ಜುಲೈ 10ರಂದು ವಿಜಯ್ ಮಲ್ಯ ಕೋರ್ಟ್ ಗೆ ಹಾಜರಾಗುವ ಬಗ್ಗೆ ಗೃಹ ಸಚಿವಾಲಯ ಖಚಿತಪಡಿಸಲಿ: ಸುಪ್ರೀಂ
ಮದ್ಯದ ದೊರೆ ವಿಜಯ್ ಮಲ್ಯ ಅವರಿಗೆ ನ್ಯಾಯಾಂಗ ನಿಂದನೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಶಿಕ್ಷೆಯ ಪ್ರಮಾಣವನ್ನು...

Published On :
ನವದೆಹಲಿ: ಮದ್ಯದ ದೊರೆ ವಿಜಯ್ ಮಲ್ಯ ಅವರಿಗೆ ನ್ಯಾಯಾಂಗ ನಿಂದನೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಶಿಕ್ಷೆಯ ಪ್ರಮಾಣವನ್ನು ನಿಗದಿಪಡಿಸಲು ಅವರು ಜುಲೈ 10ರಂದು ನ್ಯಾಯಾಲಯದ ಮುಂದೆ ಹಾಜರಾಗುವ ಕುರಿತು ಖಚಿತಪಡಿಸುವಂತೆ ಸುಪ್ರೀಂ ಕೋರ್ಟ್ ಕೇಂದ್ರ ಗೃಹ ಸಚಿವಾಲಯಕ್ಕೆ ಹೇಳಿದೆ.
ತನ್ನ ಆಸ್ತಿಯನ್ನು ಸರಿಯಾಗಿ ಬಹಿರಂಗಪಡಿಸದೆ ಮತ್ತು ನ್ಯಾಯಾಲಯದ ಆದೇಶವನ್ನು ಸರಿಯಾಗಿ ಪಾಲಿಸದಿರುವ ಮಲ್ಯ ಅವರನ್ನು ನ್ಯಾಯಾಂಗ ನಿಂದನೆ ಆರೋಪದಡಿ ತಪ್ಪಿತಸ್ಥ ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿತ್ತು.
ಪ್ರಸ್ತುತ ಇಂಗ್ಲೆಂಡಿನಲ್ಲಿ ನೆಲೆಸಿರುವ ಮಲ್ಯ ಅವರನ್ನು ಗಡೀಪಾರು ಮಾಡುವಂತೆ ಭಾರತ ಇತ್ತೀಚೆಗೆ ಬ್ರಿಟನ್ ಗೆ ಮನವಿ ಮಾಡಿತ್ತು. ಕಿಂಗ್ ಫಿಶರ್ ಏರ್ ಲೈನ್ಸ್ ವಹಿವಾಟಿನಲ್ಲಿ ಬ್ಯಾಂಕಿಗೆ 9,000 ಕೋಟಿ ರೂಪಾಯಿಗೂ ಅಧಿಕ ಸಾಲವನ್ನು ವಂಚನೆ ಮಾಡಿದ ಆರೋಪವನ್ನು ಮಲ್ ಎದುರಿಸುತ್ತಿದ್ದಾರೆ.
ಮುಂದಿನ ಜುಲೈ 10ರಂದು ನ್ಯಾಯಾಲಯದ ಮುಂದೆ ವಿಚಾರಣೆಗೆ ವಿಜಯ್ ಮಲ್ಯ ಹಾಜರಾಗುತ್ತಾರೆಂದು ಗೃಹ ಸಚಿವಾಲಯ ಭರವಸೆ ನೀಡಬೇಕು. ತೀರ್ಪಿನ ಪ್ರತಿಯನ್ನು ಗೃಹ ಸಚಿವಾಲಯದ ಅಂಗೀಕಾರಕ್ಕೆ ಕಳುಹಿಸಲಾಗಿದೆ ಎಂದು ನ್ಯಾಯಮೂರ್ತಿ ಆದರ್ಶ್ ಕುಮಾರ್ ಗೋಯೆಲ್ ಮತ್ತು ಉದಯ್ ಉಮೇಶ್ ಲಲಿತ್ ಅವರನ್ನೊಳಗೊಂಡ ನ್ಯಾಯಪೀಠ ಹೇಳಿದೆ.
ನ್ಯಾಯಾಂಗ ನಿಂದನೆ ಆರೋಪದಡಿ ಶಿಕ್ಷೆಗೊಳಗಾದವರಿಗೆ 6 ತಿಂಗಳವರೆಗೆ ಜೈಲು ಶಿಕ್ಷೆ ಮತ್ತು 2,000 ರೂಪಾಯಿ ದಂಡ ಅಥವಾ ಎರಡೂ ವಿಧಿಸುವ ಸಾಧ್ಯತೆಯಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
supreme courtಸುಪ್ರೀಂ ಕೋರ್ಟ್Vijay Mallyaವಿಜಯ್ ಮಲ್ಯHome Ministryಗೃಹ ಸಚಿವಾಲಯನ್ಯಾಯಾಂಗ ನಿಂದನೆContempt of court
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


