ದೇಶ

ಚಲಿಸುತ್ತಿದ್ದ ಕಾರಿನಲ್ಲಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ!

ರೋಹ್ಟಕ್ ನಲ್ಲಿ ಕಾಮುಕರ ಭೀಕರ ಅಟ್ಟಹಾಸ ಹಸಿರಾಗುರುವಾಗಲೇ ರಾಜಧಾನಿ ದೆಹಲಿಯಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ಬೆಳಕಿಗೆ ಬಂದಿದ್ದು, ಕೆಲಸ ಮುಗಿಸಿ ಮನೆಗೆ ವಾಪಸ್ ಆಗುತ್ತಿದ್ದ ಮಹಿಳೆಯನ್ನು ಅಪಹರಿಸಿ ಕಾರಿನಲ್ಲೇ ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ಮಾಡಿರುವ ಘಟನೆ ಬೆಳಕಿಗೆ ಬಂದಿದೆ.

ಚಲಿಸುತ್ತಿದ್ದ ಕಾರಿನಲ್ಲಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ!
ಸಂಗ್ರಹ ಚಿತ್ರ
Published On :

ನವದೆಹಲಿ: ರೋಹ್ಟಕ್ ನಲ್ಲಿ ಕಾಮುಕರ ಭೀಕರ ಅಟ್ಟಹಾಸ ಹಸಿರಾಗುರುವಾಗಲೇ ರಾಜಧಾನಿ ದೆಹಲಿಯಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ಬೆಳಕಿಗೆ ಬಂದಿದ್ದು, ಕೆಲಸ ಮುಗಿಸಿ ಮನೆಗೆ ವಾಪಸ್ ಆಗುತ್ತಿದ್ದ ಮಹಿಳೆಯನ್ನು ಅಪಹರಿಸಿ  ಕಾರಿನಲ್ಲೇ ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ಮಾಡಿರುವ ಘಟನೆ ಬೆಳಕಿಗೆ ಬಂದಿದೆ.

ಪೊಲೀಸ್ ಮೂಲಗಳ ಪ್ರಕಾರ ದೆಹಲಿಯಲ್ಲಿ ಕೆಲಸ ಮುಗಿಸಿಕೊಂಡು ಶನಿವಾರ ಮಧ್ಯರಾತ್ರಿ ಸುಮಾರು 2 ಗಂಟೆ ಹೊತ್ತಿನಲ್ಲಿ ಸಿಕ್ಕಿಂ ಮೂಲದ ಮಹಿಳೆ ಮನೆಗೆ ವಾಪಸ್ ಆಗುತ್ತಿದ್ದರು. ಸೆಕ್ಟರ್ 17 ಬಳಿ ಮನೆ ನಡೆದು ಮನೆಗೆ  ಹೋಗುತ್ತಿದ್ದಾಗ ಸ್ವಿಫ್ಟ್ ಕಾರಿನಲ್ಲಿ ಬಂದ ಮೂವರು ಆಗುಂತುಕರು ಆಕೆಯನ್ನು ಮನೆಯ ಸಮೀಪದಿಂದಲೇ ಅಪಹರಿಸಿದ್ದಾರೆ. ಬಳಿಕ ಆಕೆಯನ್ನು ಕಾರಿನಲ್ಲೇ ಸಾಮೂಹಿಕವಾಗಿ ಅತ್ಯಾಚಾರ ಮಾಡಿದ್ದು, ಸುಮಾರು 20 ಕಿ.ಮೀ  ದೂರದವರೆಗೂ ಕಾರಿನಲ್ಲಿ ಸುತ್ತಿ ಬಳಿಕ ನಜಾಫ್ ಘಡ ಸಮೀಪದ ಎಸೆದು ಹೋಗಿದ್ದಾರೆ ಎಂದು ತಿಳಿದುಬಂದಿದೆ.

ಸ್ಥಳೀಯರ ನೆರವನೊಂಗಿಗೆ ಮಹಿಳೆ ನಜಾಫ್ ಘಡ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ದೂರು ನೀಡಿದ್ದು, ತುರ್ತು ಕಾರ್ಯಾಚರಣೆ ನಡೆಸಿದ ಪೊಲೀಸರು ಓರ್ವ ಆರೋಪಿಯನ್ನು ಗುರುತಿಸುವಲ್ಲಿ ಸಫಲರಾಗಿದ್ದಾರೆ. ಸ್ಥಳೀಯ ಪೊಲೀಸರು  ನೀಡಿದ ಮಾಹಿತಿ ಹಾಗೂ ಸ್ನಿಫ್ಟ್ ಕಾರು ರಸ್ತೆಯಲ್ಲಿ ತೆರಳಿದ ಕುರಿತ ಸಿಸಿಟಿವಿ ದೃಶ್ಯಾವಳಿಗಳನ್ನು ಆಧರಿಸಿ ಓರ್ವ ಆರೋಪಿಯನ್ನು ದೀಪಕ್ ಎಂದು ಪತ್ತೆ ಮಾಡಿದ್ದಾರೆ. ಮತ್ತಿಬ್ಬರ ಗುರುತು ಇನ್ನಷ್ಟೇ ಪತ್ತೆಯಾಗಬೇಕಿದ್ದು, ಆರೋಪಿಗಳ  ಬಂಧನಕ್ಕೆ ವ್ಯಾಪಕ ಬಲೆ ಬೀಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.