2007ರ ದಂಗೆ ಪ್ರಕರಣ; ಯೋಗಿ ವಿರುದ್ಧ ಕಾನೂನು ಕ್ರಮ ಇಲ್ಲ: ಹೈಕೋರ್ಟ್ ಗೆ ಉ.ಸರ್ಕಾರ
ದಶಕದ ಹಿಂದೆ ನಡೆದ ಗೋರಖ್ ಪುರ ದಂಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ...

Published On :
ಅಲಹಬಾದ್: ದಶಕದ ಹಿಂದೆ ನಡೆದ ಗೋರಖ್ ಪುರ ದಂಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಲು ಅನುಮತಿ ನೀಡುವುದಿಲ್ಲ ಎಂದು ಉತ್ತರ ಪ್ರದೇಶ ಸರ್ಕಾರ ಗುರುವಾರ ಅಲಹಬಾದ್ ಹೈಕೋರ್ಟ್ ಗೆ ತಿಳಿಸಿದೆ.
2007ರ ದಂಗೆಯ ವೇಳೆ ಸ್ಥಳೀಯ ಸಂಸದರಾಗಿದ್ದ ಯೋಗಿ ಆದಿತ್ಯನಾಥ್ ಅವರ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನಿರಾಕರಿಸಲಾಗಿದೆ ಎಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ರಾಹುಲ್ ಭಟ್ನಾಗರ್ ಅವರು ಇಂದು ಹೈಕೋರ್ಟ್ ಗೆ ಪ್ರಮಾಣ ಪತ್ರ ಸಲ್ಲಿಸಿದ್ದಾರೆ.
ಮೇ 7ರಂದು ಪ್ರಕರಣ ಸಂಬಂಧ ಖುದ್ದು ವಿಚಾರಣೆಗೆ ಹಾಜರಾಗುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ನ್ಯಾಯಮೂರ್ತಿಗಳಾದ ರಮೇಶ್ ಸಿನ್ಹಾ ಮತ್ತು ಉಮೇಶ್ ಚಂದ್ರ ಶ್ರೀವಾತ್ಸವ್ ಅವರನ್ನೊಳಗೊಂಡ ಹೈಕೋರ್ಟ್ ವಿಭಾಗೀಯ ಪೀಠ ಸೂಚಿಸಿತ್ತು. ಈ ಹಿನ್ನೆಲೆಯಲ್ಲಿ ಉತ್ತರ ಪ್ರದೇಶ ಸರ್ಕಾರ ಇಂದು ಅಫಿಡವಿಟ್ ಸಲ್ಲಿಸಿದೆ.
ಪ್ರಕರಣದ ತನಿಖೆ ನಡೆಸುತ್ತಿರುವ ಸಿಬಿ-ಸಿಐಡಿ ಇನ್ನು ತನ್ನ ಪ್ರಾಥಮಿಕ ತನಿಖಾ ವರದಿಯನ್ನು ಸಲ್ಲಿಸಿಲ್ಲ ಮತ್ತು ಈ ವರದಿಯನ್ನು ವಿಚಾರಣಾಧೀನ ಕೋರ್ಟ್ ಗೆ ಸಲ್ಲಿಸಬೇಕಾಗಿದೆ ಎಂದು ಭಟ್ನಾಗರ್ ಅವರು ಅಫಿಡವಿಟ್ ನಲ್ಲಿ ತಿಳಿಸಿದ್ದಾರೆ.
ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿರುವ ಅರ್ಜಿದಾರರ ಪರ ವಕೀಲ ಎಸ್ಎಫ್ಎ ನಖ್ವಿ ಅವರು, ಸರ್ಕಾರದ ನಿರ್ಧಾರವನ್ನು ನಾವು ಪ್ರಶ್ನಿಸುತ್ತೇವೆ. ಮುಖ್ಯ ಕಾರ್ಯದರ್ಶಿಗಳು ಮುಖ್ಯಮಂತ್ರಿಗಳ ಅಧೀನದಲ್ಲಿರುವುದರಿಂದ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿಲ್ಲ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Yogi Adityanathಯೋಗಿ ಆದಿತ್ಯನಾಥ್ಉತ್ತರ ಪ್ರದೇಶ ಸರ್ಕಾರUP govtCan\'t prosecute2007 riotsಕಾನೂನು ಕ್ರಮ ಇಲ್ಲ2007ರ ದಂಗೆ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


