ಉಪವಾಸ ಸತ್ಯಾಗ್ರಹ ಆರಂಭಿಸಿದ ಕಪಿಲ್ ಮಿಶ್ರಾ: ಆಪ್ ನಾಯಕರ ವಿದೇಶಿ ಪ್ರವಾಸ ಮಾಹಿತಿ ನೀಡುವಂತೆ ಆಗ್ರಹ
ಆಮ್ ಆದ್ಮಿ ಪಕ್ಷದ ಉಚ್ಛಾಟಿತ ಸಚಿವ ಕಪಿಲ್ ಮಿಶ್ರಾ ಅವರು ಉಪವಾಸ ಸತ್ಯಾಗ್ರಹವನ್ನು ಆರಂಭಿಸಿದ್ದು, ಆಪ್ ನಾಯಕರು ವಿದೇಶಿ ಪ್ರವಾಸ ಕುರಿತ ಮಾಹಿತಿ ನೀಡುವಂತೆ...

Published On :
ನವದೆಹಲಿ: ಆಮ್ ಆದ್ಮಿ ಪಕ್ಷದ ಉಚ್ಛಾಟಿತ ಸಚಿವ ಕಪಿಲ್ ಮಿಶ್ರಾ ಅವರು ಉಪವಾಸ ಸತ್ಯಾಗ್ರಹವನ್ನು ಆರಂಭಿಸಿದ್ದು, ಆಪ್ ನಾಯಕರು ವಿದೇಶಿ ಪ್ರವಾಸ ಕುರಿತ ಮಾಹಿತಿ ನೀಡುವಂತೆ ಬುಧವಾರ ಆಗ್ರಹಿಸಿದ್ದಾರೆ.
ಉಪವಾಸ ಸತ್ಯಾಗ್ರಹ ಆರಂಭ ಮಾಡಿರುವ ಕಪಿಲ್ ಮಿಶ್ರಾ ಅವರು ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ಆಮ್ ಆದ್ಮಿ ಪಕ್ಷದ ನಾಯಕರು ಈ ವರೆಗೂ ನಡೆಸಿದ್ದ ಅಂತರಾಷ್ಟ್ರೀಯ ಪ್ರವಾಸದ ಖರ್ಚು ವೆಚ್ಚಗಳ ಕುರಿತ ಮಾಹಿತಿಯನ್ನು ಬಹಿರಂಗ ಪಡಿಸುವಂತೆ ಆಗ್ರಹಿಸಿ ಈ ಸತ್ಯಾಗ್ರಹ ಕುಳಿತಿದ್ದೇನೆಂದು ಹೇಳಿದ್ದಾರೆ.
ಧರಣಿಯಲ್ಲ, ಸತ್ಯಾಗ್ರಹ. ಸತ್ಯೇಂದ್ರ ಜೇನ್ ಸೇರಿದಂತೆ ಮತ್ತೈವರು ನಾಯಕರ ವಿದೇಶಿ ಪ್ರವಾಸದ ಕುರಿತಂತೆ ಮಾಹಿತಿ ನೀಡುವಂತೆ ಆಗ್ರಹಿಸಿ ಈ ಸತ್ಯಾಗ್ರಹವನ್ನು ನಡೆಸುತ್ತಿದ್ದೇನೆ. ಈ ಮೂಲಕ ದೆಹಲಿ ಮುಖ್ಯಮಂತ್ರಿ ಕೇಜ್ರಿವಾಲ್ ಅವರಿಗೆ ಸಂದೇಶವನ್ನು ರವಾನಿಸುತ್ತಿದ್ದೇನೆಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


