ದೇಶ

ತಮಿಳುನಾಡು ಆರೋಗ್ಯ ಸಚಿವ ವಿಜಯ್ ಭಾಸ್ಕರ್ ಮನೆ ಮೇಲೆ ಐಟಿ ದಾಳಿ

ತಮಿಳುನಾಡು ಆರೋಗ್ಯ ಸಚಿವ ಸಿ. ವಿಜಯ ಭಾಸ್ಕರ್ ಅವರ ನಿವಾಸದ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ...

ತಮಿಳುನಾಡು ಆರೋಗ್ಯ ಸಚಿವ ವಿಜಯ್ ಭಾಸ್ಕರ್ ಮನೆ ಮೇಲೆ ಐಟಿ ದಾಳಿ
ವಿಜಯ ಭಾಸ್ಕರ್
Published On :
ಚೆನ್ನೈ: ತಮಿಳುನಾಡು ಆರೋಗ್ಯ ಸಚಿವ ಸಿ. ವಿಜಯ ಭಾಸ್ಕರ್ ಅವರ ನಿವಾಸದ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಪುದುಕೊಟ್ಟೈನಲ್ಲಿರುವ ಭಾಸ್ಕರ್ ಅವರ ಮನೆ ಮೇಲೆ ದಾಳಿ ಮಾಡುವ ಮುನ್ನ ಅಂದರೆ ಮೇ-3 ರಂದು ಐಟಿ ಇಲಾಖೆ ವಿಜಯ ಭಾಸ್ಕರ್ ಅವರ ಪತ್ನಿ ಅವರಿಗೆ ನೋಟೀಸ್ ನೀಡಿತ್ತು.
ಕಳೆದ ತಿಂಗಳು ಚೆನ್ನೈನ ಗ್ರೀನ್ ವೇಸ್ ರಸ್ತೆಯಲ್ಲಿರುವ ವಿಜಯಭಾಸ್ಕರ್ ಅವರ ನಿವಾಸದ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದರು. 
ವಿಜಯ್ ಭಾಸ್ಕರ್ ಅವರ ಹಾಗೂ ಅವರ ಸಂಬಂಧಿಕರಿಗೆ ಸೇರಿದ ಹಲವು ಸ್ಥಳಗಳ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದರು. ಆರ್.ಕೆ ನಗರ ಉಪ ಚುನಾವಣೆಯಲ್ಲಿ ಏಪ್ರಿಲ್ 12 ರಂದು ಹಣ ಹಂಚಿಕೆಯಲ್ಲಿ ತೊಡಗಿದ್ದರು ಎಂಬ ಆರೋಪಗಳು ಕೇಳಿ ಬಂದಿದ್ದವು.
ನಾವು ನೀಡಿದ ಸಹಕಾರವನ್ನು ದುರುಪಯೋಗ ಪಡಿಸಿಕೊಂಡು ತೆರಿಗೆ ಇಲಾಖೆ ಕಿರುಕುಳ ನೀಡುತ್ತಿದ್ದಾರೆಂದು ವಿಜಯ್ ಭಾಸ್ಕರ್ ಆರೋಪಿಸಿದ್ದಾರೆ, ಇಡೀ ರಾಜ್ಯಾದ್ಯಂತ ಐಟಿ ಇಲಾಖೆ ಸುಮಾರು 23 ಸ್ಥಳಗಳಲ್ಲಿ ದಾಳಿ ನಡೆಸಿತ್ತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.