ನನ್ನ ಧ್ವನಿ ಅಡಗಿಸುವುದು ಕೇಂದ್ರ ಸರ್ಕಾರದ ಉದ್ದೇಶ: ಸಿಬಿಐ ದಾಳಿ ಬಗ್ಗೆ ಚಿದಂಬರಂ
ಸಿಬಿಐ ದಾಳಿ ನಡೆದಿರುವ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ, ನನ್ನ ಧ್ವನಿ ಅಡಗಿಸುವುದು ಹಾಗೂ ಬರವಣಿಗೆ ನಿಲ್ಲುವಂತೆ ಮಾಡುವುದು ಕೇಂದ್ರ ಸರ್ಕಾರದ ಉದ್ದೇಶವಾಗಿದೆ ಎಂದಿದ್ದಾರೆ.

Published On :
ಚೆನ್ನೈ: ತಮ್ಮ ಹಾಗೂ ತಮ್ಮ ಪುತ್ರನ ಚೆನ್ನೈ ನಿವಾಸದ ಮೇಲೆ ಸಿಬಿಐ ದಾಳಿ ನಡೆದಿರುವ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ, ನನ್ನ ಧ್ವನಿ ಅಡಗಿಸುವುದು ಹಾಗೂ ಬರವಣಿಗೆ ನಿಲ್ಲುವಂತೆ ಮಾಡುವುದು ಕೇಂದ್ರ ಸರ್ಕಾರದ ಉದ್ದೇಶವಾಗಿದೆ. ಆದ್ದರಿಂದ ನನ್ನನ್ನು ಟಾರ್ಗೆಟ್ ಮಾಡಲು ಕೇಂದ್ರ ಸರ್ಕಾರ ಸಿಬಿಐ ಹಾಗೂ ಇತರ ಸಂಸ್ಥೆಗಳನ್ನು ಬಳಸಿಕೊಳ್ಳುತ್ತಿದೆ ಎಂದು ಆರೋಪಿಸಿದ್ದಾರೆ.
ವಿರೋಧಪಕ್ಷದ ನಾಯಕರು, ಪತ್ರಕರ್ತರು, ಅಂಕಣಕಾರರು, ಎನ್ ಜಿಒ ಗಳಿಗೆ ಮಾಡಿದಂತೆಯೇ ಕೇಂದ್ರ ಸರ್ಕಾರ ಸಿಬಿಐ ನ್ನು ಬಳಸಿಕೊಂಡು ನನ್ನ ಧ್ವನಿ ಅಡಗಿಸಲು ಯತ್ನಿಸುತ್ತಿದೆ. ಆದರೆ ನಾನು ಮಾತನಾಡುವುದನ್ನು, ಬರವಣಿಗೆಯನ್ನು ಮುಂದುವರೆಸುತ್ತೇನೆ ಎಂದು ಚಿದಂಬರಂ ಮಾಧ್ಯಮಗಳಿಗೆ ನೀಡಿರುವ ಹೇಳಿಕೆಯ ಮೂಲಕ ತಿಳಿಸಿದ್ದಾರೆ.
ಐಎನ್ಎಕ್ಸ್ ಮೀಡಿಯಾಗೆ ವಿದೇಶಿ ಹೂಡಿಕೆ ಉತ್ತೇಜನ ಮಂಡಳಿಯ(ಎಫ್ಐಪಿಬಿ) ಅನುಮತಿ ಪಡೆಯುವ ವಿಚಾರದಲ್ಲಿ ನಿಯಮಗಳನ್ನು ಉಲ್ಲಂಘಿಸಲಾಗಿದೆ. ಅಷ್ಟೇ ಅಲ್ಲದೇ ವಿದೇಶಿ ವಿನಿಮಯ ನಿರ್ವಹಣೆ ಕಾಯ್ದೆ(ಎಫ್ಇಎಂಎ) ಯನ್ನು ಉಲ್ಲಂಘನೆ, ಅಕ್ರಮ ಹಣ ವರ್ಗಾವಣೆ ಮಾಡಿರುವ ಆರೋಪದಡಿ ಪಿ.ಚಿದಂಬರಂ ಹಾಗೂ ಅವರ ಪುತ್ರ ಕಾರ್ತಿ ಚಿದಂಬರಂ ಅವರ ಚೆನ್ನೈ ನಿವಾಸದ ಮೇಲೆ ಹಾಗೂ ಪ್ರಕರಣಕ್ಕೆ ಸಂಬಂಧಿಸಿದಂತೆ 14 ಕಡೆಗಳಲ್ಲಿ ಸಿಬಿಐ ದಾಳಿ ನಡೆಸಿತ್ತು.
ಈ ಬಗ್ಗೆ ಹೇಳಿಕೆ ನೀಡಿರುವ ಚಿದಂಬರಂ ಎಫ್ಐಪಿಬಿ ನೂರಾರು ಪ್ರಕರಣಗಳಲ್ಲಿ ಅನುಮತಿ ನೀಡಿದೆ. ಎಫ್ಐಪಿಬಿಯಲ್ಲಿರುವ 5 ಕಾರ್ಯದರ್ಶಿಗಳು ಹಾಗೂ ಇನ್ನಿತರ ಅಧಿಕಾರಿಗಳ ವಿರುದ್ಧ ಆರೋಪವೇ ಇಲ್ಲ. ನನ್ನ ವಿರುದ್ಧವೂ ಆರೋಪವಿಲ್ಲ. ಎಫ್ಐಪಿಬಿ ಗೆ ಸಂಬಂಧಿಸಿದ ಪ್ರತಿಯೊಂದು ಪ್ರಕ್ರಿಯೆಯೂ ಕಾನೂನಾತ್ಮಕವಾಗಿಯೇ ನಡೆದಿದೆ ಎಂದು ಚಿದಂಬರಂ ಸಮರ್ಥನೆ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


