ತಮಿಳುನಾಡು: ಯುವಕನ ರುಂಡ ಕಡಿದು, ಪೊಲೀಸ್ ಠಾಣೆಗೆಸೆದ ದುಷ್ಕರ್ಮಿಗಳು
17 ವರ್ಷದ ಯುವಕನೊಬ್ಬನ ಮೇಲೆ ಬರ್ಬರ ದಾಳಿ ನಡೆಸಿರುವ ದುಷ್ಕರ್ಮಿಗಳ ತಂಡವೊಂದು ಆತನ ತಲೆಯನ್ನು ಕತ್ತರಿಸಿ ಪೊಲೀಸ್ ಠಾಣೆಗೆ ಎಸೆದಿರುವ ಘಟನೆಯೊಂದು...

Published On :
ಕುಡಲೂರು: 17 ವರ್ಷದ ಯುವಕನೊಬ್ಬನ ಮೇಲೆ ಬರ್ಬರ ದಾಳಿ ನಡೆಸಿರುವ ದುಷ್ಕರ್ಮಿಗಳ ತಂಡವೊಂದು ಆತನ ತಲೆಯನ್ನು ಕತ್ತರಿಸಿ ಪೊಲೀಸ್ ಠಾಣೆಗೆ ಎಸೆದಿರುವ ಘಟನೆಯೊಂದು ತಮಿಳುನಾಡಿನಲ್ಲಿ ನಡೆದಿದೆ.
ದ್ವಿಚಕ್ರ ವಾಹನಗಳಲ್ಲಿ ಬಂದಿರುವ ದುಷ್ಕರ್ಮಿಗಳ ತಂಡ ಪೊಲೀಸ್ ಠಾಣೆಯೆದುರು ಬೈಕ್ ನಿಲ್ಲಿಸಿ ಯುವಕನ ತಲೆಯನ್ನು ಎಸೆದು ಪರಾರಿಯಾಗಿರುವುದು ಸ್ಥಳೀಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಹಳೇ ದ್ವೇಷದ ಹಿನ್ನಲೆಯಲ್ಲಿ ಪುದುಚೇರಿಯಲ್ಲಿರುವ ಕೆಲ ದುಷ್ಕರ್ಮಿಗಳು ಯುವಕನನ್ನು ಬರ್ಬರವಾಗಿ ಹತ್ಯೆಮಾಡಿದ್ದಾರೆಂದು ಪ್ರಾಥಮಿಕ ತನಿಖೆ ವೇಳೆ ತಿಳಿದುಬಂದಿದೆ.
ಯುವಕನನ್ನು ಹತ್ಯೆ ಮಾಡಿದ ಬಳಿಕ ಆತನ ತಲೆಯನ್ನು ಬ್ಯಾಗ್ ವೊಂದರಲ್ಲಿ ಹಾಕಿಕೊಂಡು ದ್ವಿಚಕ್ರ ವಾಹನಗಳಲ್ಲಿ ಬಂದಿರುವ ದುಷ್ಕರ್ಮಿಗಳ ತಂಡ ಪೊಲೀಸ್ ಠಾಣೆಯಲ್ಲಿ ತಲೆಯನ್ನು ಎಸೆದು ಹೋಗಿದ್ದಾರೆ. ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲನೆ ನಡೆಸಿದ ಪೊಲೀಸರು, ಠಾಣೆಯಿಂದ 3 ಕಿ.ಮೀ. ದೂರದಲ್ಲಿರುವ ಕೊಳವೊಂದರಲ್ಲಿ ಯುವಕನ ದೇಹವನ್ನು ಪತ್ತೆಹಚ್ಚಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


