ಕರ್ನಾಟಕ ರಾಜ್ಯ ಆಹಾರ ಇಲಾಖೆ ಆಯುಕ್ತ ಅನುರಾಗ್ ತಿವಾರಿ ಶವ ಪತ್ತೆ!
ಕರ್ನಾಟಕದ ಐಎಎಸ್ ಅಧಿಕಾರಿ ಅನುರಾಗ್ ತಿವಾರಿ ಬುಧವಾರ ಶವವಾಗಿ ಪತ್ತೆಯಾಗಿದ್ದು , ಹತ್ಯೆಗೈದಿರುವ ಶಂಕೆ ವ್ಯಕ್ತವಾಗಿದೆ....

Published On :
ಲಕ್ನೋ: ಕರ್ನಾಟಕದ ಐಎಎಸ್ ಅಧಿಕಾರಿ ಅನುರಾಗ್ ತಿವಾರಿ ಬುಧವಾರ ಶವವಾಗಿ ಪತ್ತೆಯಾಗಿದ್ದು , ಹತ್ಯೆಗೈದಿರುವ ಶಂಕೆ ವ್ಯಕ್ತವಾಗಿದೆ.
ಕೇಡರ್ 2007ರ ಐಎಎಸ್ ಅಧಿಕಾರಿಯಾಗಿದ್ದ ಅನುರಾಗ್ ತಿವಾರಿ ಅವರ ಲಕ್ನೋದ ಹಜರತ್ ಗಂಜ್ ನಲ್ಲಿರುವ ಮೀರಾಬಾಯಿ ಗೆಸ್ಟ್ ಹೌಸ್ ಬಳಿ ದೊರೆತಿದ್ದು ಹಲವಾರು ಅನುಮಾನಗಳಿಗೆ ಕಾರಣವಾಗಿದೆ.
ತಿವಾರಿ ಅವರು, ಕರ್ನಾಟಕ ರಾಜ್ಯ ಸರ್ಕಾರದ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಕಮೀಷನರ್ ಆಗಿ ಸೇವೆ ಸಲ್ಲಿಸುತ್ತಿದ್ದರು. ಇತ್ತೀಚೆಗಷ್ಟೇ ನಾಲ್ಕು ವಾರಗಳ ರಜೆ ಮೇರೆಗೆ ಅವರು ತಮ್ಮ ಊರಿಗೆ ತೆರಳಿದ್ದರು.
1981ರ ಮೇ 17ರಂದು ಜನಿಸಿದ್ದ ಅನುರಾಗ್ ತಿವಾರಿ, ಅವರ ಹುಟ್ಟುಹಬ್ಬದಂದೇ (ಮೇ 17) ಶವವಾಗಿ ಪತ್ತೆಯಾಗಿರುವುದು ವಿಪರ್ಯಾಸ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


