ದೇಶ

ರವೀಂದ್ರನಾಥ್ ಠಾಗೋರ್ ಜನ್ಮದಿನ: ಗೌರವ ಸಲ್ಲಿಸಿದ ಪ್ರಧಾನಿ ಮೋದಿ, ರಾಷ್ಟ್ರಪತಿ ಪ್ರಣಬ್ ಮುಖರ್ಜಿ

ನೊಬೆಲ್ ಪ್ರಶಸ್ತಿ ವಿಜೇತ, ರಾಷ್ಟ್ರಕವಿ ರವೀಂದ್ರನಾಥ್ ಠಾಗೋರ್ ಅವರ 156ನೇ ಜನ್ಮದಿನ ಹಿನ್ನಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ರಾಷ್ಟ್ರಪತಿ ಪ್ರಣಬ್ ಮುಖರ್ಜಿಯವರು...

ರವೀಂದ್ರನಾಥ್ ಠಾಗೋರ್ ಜನ್ಮದಿನ: ಗೌರವ ಸಲ್ಲಿಸಿದ ಪ್ರಧಾನಿ ಮೋದಿ, ರಾಷ್ಟ್ರಪತಿ ಪ್ರಣಬ್ ಮುಖರ್ಜಿ
ರವೀಂದ್ರನಾಥ್ ಠಾಗೋರ್
Published On :
ನವದೆಹಲಿ: ನೊಬೆಲ್ ಪ್ರಶಸ್ತಿ ವಿಜೇತ, ರಾಷ್ಟ್ರಕವಿ ರವೀಂದ್ರನಾಥ್ ಠಾಗೋರ್ ಅವರ 156ನೇ ಜನ್ಮದಿನ ಹಿನ್ನಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ರಾಷ್ಟ್ರಪತಿ ಪ್ರಣಬ್ ಮುಖರ್ಜಿಯವರು ಗೌರವ ವಂದನೆಗಳನ್ನು ಸಲ್ಲಿಸಿದ್ದಾರೆ. 
ಗುರೂಜಿ ಠಾಗೋರ್ ಅವರ ಜನ್ಮದಿನ ಹಿನ್ನಲೆಯಲ್ಲಿ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ರಾಷ್ಟ್ರಪತಿ ಪ್ರಣಬ್ ಮುಖರ್ಜಿಯವರು, ಭಾರತ ಕುರಿತಂತೆ ಇಡೀ ವಿಶ್ವಕ್ಕೆ ಅಲ್ಪ ಪ್ರಮಾಣದ ಮಾಹಿತಿ ಮಾತ್ರ ಇತ್ತು. ಅಂತಹ ಸಂದರ್ಭದಲ್ಲಿ ಗುರುದೇವ ದೇಶದ ಅತ್ಯುತ್ತಮ ರಾಯಭಾರಿಯಾಗಿದ್ದರು. ಠಾಗೋರ್ ಅವರು ಅಂತರರಾಷ್ಟ್ರೀಯತೆಯನ್ನು ಉತ್ತೇಜಿಸಿದ್ದರು. ಠಾಗೋರ್ ಅವರ ಜನ್ಮದಿನಾಚರಣೆಯಾದ ಇಂದು ಎಕತೆಯಿಂದ ಅವರ ಆಲೋಚನೆ, ಮಾನವೀಯತೆಗಳನ್ನು ಸ್ಫೂರ್ತಿಯಾಗಿ ಸ್ವೀಕರಿಸೋಣ ಎಂದು ಹೇಳಿದ್ದಾರೆ. 
ಇದರಂತೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರೂ ಕೂಡ ಟ್ವೀಟ್ ಮಾಡಿದ್ದು, ಗುರದೇವ ಠಾಗೂರ್ ಅವರ ಪ್ರಭಾವಶಾಲಿ ಆಲೋಚನೆಗಳು, ಸ್ವಾತಂತ್ರ್ಯ ಹೋರಾಟದ ವೇಳೆ ಅವರು ನೀಡಿದ್ದ ಕೊಡೆಗುಗಳನ್ನು ದೇಶ ಎಂದಿಗೂ ನೆನೆಯುತ್ತದೆ. ಠಾಗೋರ್ ಅವರ ಜನ್ಮದಿನಾಚರಣೆಯಾದ ಇಂದು ಅವರಿಗೆ ಗೌರವ ನಮನಗಳನ್ನು ಸಲ್ಲಿಸುತ್ತಿದ್ದೇನೆಂದು ತಿಳಿಸಿದ್ದಾರೆ. 
1861ರಲ್ಲಿ ಜನಿಸಿದ್ದ ಠಾಗೋರ್ ಅವರು ಆಗಸ್ಟ್ 7 1941ರಲ್ಲಿ ಕೊನೆಯುಸಿರೆಳೆದಿದ್ದರು. ಗುರದೇವ ಎಂಬ ಅಂಕಿತನಾಮದಲ್ಲಿ ಬರೆಯುತ್ತಿದ್ದ ಅವರು ಮಹಾ ವಿದ್ವಾಂಸ, ಕವಿಗಳಾಗಿ, ಕಾದಂಬರಿಕಾರರಾಗಿ, ಸಂಗೀತಕಾರರಾಗಿ ಮತ್ತು ನಾಟಕರಾಗಿ ಗುರ್ತಿಸಿಕೊಂಡಿದ್ದಾರೆ. ಗೀತಾಂಜಲಿ ಕಾವ್ಯಕ್ಕೆ 1913ರಲ್ಲಿ ನೊಬೆಲ್ ಸಾಹಿತ್ಯ ಪ್ರಶಸ್ತಿ ದೊರಕಿತ್ತು. ಈ ಮೂಲಕ ಅವರು ನೊಬೆಲ್ ಪ್ರಶಸ್ತಿ ಪುರಸ್ಕೃತರಾದ ಏಷ್ಯಾದ ಮೊದಲಿಗರು ಎಂಬ ಹೆಗ್ಗಳಿಕಗೆ ಪಾತ್ರರಾಗಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.