ಘಜಿಯಾಬಾದ್: ರಾಸಾಯನಿಕ ಕಾರ್ಖಾನೆಯಲ್ಲಿ ಅಗ್ನಿ ಆಕಸ್ಮಿಕ
ಉತ್ತರಪ್ರದೇಶದ ಘಜಿಯಾಬಾದ್ ನಲ್ಲಿರುವ ರಾಸಾಯನಿಕ ಕಾರ್ಖಾನೆಯಲ್ಲಿ ಅಗ್ನಿ ಅವಘಡ ಸಂಭವಿಸಿರುವ ಘಟನೆ ನಡೆದಿದೆ ಎಂದು ಸೋಮವಾರ ತಿಳಿದುಬಂದಿದೆ...

Published On :
ಲಖನೌ: ಉತ್ತರಪ್ರದೇಶದ ಘಜಿಯಾಬಾದ್ ನಲ್ಲಿರುವ ರಾಸಾಯನಿಕ ಕಾರ್ಖಾನೆಯಲ್ಲಿ ಅಗ್ನಿ ಅವಘಡ ಸಂಭವಿಸಿರುವ ಘಟನೆ ನಡೆದಿದೆ ಎಂದು ಸೋಮವಾರ ತಿಳಿದುಬಂದಿದೆ.
ನಿನ್ನೆ ತಡರಾತ್ರಿ ಪಾಂಡವ ನಗರ ಕೈಗಾರಿಕಾ ಪ್ರದೇಶದಲ್ಲಿರುವ ಕಾರ್ಖಾನೆಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಪರಿಣಾಮ 12ಕ್ಕೂ ಹೆಚ್ಚು ಹಸು ಹಾಗೂ ಕರುಗಳು ಬಲಿಯಾಗಿದೆ ಎಂದು ವರದಿಗಳು ತಿಳಿಸಿವೆ.
ಬೆಂಕಿ ಅವಘಡ ಸಂಭವಿಸಿದ ಸುದ್ದಿ ತಿಳಿಯುತ್ತಿದ್ದಂತೆಯೇ 20ಕ್ಕೂ ಹೆಚ್ಚು ಅಗ್ನಿ ಶಾಮಕದಳದ ವಾಹನಗಳೊಂದಿಗೆ ಸ್ಥಳಕ್ಕಾಗಮಿಸಿದ ಅಧಇಕಾರಗಳು ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ.
ಕಾರ್ಖಾನೆಯಲ್ಲಿ ಎಲ್'ಪಿಜಿ ಗ್ಯಾಸ್ ಸಿಲಿಂಡರ್ ಗಳನ್ನು ಇರಿಸಲಾಗಿದ್ದು, ಸಿಲಿಂಡರ್ ಗಳು ಸ್ಫೋಟಗೊಳ್ಳುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬೆಂಕಿ ಕೆನ್ನಾಲಿಗೆ ಪಕ್ಕದಲ್ಲಿರುವ ಪೇಂಟ್ ಕಾರ್ಖಾನೆಗೆ ಹಬ್ಬಿದ್ದು, ಈ ಹಿನ್ನಲೆಯಲ್ಲಿ ಸುತ್ತಮುತ್ತಲಿನ ಇನ್ನಿತರೆ ಕಾರ್ಖಾನೆಯಲ್ಲಿರುವ ಜನರನ್ನು ಸ್ಥಳದಿಂದ ದೂರವಿರುವಂತೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ.
ಬೆಂಕಿ ನಂದಿಸಲು ಈಗಾಗಲೇ ರಾಷ್ಟ್ರೀ ವಿಪತ್ತು ನಿರ್ವಹಣಾ ಪಡೆ (ಎನ್'ಡಿಆರ್'ಎಫ್) ಕೂಡ ಸ್ಥಳಕ್ಕೆ ಆಗಮಿಸಿದ್ದು, ರಕ್ಷಣಾ ಕಾರ್ಯಾಚರಣೆ ಆರಂಭಿಸಿದೆ. ಸ್ಥಳದಲ್ಲಿ ಜಿಲ್ಲಾಧಿಕಾರಿ ಹಾಗೂ ಇನ್ನಿತರೆ ಹಿರಿಯ ಆಧಿಕಾರಿಗಳು ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


