ಶ್ರೀನಗರ: ಪಿಡಿಪಿ ನಾಯಕನ ಸಹೋದರ ಅನುಮಾನಾಸ್ಪದ ಸಾವು
ಜಮ್ಮು ಮತ್ತು ಕಾಶ್ಮೀರದ ಆಡಳಿತಾರೂಢ ಪಕ್ಷ ಪಿಡಿಪಿ ಪಕ್ಷದ ನಾಯಕರೊಬ್ಬರ ಸಹೋದರ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ...

Published On :
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಆಡಳಿತಾರೂಢ ಪಕ್ಷ ಪಿಡಿಪಿ ಪಕ್ಷದ ನಾಯಕರೊಬ್ಬರ ಸಹೋದರ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ.
ಹಂದ್ವಾರ ಪಿಡಿಪಿ ಅಧ್ಯಕ್ಷ ಮೊಹಮ್ಮದ್ ಶಫಿ ದಾರ್ ಅವರ ಸಹೋದರ ರೆಯಾಜ್ ಅಹ್ಮದ್ ದಾರ್ ಎಂಬುವವರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದು, ಹೋಟೆಲ್ ಒಂದರಲ್ಲಿ ಶವ ಪತ್ತೆಯಾಗಿದೆ.
ದಲ್ಗೇಟ್ ಎಂಬ ಪ್ರದೇಶದಲ್ಲಿರುವ ಹೋಟೆಲ್ ವೊಂದರಲ್ಲಿ ಶವ ಪತ್ತೆಯಾಗಿದ್ದು, ದೇಹದ ಮೇಲೆ ಯಾವುದೇ ಗಾಯದ ಗುರುತುಗಳು ಪತ್ತೆಯಾಗಿಲ್ಲ ಎಂದು ಅಧಿಕಾರಗಳು ತಿಳಿಸಿದ್ದಾರೆ. ಪ್ರಸ್ತುತ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Crimeಜಮ್ಮು ಮತ್ತು ಕಾಶ್ಮೀರJammu and KashmirಅಪರಾಧbrotherಸಹೋದರSuspicious deathಅನುಮಾನಾಸ್ಪದ ಸಾವುPDP leaderಪಿಡಿಪಿ ನಾಯಕ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


