ದೇಶ

ಮಧ್ಯಪ್ರದೇಶ: ಮೂವರ ಮೃತದೇಹ ಪತ್ತೆ, ಓರ್ವನ ಶಿರಚ್ಛೇದ, ಮಾಟಮಂತ್ರದ ಶಂಕೆ

ಮಧ್ಯಪ್ರದೇಶದ ಕಟ್ನಿ ಜಿಲ್ಲೆಯಲ್ಲಿ ಮಂಗಳವಾರ ಮೂವರ ಮೃತದೇಹ ಪತ್ತೆಯಾಗಿದ್ದು, ಆ ಪೈಕಿ ಓರ್ವನ ಶಿರಚ್ಛೇದ...

ಮಧ್ಯಪ್ರದೇಶ: ಮೂವರ ಮೃತದೇಹ ಪತ್ತೆ, ಓರ್ವನ ಶಿರಚ್ಛೇದ, ಮಾಟಮಂತ್ರದ ಶಂಕೆ
ಸಾಂದರ್ಭಿಕ ಚಿತ್ರ
Published On :
ಭೋಪಾಲ್: ಮಧ್ಯಪ್ರದೇಶದ ಕಟ್ನಿ ಜಿಲ್ಲೆಯಲ್ಲಿ ಮಂಗಳವಾರ ಮೂವರ ಮೃತದೇಹ ಪತ್ತೆಯಾಗಿದ್ದು, ಆ ಪೈಕಿ ಓರ್ವನ ಶಿರಚ್ಛೇದ ಮಾಡಲಾಗಿದೆ ಮತ್ತು ತಲೆ ನಾಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೂವರನ್ನು ಕತ್ತು ಸೀಳಿ ಕೊಲೆ ಮಾಡಲಾಗಿದ್ದು, ಈ ಬರ್ಬರ ಹತ್ಯೆಯ ಹಿಂದೆ ಮಂತ್ರವಾದಿ ಅಥವಾ ಮಾನಸಿಕ ಅಸ್ವಸ್ಥನ ಕೈವಾಡವಿರುವ ಸಾಧ್ಯತೆ ಇದೆ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.
ಕಟ್ನಿ ಜಿಲ್ಲೆಯ ಚಪ್ರಾ ಗ್ರಾಮದಲ್ಲಿ ಸೋಮವಾರ ರಾತ್ರಿ ಈ ಘಟನೆ ನಡೆದಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಶಿಕಾಂತ್ ಶುಕ್ಲಾ ಅವರು ತಿಳಿಸಿದ್ದಾರೆ.
ಕೊಲೆಯಾದ ವ್ಯಕ್ತಿಗಳನ್ನು ಪುಸಿಯಾ ಬಾಯ್, ಜಗದೀಶ್ ಸಿಂಗ್ ರಜಪೂತ್ ಹಾಗೂ ಜಲಮ್ ಸಿಂಗ್ ಎಂದು ಗುರುತಿಸಲಾಗಿದ್ದು, ಹತ್ಯೆಯಾದ ವ್ಯಕ್ತಿಗಳಿಂದ ದುಷ್ಕರ್ಮಿಗಳು ಯಾವುದೇ ವಸ್ತುಗಳನ್ನು ದೋಚಿಲ್ಲ ಎಂದು ಅವರು ತಿಳಿಸಿದ್ದಾರೆ.
ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.