ದೆಹಲಿ ಪೊಲೀಸರಿಗೆ ಹಿನ್ನಡೆ: ಜೆಎನ್'ಯು ವಿದ್ಯಾರ್ಥಿ ನಾಪತ್ತೆ ಪ್ರಕರಣ ಸಿಬಿಐಗೆ ಹಸ್ತಾಂತರ
ಸಾಕಷ್ಟು ಸುದ್ದಿಗೆ ಗ್ರಾಸವಾಗಿದ್ದ ಜವಾಹರ್ ಲಾಲ್ ನೆಹರು ವಿಶ್ವವಿದ್ಯಾಲಯದ ವಿದ್ಯಾರ್ಥಿ ನಜೀಬ್ ಅಹ್ಮದ್ ನಾಪತ್ತೆ ಪ್ರಕರಣವನ್ನು ಮಂಗಳವಾರ ಸಿಬಿಐ ತನಿಖೆಗೆ ಹಸ್ತಾಂತರಿಸಲಾಗಿದೆ...

Published On :
ನವದೆಹಲಿ: ಸಾಕಷ್ಟು ಸುದ್ದಿಗೆ ಗ್ರಾಸವಾಗಿದ್ದ ಜವಾಹರ್ ಲಾಲ್ ನೆಹರು ವಿಶ್ವವಿದ್ಯಾಲಯದ ವಿದ್ಯಾರ್ಥಿ ನಜೀಬ್ ಅಹ್ಮದ್ ನಾಪತ್ತೆ ಪ್ರಕರಣವನ್ನು ಮಂಗಳವಾರ ಸಿಬಿಐ ತನಿಖೆಗೆ ಹಸ್ತಾಂತರಿಸಲಾಗಿದೆ.
ನಜೀಬ್ ಅಹ್ಮದ್ ನಾಪತ್ತೆ ಪ್ರಕರಣ ಸಂಬಂಧ ಇಂದು ವಿಚಾರಣೆ ನಡೆಸಿರುವ ದೆಹಲಿ ನ್ಯಾಯಾಲಯ ಪ್ರಕರಣವನ್ನು ಸಿಬಿಐ ತನಿಖೆಗೆ ಹಸ್ತಾಂತರಿಸಿದೆ ಎಂದು ತಿಳಿದುಬಂದಿದೆ.
ವಿದ್ಯಾರ್ಥಿ ನಾಪತ್ತೆ ಪ್ರಕರಣ ಸಂಬಂಧದ ತನಿಖೆಯಲ್ಲಿ ದೆಹಲಿ ಪೊಲೀಸರು ವಿಳಂಬ ನೀತಿಯನ್ನು ಅನುಸರಿಸುತ್ತಿದ್ದು, ಪ್ರಕರಣದ ತನಿಖೆಯಲ್ಲಿ ಯಾವುದೇ ಪ್ರಗತಿಗಳು ಕಂಡಬರದ ಹಿನ್ನಲೆಯಲ್ಲಿ ಸಿಬಿಐ ತನಿಖೆಗೆ ಆದೇಶಿಸಲಾಗಿದೆ ಎಂದು ವರದಿಗಳು ತಿಳಿಸಿವೆ.
ಕಳೆದ 2016 ಅಕ್ಟೋಬರ್ 14ರಂದು ಜೆಎನ್ ಯು ವಿದ್ಯಾರ್ಥಿ ನಜೀಬ್ ಹಾಗೂ ಎಬಿವಿಪಿ ಕಾರ್ಯಕರ್ತರೊಂದಿಗೆ ಜಗಳವಾಗಿತ್ತು, ಆ ಜಗಳ ಬಳಿಕ ನಜೀಬ್ ನಾಪತ್ತೆಯಾಗಿದ್ದ. ಹೀಗಾಗಿ ಆರ್ ಎಸ್ ಎಸ್ ಬೆಂಬಲದ ಎಬಿವಿಪಿ ಸಂಘಟನೆ ಕಾರ್ಯಕರ್ತರ ಮೇಲೆ ಪೊಲೀಸರು ಅನುಮಾನದ ಆಧಾರದ ಮೇರೆಗೆ ಪ್ರಕರಣ ದಾಖಲಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ನವದೆಹಲಿNew DelhiCBIಸಿಬಿಐDelhi High CourtDelhi Policeದೆಹಲಿ ಪೊಲೀಸ್ದೆಹಲಿ ಹೈಕೋರ್ಟ್JNU student Missing Caseಜೆಎನ್ ಯು ವಿದ್ಯಾರ್ಥಿ ನಾಪತ್ತೆ ಪ್ರಕರಣ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


