ವಿಶ್ವದ ಇತಿಹಾಸದಲ್ಲಿಯೇ ಕಾಂಗ್ರೆಸ್ ಅತ್ಯಂತ ಭ್ರಷ್ಟ ಪಕ್ಷ ಎಂಬುದು ಇಡೀ ದೇಶಕ್ಕೆ ಗೊತ್ತಾಗಲಿದೆ: ಸ್ವಾಮಿ
ವಿಶ್ವದ ಇತಿಹಾಸದಲ್ಲಿಯೇ ಕಾಂಗ್ರೆಸ್ ಅತ್ಯಂತ ಭ್ರಷ್ಟ ಪಕ್ಷ ಎಂಬುದು ಇಡೀ ದೇಶಕ್ಕೆ ಗೊತ್ತಾಗಲಿದೆ ಎಂದು ಬಿಜೆಪಿ ಹಿರಿಯ ನಾಯಕ ಸುಬ್ರಮಣಿಯನ್ ಸ್ವಾಮಿಯವರು...

Published On :
ನವದೆಹಲಿ: ವಿಶ್ವದ ಇತಿಹಾಸದಲ್ಲಿಯೇ ಕಾಂಗ್ರೆಸ್ ಅತ್ಯಂತ ಭ್ರಷ್ಟ ಪಕ್ಷ ಎಂಬುದು ಇಡೀ ದೇಶಕ್ಕೆ ಗೊತ್ತಾಗಲಿದೆ ಎಂದು ಬಿಜೆಪಿ ಹಿರಿಯ ನಾಯಕ ಸುಬ್ರಮಣಿಯನ್ ಸ್ವಾಮಿಯವರು ಮಂಗಳವಾರ ಹೇಳಿದ್ದಾರೆ.
ಕಾರ್ತಿ ಚಿದಂಬರಂ ಅವರ ಮನೆ ಮೇಲೆ ಸಿಬಿಐ ದಾಳಿ ಪ್ರಕರಣ ನಡೆಸಿರುವ ಹಿನ್ನಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ಕಾಂಗ್ರೆಸ್ ನಿಂದ ಮತ್ತೀನ್ನೇನು ನಿರೀಕ್ಷಿಸಲು ಸಾಧ್ಯೆ?...ವಿಶ್ವದ ಇತಿಹಾಸದಲ್ಲಿಯೇ ಕಾಂಗ್ರೆಸ್ ಅತ್ಯಂತ ಭ್ರಷ್ಟ ಪಕ್ಷ ಎಂಬುದು ಇಡೀ ದೇಶಕ್ಕೆ ಗೊತ್ತಾಗಲಿದೆ ಎಂದು ಹೇಳಿದ್ದಾರೆ.
ವಿದೇಶಿ ಹೂಡಿಕೆ ಉತ್ತೇಜನ ಮಂಡಳಿ(ಎಫ್ಐಪಿಬಿ)ಗೆ ಚಿದಂಬರಂ ಅವರು ಅಕ್ರಮವಾಗಿ ಅನುಮತಿ ನೀಡುತ್ತಿದ್ದರು. ಇದು ಪುತ್ರ ಕಾರ್ತಿ ಚಿದಂಬರಂಗೆ ಲಾಭವಾಗುತ್ತಿತ್ತು. ಕಾರ್ತಿ ಚಿದಂಬರಂ ಅವರ ನಿವಾಸ ಮೇಲೆ ಸಿಬಿಐ ದಾಳಿ ನಡೆಸಿರುವುದು ನಿರೀಕ್ಷಿತ. ಹಣಕಾಸು ಸಚಿವರಾಗಿದ್ದ ಸಂದರ್ಭದಲ್ಲಿ ಚಿದಂಬರಂ ಅವರು ಎಫ್ಐಪಿಬಿಗೆ ಅಕ್ರಮವಾಗಿ ಸಾಕಷ್ಟು ಬಾರಿ ಅನುಮತಿ ನೀಡಿದ್ದರು. ದಾಳಿಯಾಗಿರುವುದು ಅನಿವಾರ್ಯವಾಗಿತ್ತು. ದಾಳಿಯಿಂದ ಬಚ್ಚಿಟ್ಟಿರುವ ದಾಖಲೆಗಳು ಹಾಗೂ ಸಾಕ್ಷ್ಯಾಧಾರಗಳು ದೊರಕಲಿವೆ ಎಂದು ತಿಳಿಸಿದ್ದಾರೆ.
ಕಾರ್ತಿ ಚಿದಂಬರಂ ವಿದೇಶದಲ್ಲಿ ಅಕ್ರಮವಾಗಿ 21 ಬ್ಯಾಂಕ್ ಖಾತೆಗಳನ್ನು ಹೊಂದಿದ್ದಾರೆ. ಕಾರ್ತಿ ಚಿದಂಬರಂ ಅವರು ಹಲವು ದೇಶಗಳಲ್ಲಿ ಸಾಕಷ್ಟು ಮನೆಗಳನ್ನು ಕಟ್ಟಿದ್ದಾರೆ. 18 ದೇಶಗಳಲ್ಲಿ ಅಘೋಷಿತ ಆಸ್ತಿಗಳನ್ನು ಹೊಂದಿದ್ದಾರೆ. ಸಾಕಷ್ಟು ಅಕ್ರಮ ವರ್ಗಾವಣೆಗಳೂ ಕೂಡ ನಡೆದಿವೆ ಎಂದು ತಿಳಿಸಿದ್ದಾರೆ.
ದಾಳಿ ತಡವಾಗಿದ್ದಕ್ಕೆ ಬೇಸರವಾಗಿದೆ. ಆದರೆ, ಕೊನೆಗೂ ದಾಳಿ ನಡೆದಿರುವುದು ಕೊಂಚ ಸಮಾಧಾನಕರವಾಗಿದೆ ಎಂದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Congressಕಾಂಗ್ರೆಸ್P ChidambaramSubramanian Swamyಸುಬ್ರಮಣಿಯನ್ ಸ್ವಾಮಿಸಿಬಿಐ ದಾಳಿಚಿದಂಬರಂಕಾರ್ತಿ ಚಿದಂಬರಂKarti ChidambaramCBI raid
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


