ವಾಟರ್ ಟ್ಯಾಂಕರ್ ಹಗರಣ: ಕೇಜ್ರಿವಾಲ್ ರಾಜಕೀಯ ಸಲಹೆಗಾರನಿಗೆ ಎಸಿಬಿ ಸಮನ್ಸ್
ವಾಟರ್ ಟ್ಯಾಂಕರ್ ಹಗರಣಕ್ಕೆ ಸಂಬಂಧಿಸಿದಂತೆ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಕೇಜ್ರಿವಾಲ್ ಅವರ ರಾಜಕೀಯ ಕಾರ್ಯದರ್ಶಿ ವೈಭವ್ ಕುಮಾರ್ ಗೆ ಸಮನ್ಸ್ ಜಾರಿ ಮಾಡಿದೆ.

Published On :
ನವದೆಹಲಿ: ಅರವಿಂದ್ ಕೇಜ್ರಿವಾಲ್ ನೇತೃತ್ವದ ದೆಹಲಿ ಸರ್ಕಾರದಲ್ಲಿ ನಡೆದಿದೆ ಎನ್ನಲಾದ ವಾಟರ್ ಟ್ಯಾಂಕರ್ ಹಗರಣಕ್ಕೆ ಸಂಬಂಧಿಸಿದಂತೆ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಕೇಜ್ರಿವಾಲ್ ಅವರ ರಾಜಕೀಯ ಕಾರ್ಯದರ್ಶಿ ವೈಭವ್ ಕುಮಾರ್ ಗೆ ಸಮನ್ಸ್ ಜಾರಿ ಮಾಡಿದೆ.
ಮೇ.17 ರಂದು ವಿಚಾರಣೆಗೆ ಹಾಜರಾಗುವಂತೆ ಎಸಿಬಿ ನೋಟಿಸ್ ಜಾರಿ ಮಾಡಿದೆ. ಆಮ್ ಆದ್ಮಿ ಪಕ್ಷದಿಂದ ವಜಾಗೊಂಡಿರುವ ನಾಯಕ ಕಪಿಲ್ ಮಿಶ್ರಾ, ಆಮ್ ಆದ್ಮಿ ಸರ್ಕಾರ ನಡೆಸಿರುವ ವಾಟರ್ ಟ್ಯಾಂಕರ್ ಹಗರಣದಿಂದ ಸರ್ಕಾರದ ಬೊಕ್ಕಸಕ್ಕೆ 400 ಕೋಟಿ ರೂಪಾಯಿ ನಷ್ಟವಾಗಿದೆ ಎಂದು ಗಂಭೀರ ಆರೋಪ ಮಾಡಿದ್ದರು.
ಕಪಿಲ್ ಮಿಶ್ರಾ ವಾಟರ್ ಟ್ಯಾಂಕರ್ ಹಗರಣದ ಕುರಿತ ದಾಖಲೆಗಳನ್ನು ಎಸಿಬಿಗೆ ನೀಡಿ ಸರ್ಕಾರ ಬೊಕ್ಕಸದ ಹಣವನ್ನು ದುರುಪಯೋಗ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಅರವಿಂದ್ ಕೇಜ್ರಿವಾಲ್Arvind KejriwalDelhi governmentದೆಹಲಿ ಸರ್ಕಾರಎಸಿಬಿAnti-Corruption Bureauwater tanker scamವಾಟರ್ ಟ್ಯಾಂಕರ್ ಹಗರಣ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


