ದೇಶ

ದೇಶದ ಜನತೆ ತಲೆತಗ್ಗಿಸಲು ಬಿಡಲ್ಲ: ಪಾಕ್ ವಿರುದ್ಧ ಶೀಘ್ರದಲ್ಲೇ ಕ್ರಮ- ರಾಜನಾಥ್ ಸಿಂಗ್

ದೇಶದ ಜನತೆ ತಲೆ ತಗ್ಗಿಸಲು ಯಾವುದೇ ಕಾರಣಕ್ಕೂ ಬಿಡುವುದಿಲ್ಲ, ಪಾಕಿಸ್ತಾನ ವಿರುದ್ಧ ಶೀಘ್ರದಲ್ಲಿಯೇ ಕಠಿಣ ಕ್ರಮ ಕೈಗೊಳ್ಳುತ್ತೇವೆಂದು ಕೇಂದ್ರ ಗೃಹ ಸಚಿವ ರಾಜನಾಥ ಸಿಂಗ್ ಅವರು ಸೋಮವಾರ...

ದೇಶದ ಜನತೆ ತಲೆತಗ್ಗಿಸಲು ಬಿಡಲ್ಲ: ಪಾಕ್ ವಿರುದ್ಧ ಶೀಘ್ರದಲ್ಲೇ ಕ್ರಮ- ರಾಜನಾಥ್ ಸಿಂಗ್
ಕೇಂದ್ರ ಗೃಹ ಸಚಿವ ರಾಜನಾಥ ಸಿಂಗ್
Published On :
ನವದೆಹಲಿ: ದೇಶದ ಜನತೆ ತಲೆ ತಗ್ಗಿಸಲು ಯಾವುದೇ ಕಾರಣಕ್ಕೂ ಬಿಡುವುದಿಲ್ಲ, ಪಾಕಿಸ್ತಾನ ವಿರುದ್ಧ ಶೀಘ್ರದಲ್ಲಿಯೇ ಕಠಿಣ ಕ್ರಮ ಕೈಗೊಳ್ಳುತ್ತೇವೆಂದು ಕೇಂದ್ರ ಗೃಹ ಸಚಿವ ರಾಜನಾಥ ಸಿಂಗ್ ಅವರು ಸೋಮವಾರ ಹೇಳಿದ್ದಾರೆ. 
ಗಡಿಯಲ್ಲಿ ಉಗ್ರರ ಚಟುವಟಿಕೆಗಳು ಹೆಚ್ಚಾಗುತ್ತಿದ್ದು, ಭಾರತೀಯ ಸೇನೆ ಮೇಲೆ ಪಾಕಿಸ್ತಾನ ಅಪ್ರಚೋದಿತ ಗುಂಡಿನ ದಾಳಿ ನಡೆಸುತ್ತಿರುವ ಹಿನ್ನಲೆಯಲ್ಲಿ ಕಾಶ್ಮೀರ ಪರಿಸ್ಥಿತಿ ಕುರಿತಂತೆ ಖಾಸಗಿ ಮಾಧ್ಯಮವೊಂದರ ಜೊತೆ ಮಾತನಾಡಿರುವ ರಾಜನಾಥ ಸಿಂಗ್ ಅವರು, ನಾವು ಯಾವುದನ್ನೂ ಹೇಳುವುದಿಲ್ಲ, ಮಾಡಿ ತೋರಿಸುತ್ತೇವೆಂದು ಹೇಳಿದ್ದಾರೆ. 
ದೇಶದ ಜನತೆ ಯಾವುದೇ ಕಾರಣಕ್ಕೂ ತಲೆ ತಗ್ಗಿಸಲು ನಾವು ಬಿಡುವುದಿಲ್ಲ, ಶೀಘ್ರದಲ್ಲಿ ಪಾಕಿಸ್ತಾನದ ಉದ್ಧಟತನಕ್ಕೆ ದಿಟ್ಟ ಉತ್ತರವನ್ನು ನೀಡುತ್ತೇವೆ. ಪ್ರಸ್ತುತ ಇರುವ ಪರಿಸ್ಥಿತಿಯಲ್ಲಿ ಇಷ್ಟನ್ನು ಮಾತ್ರ ಹೇಳಬಲ್ಲೆ ಎಂದು ತಿಳಿಸಿದ್ದಾರೆ. 
ನಮ್ಮ ಎದೆಯಲ್ಲೂ ನೋಡಿದೆ. ಆದರೆ, ಈ ನೋವು ದೀರ್ಘಕಾಲಿಕವರೆಗೂ ಮುಂದುವರೆಯಲು ನಾವು ಬಿಡುವುದಿಲ್ಲ ಎಂದಿದ್ದಾರೆ. 
ಇದೇ ವೇಳೆ ಯುವ ಸೇನಾಧಿಕಾರಿ ಉಮರ್ ಫಯಾಜ್ ಹತ್ಯೆ ಪ್ರಕರಣ ಕುರಿತಂತೆ ಉಗ್ರರ ವಿರುದ್ದ ಸರ್ಕಾರ ಕ್ರಮ ಕೈಗೊಳ್ಳಲಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿರುವ ಅವರು, ಕಾದು ನೋಡಿ ಎಂದು ಮಾರ್ಮಿಕವಾಗಿ ನುಡಿದಿದ್ದಾರೆ. 
ಉಮರ್ ಫಯಾಜ್ ಪ್ರಕರಣ ಪ್ರತೀ ಭಾರತೀಯನಿಗೂ ನೋವನ್ನು ತಂದಿದೆ. ಉಮರ್ ಫಯಾಜ್ ಯುವಕರಿಗೆ ಮಾದರಿಯಾಗಿದ್ದಾರೆ ಎಂದು ಹೇಳಿದ್ದಾರೆ.  

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.