ಸ್ತ್ರೀ ಜನನಾಂಗದ ಊನಗೊಳಿಸುವಿಕೆಯ ಸಮಸ್ಯೆ: ಕೇಂದ್ರದಿಂದ ಉತ್ತರ ಕೇಳಿದ ಸುಪ್ರೀಂ ಕೋರ್ಟ್
ಮುಸಲ್ಮಾನರ ಬೊಹ್ರಾ ಸಮುದಾಯದಲ್ಲಿ ಸ್ತ್ರೀ ಜನನಾಂಗದ ಊನಗೊಳಿಸುವಿಕೆ ಸಂಪ್ರದಾಯದ ಬಗ್ಗೆ...

Published On :
ನವದೆಹಲಿ: ಮುಸಲ್ಮಾನರ ಬೊಹ್ರಾ ಸಮುದಾಯದಲ್ಲಿ ಸ್ತ್ರೀ ಜನನಾಂಗದ ಊನಗೊಳಿಸುವಿಕೆ ಸಂಪ್ರದಾಯದ ಬಗ್ಗೆ ವಿಸ್ತೃತ ಪ್ರತಿಕ್ರಿಯೆ ನೀಡುವಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ಸುಪ್ರೀಂ ಕೋರ್ಟ್ ಸೋಮವಾರ ನೊಟೀಸ್ ಜಾರಿ ಮಾಡಿದೆ.
ಮುಖ್ಯ ನ್ಯಾಯಮೂರ್ತಿ ಜಗದೀಶ್ ಸಿಂಗ್ ಖೆಹರ್ ನೇತೃತ್ವದ ನ್ಯಾಯಪೀಠ, ಮಹಾರಾಷ್ಟ್ರ, ದೆಹಲಿ, ಗುಜರಾತ್ ಮತ್ತು ರಾಜಸ್ತಾನಗಳಿಗೆ ನೊಟೀಸ್ ಜಾರಿ ಮಾಡಿದೆ.
ಸ್ತ್ರೀ ಜನನಾಂಗದ ಊನಗೊಳಿಸುವಿಕೆ ಸಂಪ್ರದಾಯದಂತೆ ಮಹಿಳೆಯರ ಕ್ಲೋಟೋರಲ್ ಹುಡ್ ನಿಂದ ಚರ್ಮವನ್ನು ತೆಗೆಯಲಾಗುತ್ತದೆ. ಅದು ಏಳನೇ ವರ್ಷದಲ್ಲಿ ಅಥವಾ 6ರಿಂದ 12ನೇ ವರ್ಷದೊಳಗೆ ಆಗಿರುತ್ತದೆ.
ಆದರೆ ವಿಶ್ವ ಆರೋಗ್ಯ ಸಂಸ್ಥೆ ಪ್ರಕಾರ, ಇದರಿಂದ ಯಾವುದೇ ಆರೋಗ್ಯ ಪ್ರಯೋಜನಗಳಿಲ್ಲ. ಮತ್ತು ಇದರಿಂದ ಅನೇಕ ತಕ್ಷಣ ಮತ್ತು ಶಾಶ್ವತ ಆರೋಗ್ಯ ಸಮಸ್ಯೆಯುಂಟಾಗುತ್ತದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


