ವ್ಯಕ್ತಿಯ ಮೇಲೆ ಗೋರಕ್ಷಕರಿಂದ ಹಲ್ಲೆ: ಇಬ್ಬರ ಬಂಧನ
ಹಸುವಿನ ಬಾಲ ಕತ್ತರಿಸಿದ್ದಾರೆಂದು ವ್ಯಕ್ತಿಯೊಬ್ಬರ ಮೇಲೆ ಸ್ವಯಂ ಘೋಷಿತ ಗೋರಕ್ಷಕರು ಹಲ್ಲೆ ನಡೆಸಿರುವ ಘಟನೆ ಉಜ್ಜೈನಿಯಲ್ಲಿ ನಡೆದಿದ್ದು ಹಲ್ಲೆ ನಡೆಸಿದ ಗುಂಪಿನಲ್ಲಿದ್ದವರ ಪೈಕಿ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

Published On :
ಉಜ್ಜೈನಿ: ಹಸುವಿನ ಬಾಲ ಕತ್ತರಿಸಿದ್ದಾರೆಂದು ವ್ಯಕ್ತಿಯೊಬ್ಬರ ಮೇಲೆ ಸ್ವಯಂ ಘೋಷಿತ ಗೋರಕ್ಷಕರು ಹಲ್ಲೆ ನಡೆಸಿರುವ ಘಟನೆ ಉಜ್ಜೈನಿಯಲ್ಲಿ ನಡೆದಿದ್ದು ಹಲ್ಲೆ ನಡೆಸಿದ ಗುಂಪಿನಲ್ಲಿದ್ದವರ ಪೈಕಿ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
ಉಜ್ಜೈನಿಯ ದೇವಾಲಯದ ಬಳಿ ಈ ಘಟನೆ ನಡೆದಿದ್ದು ಸ್ವಯಂ ಘೋಷಿತ ಗೋರಕ್ಷಕರು ಹಲ್ಲೆ ನಡೆಸಿರುವುದು ವೈರಲ್ ಆಗಿರುವ ವಿಡಿಯೋದಲ್ಲಿ ವ್ಯಕ್ತಿಯನ್ನು ಬೆಲ್ಟ್ ನಲ್ಲಿ ಥಳಿಸುತ್ತಿರುವ ದೃಶ್ಯಾವಳಿಗಳು ಸೆರೆಯಾಗಿವೆ. ಆದರೆ ಪೊಲೀಸ್ ಅಧಿಕಾರಿ ಒಪಿ ಮಿಶ್ರಾ ಪ್ರಕಾರ ಹಣದ ವಿಚಾರಕ್ಕೆ ವಿವಾದ ಉಂಟಾಗಿದ್ದು, ವ್ಯಕ್ತಿಯನ್ನು ಥಳಿಸಲಾಗಿದೆ ಎಂದು ತಿಳಿದುಬಂದಿದೆ.
ಥಳಿತಕ್ಕೊಳಗಾದ ವ್ಯಕ್ತಿಯಿಂದ ದೂರು ದಾಖಲಿಸಿಕೊಂಡಿರುವ ಪೊಲೀಸರು ಚೇತನ್ ಸಂಖಲ್, ವಿಕಾಸ್, ನೀಲೇಶ್ ಹಾಗೂ ಶುಭಂ ಎಂಬುವವರ ವಿರುದ್ಧ ಐಪಿಸಿ ಸೆಕ್ಷನ್ ಪ್ರಕಾರ ಕ್ರಿಮಿನಲ್ ಪ್ರಕರಣ ದಾಖಲಿಸಿದ್ದಾರೆ. ಚೇತನ್ ಮತ್ತು ವಿಕಾಸ್ ಎಂಬ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು ಉಳಿದವರು ಕಾಣೆಯಾಗಿದ್ದಾರೆ ಎಂದು ಒಪಿ ಮಿಶ್ರಾ ಮಾಹಿತಿ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


