ಛತ್ತೀಸ್ಗಢದಲ್ಲಿ ಎನ್'ಕೌಂಟರ್: ಮೂವರು ಯೋಧರಿಗೆ ಗಾಯ, ಮುಂದುವರೆದ ಕಾರ್ಯಾಚರಣೆ
ಛತ್ತೀಸ್ಘಡದ ಬಿಜಾಪುರದಲ್ಲಿ ನಕ್ಸಲರ ವಿರುದ್ಧ ಎನ್ ಕೌಂಟರ್ ನಡೆಸಲಾಗುತ್ತಿದ್ದು, ಈ ವೇಳೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಭದ್ರತಾ ಸಿಬ್ಬಂದಿಗಳಿಗೆ ಗಾಯವಾಗಿರುವ...

Published On :
ಬಿಜಾಪುರ (ಛತ್ತೀಸ್ಗಢ): ಛತ್ತೀಸ್ಘಡದ ಬಿಜಾಪುರದಲ್ಲಿ ನಕ್ಸಲರ ವಿರುದ್ಧ ಎನ್ ಕೌಂಟರ್ ನಡೆಸಲಾಗುತ್ತಿದ್ದು, ಈ ವೇಳೆ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಭದ್ರತಾ ಸಿಬ್ಬಂದಿಗಳಿಗೆ ಗಾಯವಾಗಿರುವ ಘಟನೆ ಭಾನುವಾರ ನಡೆದಿದೆ.
ಬಿಜಾಪುರ ಜಿಲ್ಲೆಯ ತಿಮರ್ಪುರ ಅರಣ್ಯದಲ್ಲಿ ನಕ್ಸಲರು ಅಡಗಿ ಕುಳಿತಿರುವುದಾಗಿ ಖಚಿತ ಮಾಹಿತಿ ಬಂದ ಹಿನ್ನಲೆಯಲ್ಲಿ ಎನ್ ಕೌಂಟರ್ ನಡೆಸಲು ಇಂದು ಬೆಳಿಗ್ಗೆ 10 ಗಂಟೆ ಸುಮಾರಿಗೆ ಜಿಲ್ಲಾ ಮೀಸಲು ಪಡೆ (ಡಿಆರ್'ಜಿ) ಹಾಗೂ 204 ಕೋಬ್ರಾ (ಸಿಆರ್'ಪಿಎಫ್) ಪಡೆ ಜಂಟಿಯಾಗಿ ಕಾರ್ಯಾಚರಣೆಗಿಳಿದಿತ್ತು.
ಈ ವೇಳೆ ನಕ್ಸಲರು ಯೋಧರ ಮೇಲೆ ಗುಂಡಿನ ದಾಳಿ ನಡೆಸಿದ್ದು, ಇಬ್ಬರು ಯೋಧರಿಗೆ ಗಾಯಗಳಾಗಿವೆ ಎಂದು ವರದಿಗಳು ತಿಳಿಸಿವೆ.
ಪ್ರಸ್ತುತ ಸ್ಥಳದಲ್ಲಿ ಕಾರ್ಯಾಚರಣೆ ಮುಂದುವರೆದಿದ್ದು, ಗಾಯಗೊಂಡ ಯೋಧರನ್ನು ಹೆಲಿಕಾಪ್ಟರ್ ಮೂಲಕ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Chhattisgarhಭದ್ರತಾ ಪಡೆInjuryNaxalನಕ್ಸಲರುಗಾಯsecurity personnelಛತ್ತೀಸ್ಗಢBijapur encounterಬಿಜಾಪುರ ಎನ್ ಕೌಂಟರ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


