ದೇಶ

ಗೂಗಲ್ ಸರ್ಚ್ ನಲ್ಲಿ ಪ್ರಧಾನಿ ಮೋದಿ ಬಗ್ಗೆ ಅವಹೇಳನಕಾರಿ ಪ್ರಕಟಣೆ, ಎಫ್ಐಆರ್ ದಾಖಲು

ಗೂಗಲ್ ಸರ್ಚ್ ಇಂಜಿನ್ ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ಅವಹೇಳನಕಾರಿಯಾಗಿ ಬರೆಯಲಾಗಿದ್ದ ಹಿನ್ನೆಲೆಯಲ್ಲಿ ಗೂಗಲ್ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.

ಗೂಗಲ್ ಸರ್ಚ್ ನಲ್ಲಿ ಪ್ರಧಾನಿ ಮೋದಿ ಬಗ್ಗೆ ಅವಹೇಳನಕಾರಿ ಪ್ರಕಟಣೆ, ಎಫ್ಐಆರ್ ದಾಖಲು
ನರೇಂದ್ರ ಮೋದಿ
Published On :
ಶಹಜಹಾನ್ ಪುರ್: ಗೂಗಲ್ ಸರ್ಚ್ ಇಂಜಿನ್ ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ಅವಹೇಳನಕಾರಿಯಾಗಿ ಬರೆಯಲಾಗಿದ್ದ ಹಿನ್ನೆಲೆಯಲ್ಲಿ ಗೂಗಲ್ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. 
2015 ರಲ್ಲಿ ಗೂಗಲ್ ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ಅವಹೇಳನಕಾರಿಯಾದ ವರದಿ ಪ್ರಕಟವಾಗಿತ್ತು. ಈ ಬಗ್ಗೆ ಉತ್ತರ ಪ್ರದೇಶದ ಶಹಜಹಾನ್ ಪುರ್ ನ ವಕೀಲರಾದ ನಂದ ಕಿಶೋರ್ ದೂರು ದಾಖಲಿಸಿದ್ದರು. ದೂರು ಸ್ವೀಕರಿಸಿರುವ ಪೊಲೀಸರು ಐಟಿ ಕಾಯ್ದೆಯ ಅಡಿಯಲ್ಲಿ ಗೂಗಲ್ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ. 
ಈ ಬಗ್ಗೆ ಗೂಗಲ್ ಸಂಸ್ಥೆಯನ್ನು ಸಂಪರ್ಕಿಸಿದಾಗ "ದೂರಿನ ಬಗ್ಗೆ ನಮಗೆ ಇನ್ನೂ ನೊಟೀಸ್ ಬಂದಿಲ್ಲ. ಈಗಲೇ ಪ್ರತಿಕ್ರಿಯೆ ನೀಡಲು ಸಾಧ್ಯವಿಲ್ಲ ಎಂಬ ಪ್ರತಿಕ್ರಿಯೆ ಬಂದಿದೆ. ಗೂಗಲ್ ನಲ್ಲಿ ನ್ಯೂಸ್ ನ್ನು ನೋಡುತ್ತಿದ್ದಾಗ ಪ್ರಧಾನಿ ನರೇಂದ್ರ ಮೋದಿ ಬಗ್ಗೆ ಅವಹೇಳನಕಾರಿಯಾಗಿ ಬರೆಯಲಾಗಿತ್ತು. ಇದರಿಂದ ತಮಗೆ ನೋವುಂಟಾಗಿದ್ದು ಗೂಗಲ್ ವಿರುದ್ಧ ದೂರು ದಾಖಲಿಸಿರುವುದಾಗಿ ಕಿಶೋರ್ ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.