ದೇಶ

ಕೇಜ್ರಿವಾಲ್ ಭ್ರಷ್ಟಾಚಾರ ಸಾಬೀತಾದರೆ, ರಾಜಿನಾಮೆಗೆ ಒತ್ತಾಯಿಸಿ ನಿರಶನ: ಅಣ್ಣಾ ಹಜಾರೆ

ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ವಿರುದ್ಧದ ಭ್ರಷ್ಟಾಚಾರದ ಆರೋಪಗಳು ಸಾಬೀತಾದರೆ ಸಿಎಂ ಸ್ಥಾನಕ್ಕೆ....

ಕೇಜ್ರಿವಾಲ್ ಭ್ರಷ್ಟಾಚಾರ ಸಾಬೀತಾದರೆ, ರಾಜಿನಾಮೆಗೆ ಒತ್ತಾಯಿಸಿ ನಿರಶನ: ಅಣ್ಣಾ ಹಜಾರೆ
ಅಣ್ಣಾ ಹಜಾರೆ
Published On :
ಮುಂಬೈ: ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ವಿರುದ್ಧದ ಭ್ರಷ್ಟಾಚಾರದ ಆರೋಪಗಳು ಸಾಬೀತಾದರೆ ಸಿಎಂ ಸ್ಥಾನಕ್ಕೆ ರಾಜಿನಾಮೆ ನೀಡುವಂತೆ ಒತ್ತಾಯಿಸಿ ಉಪವಾಸ ಸತ್ಯಾಗ್ರಹ ನಡೆಸುವುದಾಗಿ ಕೇಜ್ರಿವಾಲ್‌ ಅವರ ಗುರು ಹಾಗೂ ಭ್ರಷ್ಟಾಚಾರ ವಿರೋಧಿ ನಾಯಕ ಅಣ್ಣಾ ಹಜಾರೆ ಅವರು ಮಂಗಳವಾರ ಹೇಳಿದ್ದಾರೆ. 
ಈ ಮುಂಚೆ ಕೇಜ್ರಿವಾಲ್‌ ಸಂಪುಟದಿಂದ ವಜಾಗೊಂಡ ಕಪಿಲ್‌ ಮಿಶ್ರಾ ಅವರು ದೆಹಲಿ ಸಿಎಂ ವಿರುದ್ಧ ಭ್ರಷ್ಟಾಚಾರದ ಆರೋಪದಿಂದ 'ದುಃಖೀತನಾಗಿದ್ದೇನೆ' ಎಂದಷ್ಟೇ ಹೇಳಿದ್ದ ಹಜಾರೆ ಅವರು, ಸಚಿವ ಸ್ಥಾನದಿಂದ ವಜಾಗೊಂಡ ಬಳಿಕವೇ ಕಪಿಲ್‌ ಮಿಶ್ರಾ ಅವರ ಕೇಜ್ರಿವಾಲ್‌ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿರುವುದನ್ನು ಗಮನಿಸಬೇಕು ಎಂದು ಹೇಳಿದ್ದರು.
ಈಗ ದೆಹಲಿ ಸಿಎಂ ವಿರುದ್ಧ ಆರೋಪಗಳನ್ನು ಗಂಭೀರವಾಗಿ ಪರಿಗಣಿಸಿರುವ ಅಣ್ಣಾ ಹಜಾರೆ ಅವರು, ಕೇಜ್ರಿವಾಲ್‌ ವಿರುದ್ಧದ ಆರೋಪಗಳ ಬಗ್ಗೆ ಕೂಲಂಕಷ ತನಿಖೆ ನಡೆಯಬೇಕು. ಒಂದೊಮ್ಮೆ ಆತ ಭ್ರಷ್ಟನೆಂದು ಸಾಬೀತಾದರೆ ಆತನ ಪದುಚ್ಯತಿಯನ್ನು ಆಗ್ರಹಿಸಿ ನಾನು ಜಂತರ್‌ ಮಂತರ್‌ನಲ್ಲಿ ಉಪವಾಸ ಸತ್ಯಾಗ್ರಹ ಕೈಗೊಳ್ಳುತ್ತೇನೆ ಎಂದು ಗುಡುಗಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.