ಜಮ್ಮು-ಕಾಶ್ಮೀರದಲ್ಲಿ ಇಂಟರ್ ನೆಟ್ ಸೇವೆ ಪ್ರಾರಂಭಿಸಲು ಭಾರತಕ್ಕೆ ವಿಶ್ವಸಂಸ್ಥೆ ಒತ್ತಾಯ
ಜಮ್ಮು-ಕಾಶ್ಮೀರದಲ್ಲಿ ಇಂಟರ್ ನೆಟ್ ಸೇವೆಗಳನ್ನು ಪುನಾರಂಭ ಮಾಡುವಂತೆ ಭಾರತಕ್ಕೆ ವಿಶ್ವಸಂಸ್ಥೆ ಒತ್ತಾಯಿಸಿದೆ.

Published On :
ಜಿನಿವಾ: ಜಮ್ಮು-ಕಾಶ್ಮೀರದಲ್ಲಿ ಇಂಟರ್ ನೆಟ್ ಸೇವೆಗಳನ್ನು ಪುನಾರಂಭ ಮಾಡುವಂತೆ ಭಾರತಕ್ಕೆ ವಿಶ್ವಸಂಸ್ಥೆ ಒತ್ತಾಯಿಸಿದೆ.
ವಾಟ್ಸ್ ಆಪ್, ಫೇಸ್ ಬುಕ್ ಟ್ವಿಟರ್ ಬಳಕೆ ಮಾಡದಂತೆ ಇಂಟರ್ ನೆಟ್ ಸೇವೆಗಳನ್ನು ಏ.17 ರಂದು ನಿರ್ಬಂಧಿಸಿದ್ದ ಕೇಂದ್ರ ಸರ್ಕಾರ ಒಟ್ಟು 22 ವೆಬ್ ಸೈಟ್ ಗಳ ಬಳಕೆಯನ್ನು ನಿರ್ಬಂಧಿಸಿತ್ತು. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ವಿಶ್ವಸಂಸ್ಥೆ, ಇಂಟರ್ ನೆಟ್ ಸೌಲಭ್ಯಗಳಿಗೆ ನಿರ್ಬಂಧ ವಿಧಿಸಿರುವುದು ಕಾಶ್ಮೀರದ ಜನತೆಯ ಮೂಲಭೂತ ಹಕ್ಕುಗಳ ಮೇಲೆ ವ್ಯತಿರಿಕ್ತ ಪರಿಣಾಮ ಉಂಟು ಮಾಡಲಿದೆ. ಆದ್ದರಿಂದ ಇಂತರ್ ನೆಟ್ ಸೇವೆಗಳನ್ನು ಕೂಡಲೇ ಪ್ರಾರಂಭಿಸಬೇಕೆಂದು ಭಾರತವನ್ನು ಆಗ್ರಹಿಸಿದೆ.
ಕಾಶ್ಮೀರ ಕಣಿವೆಯಲ್ಲಿ ಉಗ್ರರ ಬೆಂಬಲಿಗರು ಸೇನೆಯ ಮೇಲೆ ಕಲ್ಲು ತೂರಾಟ ನಡೆಸುತ್ತಿದ್ದು ಮಾಹಿತಿಯ ಹಂಚಿಕೆಯಾದರೆ ಅದು ಮತ್ತಷ್ಟು ಪ್ರಕ್ಷುಬ್ಧ ವಾತಾವರಣಕ್ಕೆ ಕಾರಣವಾಗಲಿದೆ ಎಂಬ ಕಾರಣದಿಂದ ಇಂಟರ್ ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Indian GovernmentJammu and Kashmirಜಮ್ಮು-ಕಾಶ್ಮೀರವಿಶ್ವಸಂಸ್ಥೆUnited Nationsಭಾರತ ಸರ್ಕಾರInternet servicesಇಂಟರ್ ನೆಟ್ ಸೇವೆ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


