ಮುಕ್ತ, ಬಹುಪಕ್ಷೀಯ ಜಗತ್ತಿಗೆ ಚೀನಾ ಬಲವಾದ ಆಧಾರ ಸ್ತಂಭ: ವಿಶ್ವಸಂಸ್ಥೆ ಮುಖ್ಯಸ್ಥ
ಒನ್ ಬೆಲ್ಟ್, ಒನ್ ರೋಡ್ ಕಾರ್ಯಕ್ರಮ ಮಾಡುವ ಮೂಲಕ ಮುಕ್ತ ಹಾಗೂ ಬಹುಪಕ್ಷೀಯ ಜಗತ್ತಿಗೆ ತಾನು ಬಲವಾದ ಆಧಾರ ಸ್ತಂಭ ಎಂಬುದನ್ನು ಚೀನಾ ತೋರಿಸಿದೆ
Published On :
ಬೀಜಿಂಗ್: ಅಂತಾರಾಷ್ಟ್ರೀಯ ಸಹಕಾರದ ವಿಷಯದಲ್ಲಿ ಒನ್ ಬೆಲ್ಟ್, ಒನ್ ರೋಡ್ ಕಾರ್ಯಕ್ರಮ ಮಾಡುವ ಮೂಲಕ ಮುಕ್ತ ಹಾಗೂ ಬಹುಪಕ್ಷೀಯ ಜಗತ್ತಿಗೆ ತಾನು ಬಲವಾದ ಆಧಾರ ಸ್ತಂಭ ಎಂಬುದನ್ನು ಚೀನಾ ತೋರಿಸಿದೆ ಎಂದು ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಅಂಟೊನಿಯೊ ಗುಟೆರಸ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಚೀನಾದಲ್ಲಿ ನಡೆಯುತ್ತಿರುವ ಒನ್ ಬೆಲ್ಟ್ ಒನ್ ರೋಡ್ ಕಾರ್ಯಕ್ರಮದಲ್ಲಿ ಚೀನಾದ ವಿದೇಶಾಂಗ ಸಚಿವ ವಾಂಗ್ ಯಿ ಅವರನ್ನು ಭೇಟಿ ಮಾಡಿದ ಗುಟೆರಸ್, ಒಬಿಒಆರ್ ಚೀನಾದ ದೂರದೃಷ್ಟಿ ಹಾಗೂ ಕಾರ್ಯತಂತ್ರದ ದೃಷ್ಟಿಯನ್ನು ತೋರಿಸುತ್ತದೆ ಎಂದು ಹೇಳಿದ್ದಾರೆ.
ಚೀನಾದ ಬೆಲ್ಟ್ ಹಾಗೂ ರೋಡ್ ಯೋಜನೆ ಆರ್ಥಿಕ ಜಾಗತೀಕರಣವನ್ನು ಸಮತೆತೋಲಿತ ಅಭಿವೃದ್ಧಿಯೆಡೆಗೆ ಮುನ್ನಡೆಸಲಿದ್ದು, ಜಾಗತಿಕ ಸಮಸ್ಯೆಗಳಿಗೆ ಅಂತಾರಾಷ್ಟ್ರೀಯ ಸಹಕಾರದಿಂದ ಪರಿಹಾರ ಕಂಡುಕೊಳ್ಳುವುದಕ್ಕೆ ಸಹಕಾರಿಯಾಗಲಿದೆ ಎಂದು ಗುಟೆರಸ್ ಅಭಿಪ್ರಾಯಪಟ್ಟಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Chinaಚೀನಾಒನ್ ಬೆಲ್ಟ್ ಒನ್ ರೋಡ್Belt and Road forumUN Secretary-General Antonio Guterresವಿಶ್ವಸಂಸ್ಥೆ ಪ್ರಧಾನ ಕಾರ್ಯದರ್ಶಿಅಂಟೊನಿಯೊ ಗುಟೆರಸ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

