ಜಮ್ಮು: ಮತ್ತೆ ಕದನ ವಿರಾಮ ಉಲ್ಲಂಘಿಸಿದ ಪಾಕ್, ಅಪ್ರಚೋದಿತ ಗುಂಡಿನ ದಾಳಿಗೆ 2 ನಾಗರಿಕರು ಬಲಿ
ಜಮ್ಮು ಮತ್ತು ಕಾಶ್ಮೀರದ ನೌಶೆರಾ ಸೆಕ್ಟರ್ ಬಳಿ ಪಾಕಿಸ್ತಾನ ಮತ್ತೆ ಕದನ ವಿರಾಮ ಉಲ್ಲಂಘನೆ ಮಾಡಿದ್ದು, ಗಡಿ ನಿಯಂತ್ರಣ ರೇಖೆ ಬಳಿ ನಡೆಸಿದ ಅಪ್ರಚೋದಿತ ಗುಂಡಿನ ದಾಳಿಗೆ ಇಬ್ಬರು ನಾಗರಿಕರು...

Published On :
ಜಮ್ಮು: ಜಮ್ಮು ಮತ್ತು ಕಾಶ್ಮೀರದ ನೌಶೆರಾ ಸೆಕ್ಟರ್ ಬಳಿ ಪಾಕಿಸ್ತಾನ ಮತ್ತೆ ಕದನ ವಿರಾಮ ಉಲ್ಲಂಘನೆ ಮಾಡಿದ್ದು, ಗಡಿ ನಿಯಂತ್ರಣ ರೇಖೆ ಬಳಿ ನಡೆಸಿದ ಅಪ್ರಚೋದಿತ ಗುಂಡಿನ ದಾಳಿಗೆ ಇಬ್ಬರು ನಾಗರಿಕರು ಸಾವನ್ನಪ್ಪಿರುವ ಘಟನೆ ಶನಿವಾರ ನಡೆದಿದೆ.
ನೌಶೆರಾ ಸೆಕ್ಟರ್ ಬಳಿಯಿರುವ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ಪಡೆ ಭಾರತೀಯ ಸೇನೆ ಮೇಲೆ ಅಪ್ರಚೋದಿತ ಗುಂಡಿನ ದಾಳಇ ನಡೆಸುತ್ತಿದ್ದು, ಸಣ್ಣ ಶಸ್ತ್ರಾಸ್ತ್ರಗಳು, ಆಟೋಮೆಟಿಕ್ ಶಸ್ತ್ರಾಸ್ತ್ರಗಳು, 82 ಎಂಎಂ ಮತ್ತು 120 ಎಂಎಂ ಮಾರ್ಟರ್ ಶೆಲ್ ಗಳನ್ನು ಬಳಿ ದಾಳಿ ನಡೆಸುತ್ತಿದೆ ಎಂದು ಸೇನಾಧಿಕಾರಿಗಳು ಹೇಳಿದ್ದಾರೆ.
ಪಾಕಿಸ್ತಾನ ಸೇನೆ ನಡೆಸಿದ ಅಪ್ರಚೋದಿತ ಗುಂಡಿನ ದಾಳಿಗೆ ಇಬ್ಬರು ನಾಗರಿಕರು ಬಲಿಯಾಗಿದ್ದು, ಮತ್ತೋರ್ವ ನಾಗರಿಕ ಗಂಭೀರವಾಗಿ ಗಾಯಗೊಂಡಿದ್ದಾನೆ. ಪ್ರಸ್ತುತ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಅಧಿಕಾರಿಗಳು ತಿಳಿಸಿದ್ದಾರೆ.
ಇನ್ನು ಪಾಕಿಸ್ತಾನ ದಾಳಿಗೆ ಭಾರತೀಯ ಸೇನೆ ತಕ್ಕ ಪ್ರತ್ಯುತ್ತರವನ್ನು ನೀಡುತ್ತಿದೆ ಎಂದು ವರದಿಗಳು ತಿಳಿಸಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Pakistanಪಾಕಿಸ್ತಾನಜಮ್ಮು ಮತ್ತು ಕಾಶ್ಮೀರCeasefire ViolationArmyJammu and Kashmirಸೇನೆಕದನ ವಿರಾಮ ಉಲ್ಲಂಘನೆನಾಗರೀಕರುCivilian
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


