ಬಡ ಮಕ್ಕಳ ಶಿಕ್ಷಣ ವೆಚ್ಚ ಭರಿಸಲು ಮುಂದಾದ ನಟ ಸುಶಾಂತ್ ಸಿಂಗ್ ರಜಪೂತ್
ಬಡ ಮಕ್ಕಳಿಗೆ ಉಚಿತವಾಗಿ ಶಿಕ್ಷಣ ಕೊಡಿಸುವ ಮಹತ್ತರವಾದ ಕಾರ್ಯವೊಂದಕ್ಕೆ ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಮುಂದಾಗಿದ್ದಾರೆ...

Published On :
ಮುಂಬೈ: ಬಡ ಮಕ್ಕಳಿಗೆ ಉಚಿತವಾಗಿ ಶಿಕ್ಷಣ ಕೊಡಿಸುವ ಮಹತ್ತರವಾದ ಕಾರ್ಯವೊಂದಕ್ಕೆ ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಮುಂದಾಗಿದ್ದಾರೆ.
ಎಂಜಿನಿಯರಿಂಗ್ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿದ್ದ ಸುಶಾಂತ್ ಅವರು ವಿದೇಶದಲ್ಲಿ ಉನ್ನತ ವ್ಯಾಸಾಂಗ ಮಾಡುವ ಆಸೆಯನ್ನು ಇಟ್ಟುಕೊಂಡಿದ್ದರು. ಆದರೆ, ಹಣಕಾಸಿನ ಮುಗ್ಗಟ್ಟಿನಿಂದಾಗಿ ವಿದ್ಯಾಭ್ಯಾಸ ಮುಂದುವರೆಸಲು ಸಾಧ್ಯವಾಗಿರಲಿಲ್ಲ. ಹೀಗಾಗಿ ತಮಗೆ ಎದುರಾಗಿದ್ದ ಪರಿಸ್ಥಿತಿ ಇತರೆ ಮಕ್ಕಳಿಗೆ ಎದುರಾಗಬಾರದೆಂದು ಚಿಂತಿಸಿರುವ ನಟ, ಬಡ ಮಕ್ಕಳಿಕೆ ಉಚಿತವಾಗಿ ಶಿಕ್ಷಣವನ್ನು ಕೊಡಿಸಿರುವ ಮಹತ್ತರ ಕೆಲಸ ಮಾಡಲು ನಿರ್ಧರಿಸಿದ್ದಾರೆ.
ಇದಕ್ಕಾಗಿ ಸುಶಾಂತ್ ಅವರು ವಿದ್ಯಾರ್ಥಿಗಲನ್ನು ಆಯ್ಕೆ ಮಾಡುವ ಪ್ರಕ್ರಿಯೆಯನ್ನು ಆರಂಭಿಸಿದ್ದು, ಮೆರಿಟ್ ಟೆಸ್ಟ್ ಮೂಲಕ ಮಕ್ಕಳನ್ನು ಆಯ್ಕೆ ಮಾಡಿ, ಬಳಿಕ ಅವರ ಒಂದು ವರ್ಷದ ಶಿಕ್ಷಣದ ಎಲ್ಲಾ ವೆಚ್ಚವನ್ನು ಭರಸಲಿದ್ದಾರೆ. 1 ವರ್ಷದ ಬಳಿಕ ಮತ್ತೆ ಆ ಮಕ್ಕಳು ಮೆರಿಟ್ ಪರೀಕ್ಷೆಯನ್ನು ಎದುರಿಸಬೇಕಾಗುತ್ತದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


