ದೇಶ

ಇಂದಿನಿಂದ ಪ್ರಧಾನಿ ಮೋದಿ 2 ದಿನಗಳ ಲಂಕಾ ಪ್ರವಾಸ ಆರಂಭ

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಗುರುವಾರದಿಂದ 2 ದಿನಗಳ ಕಾಲ ನೆರೆಯ ರಾಷ್ಟ್ರ ಶ್ರೀಲಂಕಾ ಪ್ರವಾಸ ಕೈಗೊಳ್ಳುತ್ತಿದ್ದು, ಅಲ್ಲಿನ ಬೌದ್ಧರ ಸುಪ್ರಸಿದ್ಧ ಸಮಾರಂಭವಾದ 'ವೈಶಾಕ ದಿನ' ಆಚರಣೆಯಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ...

ಇಂದಿನಿಂದ ಪ್ರಧಾನಿ ಮೋದಿ 2 ದಿನಗಳ ಲಂಕಾ ಪ್ರವಾಸ ಆರಂಭ
ಪ್ರಧಾನಮಂತ್ರಿ ನರೇಂದ್ರ ಮೋದಿ
Published On :
ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಗುರುವಾರದಿಂದ 2 ದಿನಗಳ ಕಾಲ ನೆರೆಯ ರಾಷ್ಟ್ರ ಶ್ರೀಲಂಕಾ ಪ್ರವಾಸ ಕೈಗೊಳ್ಳುತ್ತಿದ್ದು, ಅಲ್ಲಿನ ಬೌದ್ಧರ ಸುಪ್ರಸಿದ್ಧ ಸಮಾರಂಭವಾದ 'ವೈಶಾಕ ದಿನ' ಆಚರಣೆಯಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ. 
ಲಂಕಾ ರಾಜಧಾನಿ ಕೊಲಂಬೋದಲ್ಲಿ ಮೇ.12-14ರವರೆಗೂ ನಡೆಯಲಿರುವ ಅಂತರಾಷ್ಟ್ರೀ ವೈಶಾಕ ದಿನ ಆಚರಣೆಯಲ್ಲಿ 100 ರಾಷ್ಟ್ರಗಳ 400ಕ್ಕೂ ಹೆಚ್ಚು ಪ್ರತಿನಿಧಿಗಳನ್ನೊಳಗೊಂಡ ಅಂತರಾಷ್ಟ್ರೀಯ ಬೌದ್ಧರ ಸಮ್ಮೇಳನ ಸಹ ನಡೆಯಲಿದ್ದು, ಈ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. 
ಶ್ರೀಲಂಕಾ ಪ್ರವಾಸ ಕುರಿತಂತೆ ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ಬರೆದಿರುವ ಪ್ರಧಾನಿ ಮೋದಿಯವರು, ಇದು ಎರಡು ವರ್ಷಗಳಲ್ಲಿ ಇದು ಎರಡನೇ ಭೇಟಿಯಾಗಿದ್ದು, ಉಭಯ ರಾಷ್ಟ್ರಗಳ ನಡುವಿನ ಉತ್ತಮ ಬಾಂಧವ್ಯವನ್ನು ಇದು ಸೂಚಿಸುತ್ತದೆ ಎಂದು ಹೇಳಿದ್ದಾರೆ. 
ಭೇಟಿ ವೇಳೆ ಮೇ.12 ರಂದು ಕೊಲಂಬೋದಲ್ಲಿ ನಡೆಯಲಿರುವ ಅಂತರಾಷ್ಟ್ರೀಯ ವೈಶಾಕ ದಿನಾಚರಣೆಯಲ್ಲಿ ಪಾಲ್ಗೊಳ್ಳುತ್ತಿದ್ದೇನೆ. ಈ ವೇಳೆ ಬೌದ್ಧ ಧರ್ಮದ ಆಧ್ಯಾತ್ಮಿಕ ನಾಯಕರು, ವಿದ್ವಾಂಸರು ಮತ್ತು ದೈವಾಂಶ ಸಂಭೂತರೊಂದಿಗೆ ಮಾತುಕತೆ ನಡೆಸಲಿದ್ದೇನೆ. ಭೇಟಿಯಿಂದ ಉಭಯ ರಾಷ್ಟ್ರಗಳ ಸಂಬಂಧ ಮತ್ತಷ್ಟು ಗಟ್ಟಿಗೊಳ್ಳಲಿದೆ ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.