ದೇಶ

ಅರುಣಾಚಲ ಪ್ರದೇಶದಲ್ಲಿ ಚಂಡಮಾರುತ: ಓರ್ವ ಸಾವು, 100 ಕ್ಕೂ ಅಧಿಕ ಮನೆಗಳು ನಾಶ

ಅರುಣಾಚಲ ಪ್ರದೇಶದಲ್ಲಿ ಉಂಟಾದ ಬಿರುಗಾಳಿ, ಚಂಡಮಾರುತ ಹಾಗೂ ಸತತ ಮಳೆಯಿಂದಾಗಿ ವ್ಯಕ್ತಿಯೊಬ್ಬ ಮೃತಪಟ್ಟು...

ಅರುಣಾಚಲ ಪ್ರದೇಶದಲ್ಲಿ ಚಂಡಮಾರುತ: ಓರ್ವ ಸಾವು, 100 ಕ್ಕೂ ಅಧಿಕ ಮನೆಗಳು ನಾಶ
ಸಾಂದರ್ಭಿಕ ಚಿತ್ರ
Published On :
ಇಟಾನಗರ್: ಅರುಣಾಚಲ ಪ್ರದೇಶದಲ್ಲಿ ಉಂಟಾದ ಬಿರುಗಾಳಿ, ಚಂಡಮಾರುತ ಹಾಗೂ ಸತತ ಮಳೆಯಿಂದಾಗಿ ವ್ಯಕ್ತಿಯೊಬ್ಬ ಮೃತಪಟ್ಟು 100ಕ್ಕೂ ಅಧಿಕ ಮಂದಿ ಮನೆ ಮನೆ  ಕಳೆದುಕೊಂಡಿದ್ದಾರೆ.
ನಿನ್ನೆ ಮುಂಜಾನೆ ಉಂಟಾದ ಸತತ ಮಳೆ, ಬಿರುಗಾಳಿಗೆ ನಾಮ್ಸೈ ಜಿಲ್ಲೆಯ ನ್ಯು ಮೊಹೊಂಗ್ ಪ್ರದೇಶದಲ್ಲಿ ವ್ಯಕ್ತಿಯೊಬ್ಬ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬಿರುಗಾಳಿ ಸುಮಾರು 90 ನಿಮಿಷಗಳ ಕಾಲ  ಸುರಿದಿದ್ದು ಸುಮಾರು 180 ಮನೆಗಳು ನಾಶವಾಗಿವೆ. ದನ ಕರುಗಳ ದೊಡ್ಡಿಗಳು, ನೀರು, ಕುಡಿಯುವ ನೀರಿನ ಪೂರೈಕೆಯಲ್ಲಿ ವ್ಯತ್ಯಯವುಂಟಾಗಿದೆ.
ಅಲ್ಲಲ್ಲಿ ಮರಗಳು ಉರುಳಿ ಬಿದ್ದು ರಸ್ತೆಗಳಲ್ಲಿ ಸಂಚಾರಕ್ಕೆ ವ್ಯತ್ಯಯವುಂಟಾಗಿದೆ. ಸ್ಥಳೀಯ ಆಡಳಿತ ಮತ್ತು ಪೊಲೀಸರು ರಕ್ಷಣೆಗೆ ಧಾವಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.