ಕಪಿಲ್ ಮಿಶ್ರಾ ಉಪವಾಸ ಅಂತ್ಯ: ಆಸ್ಪತ್ರೆಯಿಂದ ಮನೆಗೆ
5 ದಿನದಿಂದ ಉಪವಾಸ ಮಾಡುತ್ತಿದ್ದ ಬಂಡುಕೋರ ಆಮ್ ಆದ್ಮಿ ಪಕ್ಷದ ಮುಖಂಡ ಕಪಿಲ್ ಮಿಶ್ರಾ ಅವರು ಸೋಮವಾರ ತಮ್ಮ ನಿರಶನವನ್ನು ಅಂತ್ಯಗೊಳಿಸಿದ್ದು, ಆಸ್ಪತ್ರೆಯಿಂದ ಬಿಡುಗಡೆಗೊಂಡು ಮನೆಗೆ...

Published On :
ನವದೆಹಲಿ: 5 ದಿನದಿಂದ ಉಪವಾಸ ಮಾಡುತ್ತಿದ್ದ ಬಂಡುಕೋರ ಆಮ್ ಆದ್ಮಿ ಪಕ್ಷದ ಮುಖಂಡ ಕಪಿಲ್ ಮಿಶ್ರಾ ಅವರು ಸೋಮವಾರ ತಮ್ಮ ನಿರಶನವನ್ನು ಅಂತ್ಯಗೊಳಿಸಿದ್ದು, ಆಸ್ಪತ್ರೆಯಿಂದ ಬಿಡುಗಡೆಗೊಂಡು ಮನೆಗೆ ಮರಳಿದ್ದಾರೆ.
ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ವಿರುದ್ಧ ಬಂಡಾವೆದ್ದಿದ್ದ ಕಪಿಲ್ ಮಿಶ್ರಾ ಅವರು ಕೇಜ್ರಿವಾಲ್ ವಿರುದ್ಧ ಸಾಕಷ್ಟು ಭ್ರಷ್ಟಾಚಾರ ಗಂಭೀರ ಆರೋಪಗಳನ್ನು ಮಾಡಿದ್ದರು. ಅಲ್ಲದೆ, ತನಿಖೆಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹಕ್ಕೆ ಇಳಿಸಿದ್ದರು.
ಕೆಲ ದಿನಗಳ ಹಿಂದಷ್ಟೇ ಕೇಜ್ರಿವಾಲ್ ವಿರುದ್ಧ ಮತ್ತೊಂದು ಬಾಂಬ್ ಸಿಡಿಸಲು ಪತ್ರಿಕಾಗೋಷ್ಟಿ ನಡೆಸಿದ್ದ ಕಪಿಲ್ ಮಿಶ್ರಾ ಅವರು, ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಿದ್ದಂತೆಯೇ ಪ್ರಜ್ಞೆ ತಪ್ಪಿ ಬಿದ್ದಿದ್ದರು. ನಂತರ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಕಪಿಲ್ ಮಿಶ್ರಾ ಸತ್ಯಾಗ್ರಹ ಕುರಿತಂತೆ ಪ್ರತಿಕ್ರಿಯೆ ನೀಡಿದ್ದ ದೆಹಲಿ ಉಪ ಮುಖ್ಯಮಂತ್ರಿ ಮನೀಷ್ ಸಿಸೋಡಿಯಾ ಅವರು, ಸುಳ್ಳುಗಳ ಆಧಾರದ ಮೇಲೆ ಸತ್ಯಾಗ್ರಹ ನಡೆಸಬಾರದು ಎಂದು ಹೇಳಿದ್ದರು.
ಆಸ್ಪತ್ರೆಯಿಂದ ಬಿಡುಗಡೆಗೊಂಡ ಬಳಿಕ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಕಪಿಲ್ ಮಿಶ್ರಾ ಅವರು, ಉಪವಾಸ ಸತ್ಯಾಗ್ರಹ ಕೈಬಿಡುವವರೆಗೂ ಆಸ್ಪತ್ರೆಯಿಂದ ಬಿಡುಗಡೆ ಮಾಡುವುದಿಲ್ಲ ಎಂದು ರಾಮ್ ಮನೋಹರ್ ಲೋಹಿಯಾ ಆಸ್ಪತ್ರೆಯ ವೈದ್ಯರು ಹೇಳಿದ್ದರು. ಹೀಗಾಗಿ ನಾನು ಉಪವಾಸ ಸತ್ಯಾಗ್ರಹವನ್ನು ಕೈಬಿಟ್ಟಿದ್ದೇನೆ. ಸಿಬಿಐ ಹಾಗೂ ಸಿಬಿಡಿಟಿ ಬಳಿ ಹೋಗಿ, ಹವಾಲ, ಕಪ್ಪುಹಣ, ಭ್ರಷ್ಟಾಚಾರ, ಶೆಲ್ ಕಂಪನಿಗಳಿಂದ ಪಡೆದ ಹಣ ಕುರಿತಂತೆ ಕೇಜ್ರಿವಾಲ್ ವಿರುದ್ಧ ದೂರು ದಾಖಳಿಸುತ್ತೇನೆಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


