ತಲೆ ಕತ್ತರಿಸಿ ಲಾಲ್ ಚೌಕ್ ನಲ್ಲಿ ನೇತು ಹಾಕುತ್ತೇವೆ: ಪ್ರತ್ಯೇಕತಾವಾದಿಗಳಿಗೆ ಹಿಜ್ಬುಲ್ ಮುಜಾಹಿದ್ದೀನ್ ಎಚ್ಚರಿಕೆ
ಇಸ್ಲಾಂಗಾಗಿ ನಡೆಯುತ್ತಿರುವ ಹೋರಾಟದಲ್ಲಿ ಮಧ್ಯೆ ಪ್ರವೇಶ ಮಾಡಿದರೆ, ತಲೆ ಕತ್ತರಿಸಿ ಲಾಲ್ ಚೌಕ್ ನಲ್ಲಿ ನೇತು ಹಾಕಿಬಿಡುತ್ತೇವೆಂದು ಪ್ರತ್ಯೇಕತಾವಾದಿಗಳಿಗೆ ಹಿಜ್ಬುಲ್ ಮುಜಾಹಿದ್ದೀನ್...

Published On :
ಶ್ರೀನಗರ: ಇಸ್ಲಾಂಗಾಗಿ ನಡೆಯುತ್ತಿರುವ ನಮ್ಮ ಹೋರಾಟದಲ್ಲಿ ಮಧ್ಯೆ ಪ್ರವೇಶ ಮಾಡಿದರೆ, ತಲೆ ಕತ್ತರಿಸಿ ಲಾಲ್ ಚೌಕ್ ನಲ್ಲಿ ನೇತು ಹಾಕಿಬಿಡುತ್ತೇವೆಂದು ಪ್ರತ್ಯೇಕತಾವಾದಿಗಳಿಗೆ ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆ ಶನಿವಾರ ಎಚ್ಚರಿಕೆ ನೀಡಿದೆ.
ಹುರಿಯತ್ ನಾಯಕರಿಗೆ ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆಯ ನಾಯಕ ಝಾಕಿನ್ ಮುಸಾ ಬೆದರಿಕೆ ಹಾಕಿರುವ ಆಡಿಯೋ ಕ್ಲಿಪ್ ವೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಸಾಮಾಜಿಕ ಜಾಲತಾಣಗಳಲ್ಲಿ ಓಡಾಡುತ್ತಿರುವ ಆಡಿಯೋ ಕ್ಲಿಪ್ ನಲ್ಲಿ ಝಾಕೀನ್ ಮುಸಾ ಪ್ರತ್ಯೇಕತಾವಾದಿಗಳಿಗೆ ಬೆದರಿಕೆ ಹಾಕಿದ್ದಾನೆ. ಕಪಟವೇಷದಾರಿ ಹುರಿಯತ್ ನಾಯಕರಿಗೆ ಈ ಮೂಲಕ ಎಚ್ಚರಿಕೆ ನೀಡುತ್ತಿದ್ದೇನೆ. ಇಸ್ಲಾಂ ಕುರಿತಂತೆ ನಮ್ಮ ಹೋರಾಟದಲ್ಲಿ ಯಾವುದೇ ಕಾರಣಕ್ಕೂ ಪ್ರತ್ಯೇಕತಾವಾದಿಗಳು ಮಧ್ಯೆ ಪ್ರವೇಶ ಮಾಡಬಾರದು. ಮಾಡಿದ್ದೇ ಆದರೆ, ಅವರ ತಲೆಗಳನ್ನು ಕಡಿದು ಲಾಲ್ ಚೌಕ್ ನಲ್ಲಿ ನೇತು ಹಾಕುತ್ತೇವೆಂದು ಹೇಳಿದ್ದಾನೆ.
ಕಾಶ್ಮೀರದಲ್ಲಿ ಷರಿಯತ್ ಹೇರುವುದು ನಮ್ಮ ಹೋರಾಟದ ಉದ್ದೇಶವಾಗಿದೆಯೇ ಹೊರತು ಕಾಶ್ಮೀರದ ರಾಜಕೀಯ ತಿಕ್ಕಾಟದ ಸಮಸ್ಯೆ ಬಗೆಹರಿಸುವುದಕ್ಕಾಗಿ ಅಲ್ಲ. ನಮ್ಮ ಹೋರಾಟ ಇಸ್ಲಾಂ ಹಾಗೂ ಷರಿಯತ್ ಗಾಗಿ ಎಂಬುದನ್ನು ಪ್ರತ್ಯೇಕತಾವಾದಿಗಳು ತಿಳಿಯಬೇಕಿದೆ ಎಂದು ತಿಳಿಸಿದ್ದಾನೆ.
ಕಪಟವೇಷಧಾರಿ ಹುರಿಯತ್ ನಾಯಕರ ವಿರುದ್ಧ ಕಾಶ್ಮೀರ ಜನತೆ ಒಗ್ಗೂಡಬೇಕಿದೆ. ನಾವು ನಮ್ಮ ಧರ್ಮವನ್ನು ಪ್ರೀತಿಸಬೇಕು ಹಾಗೂ ನಮ್ಮ ಹೋರಾಟ ಇಸ್ಲಾಂಗಾಗಿ ಎಂಬುದು ಮನಗಾಣಬೇಕಿದೆ. ಇದನ್ನು ಹುರಿಯತ್ ನಾಯಕರು ಚಿಂತಿಸುತ್ತಿಲ್ಲ ಎಂದಾದರೆ, ಆಜಾದಿಯ ಅರ್ಥವೇನು.... ಲಾ ಇಲಾಹ ಇಲ್ ಅಲ್ಲಾ ಎಂಬ ಘೋಷಣೆಗಳನ್ನು ನಾವೇಕೆ ಕೇಳುತ್ತಿದ್ದೇವೆ? ಪ್ರತ್ಯೇಕತಾವಾದಿಗಳೇಕೆ ತಮ್ಮ ರಾಜಕೀಯಕ್ಕೆ ನಮ್ಮನ್ನು ಬಳಸಿಕೊಳ್ಳುತ್ತಿದ್ದಾರೆ? ಎಂದು ಪ್ರಶ್ನಿಸಿದ್ದಾನೆ. ಆದರೆ, ಈ ಆಡಿಯೋ ಕ್ಲಿಪ್ ಕುರಿತ ದೃಢೀಕರಣ ಈ ವರೆಗೂ ಸ್ಪಷ್ಟವಾಗಿಲ್ಲ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Islamseparatistsಇಸ್ಲಾಂHizbul Mujahideenಹಿಜ್ಬುಲ್ ಮುಜಾಹಿದ್ದೀನ್ಪ್ರತ್ಯೇಕತಾವಾದಿಗಳುHurriyat leadersಹುರಿಯತ್ ನಾಯಕರು
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


