳು ಸೇರಿದಂತೆ ಪ್ರತಿಯೊಬ್ಬರೂ ವಾಸ್ತವತೆಯನ್ನು ಅರಿತುಕೊಳ್ಳುವ ಸಮಯವಿದು. ಪಾಕಿಸ್ತಾನದ ತಪ್ಪು ಏನೂ ಇಲ್ಲವೆಂದು ವಾದಿಸಿ ಭಾರತೀಯ ಭದ್ರತಾ ಪಡೆಗಳ ವೈಫಲ್ಯವೆಂದು ಟೀಕಿಸುವವರು ಇದೀಗ ಸತ್ಯವನ್ನು ತಿಳಿದುಕೊಳ್ಳಬೇಕಾಗಿದೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.