ಮುಂಗಾರು ವೈಫಲ್ಯದ ಸಾಧ್ಯತೆಯನ್ನು ಎದುರಿಸಲು ಸಜ್ಜಾಗಿ: ರಾಜ್ಯಗಳಿಗೆ ಕೇಂದ್ರ ಕೃಷಿ ಸಚಿವರ ಪತ್ರ
ಅವಧಿಗೆ ಸರಿಯಾಗಿ ಮುಂಗಾರು ಮಳೆ ಬರದಿದ್ದರೆ ಪರಿಸ್ಥಿತಿಯನ್ನು ನಿಭಾಯಿಸಲು ತೆಗೆದುಕೊಳ್ಳುವ ಕ್ರಮ....

Published On :
ನವದೆಹಲಿ: ಅವಧಿಗೆ ಸರಿಯಾಗಿ ಮುಂಗಾರು ಮಳೆ ಬರದಿದ್ದರೆ ಪರಿಸ್ಥಿತಿಯನ್ನು ನಿಭಾಯಿಸಲು ತೆಗೆದುಕೊಳ್ಳುವ ಕ್ರಮಗಳ ಬಗ್ಗೆ ಪರಾಮರ್ಶೆ ನಡೆಸುವಂತೆ ಕೇಂದ್ರ ಕೃಷಿ ಖಾತೆ ಸಚಿವ ರಾಧಾ ಮೋಹನ್ ಸಿಂಗ್ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದಾರೆ.
ಕೇಂದ್ರ ಸರ್ಕಾರ ಪ್ರಾಯೋಜಿತ ಯೋಜನೆಗಳ ಅಡಿಯಲ್ಲಿ ಶೇಕಡಾ 25ರಷ್ಟು ಹಣವನ್ನು ಕೇಂದ್ರಾಡಳಿತ ಪ್ರದೇಶಗಳು ಮತ್ತು ರಾಜ್ಯ ಸರ್ಕಾರಗಳಿಗೆ ನೀಡಲು ಕೇಂದ್ರ ಸರ್ಕಾರ ಅವಕಾಶ ನೀಡುತ್ತದೆ. ಇದನ್ನು ನೈಸರ್ಗಿಕ ವಿಕೋಪಗಳ ಪರಿಣಾಮಗಳನ್ನು ಎದುರಿಸಲು ಬಳಸಿಕೊಳ್ಳಬಹುದು ಎಂದು ಅವರು ಹೇಳಿದರು.
ಬರಗಾಲ ಸಂದರ್ಭದಲ್ಲಿ ರೈತರು ಅನುಭವಿಸಿದ ನಷ್ಟವನ್ನು ಭರಿಸಲು ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯನ್ನು ವಿಸ್ತರಿಸಲು ಒತ್ತು ನೀಡಬೇಕು. ಹವಾಮಾನ ಬದಲಾವಣೆಯ ಸನ್ನಿವೇಶಗಳನ್ನು ಎದುರಿಸಲು ಸರ್ಕಾರ ಕೈಗೊಂಡಿರುವ ಕ್ರಮಗಳನ್ನು ಪರಾಮರ್ಶೆ ನಡೆಸುವಂತೆ ಅವರು ಮುಖ್ಯ ಮಂತ್ರಿಗಳಿಗೆ ಬರೆದ ಪತ್ರದಲ್ಲಿ ಒತ್ತಾಯಿಸಿದ್ದಾರೆ.
ಯಾವುದೇ ಪರಿಸ್ಥಿತಿ ಎದುರಿಸಲೂ ರಾಜ್ಯ ಸರ್ಕಾರಗಳು ಸಿದ್ಧವಾಗಿರಬೇಕು. ಭಾರತೀಯ ಹವಾಮಾನ ಇಲಾಖೆ ಖಾರಿಫ್ ಋತುವಿನಲ್ಲಿ ನೈರುತ್ಯ ಮುಂಗಾರು ಶೇಕಡಾ 96ರಷ್ಟು ಮಳೆ ಬೀಳಬಹುದೆಂದು ಮುನ್ಸೂಚನೆ ನೀಡಿದೆ ಎಂದು ಪತ್ರದಲ್ಲಿ ಕೇಂದ್ರ ಸಚಿವರು ವಿವರಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
letterಪತ್ರವೈಫಲ್ಯchief ministersfailureRadha Mohan Singhರಾಧಾ ಮೋಹನ್ ಸಿಂಗ್monsoonಮಾನ್ಸೂನ್ಮುಖ್ಯ ಮಂತ್ರಿಗಳು
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


