ದೇಶ

ನಟಿ ರೀಮಾ ಲಾಗೂ ನಿಧನ: ಪ್ರಧಾನಿ ಮೋದಿ ಸಂತಾಪ

ಖ್ಯಾತ ಬಾಲಿವುಡ್ ನಟಿ ರೀಮಾ ಲಾಗೂ ಅವರು ವಿಧಿವಶರಾಗಿರುವ ಹಿನ್ನಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸಂತಾಪ ಸೂಚಿಸಿದ್ದಾರೆ...

ನಟಿ ರೀಮಾ ಲಾಗೂ ನಿಧನ: ಪ್ರಧಾನಿ ಮೋದಿ ಸಂತಾಪ
ಪ್ರಧಾನಮಂತ್ರಿ ನರೇಂದ್ರ ಮೋದಿ
Published On :
ನವದೆಹಲಿ: ಖ್ಯಾತ ಬಾಲಿವುಡ್ ನಟಿ ರೀಮಾ ಲಾಗೂ ಅವರು ವಿಧಿವಶರಾಗಿರುವ ಹಿನ್ನಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸಂತಾಪ ಸೂಚಿಸಿದ್ದಾರೆ. 
ರೀಮಾ ಲಾಗೂ ಅವರು ನಿಧನರಾಗಿರುವ ಹಿನ್ನಲೆಯಲ್ಲಿ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಪ್ರಧಾನಿ ಮೋದಿಯವರು, ರೀಮಾ ಲಾಗೂ ಬಹುಮುಖ ನಟಿಯಾಗಿದ್ದರು. ಸಿನಿಮಾ ಹಾಗೂ ಟಿವಿ ಜಗತ್ತಿನಲ್ಲಿ ಅತ್ಯಂತ ಪ್ರಭಾವ ಬೀರಿದ ನಟಿಯಾಗಿದ್ದರು. ಅವರ ಅಗಲಿಕೆ ತೀವ್ರ ನೋವನ್ನುಂಟು ಮಾಡಿದೆ. ರೀಮಾ ಲಾಗೂ ಅಗಲಿಕೆಗೆ ಈ ಮೂಲಕ ತೀವ್ರ ಸಂತಾಪವನ್ನು ಸೂಚಿಸುತ್ತೇನೆಂದು ಹೇಳಿದ್ದಾರೆ. 
1958ರಲ್ಲಿ ಜನಿಸಿದ್ದ ರೀಮಾ 1970 ರ ದಶಕದಲ್ಲಿ ಮರಾಠಿ ರಂಗಭೂಮಿ ಮೂಲಕ ಸಿನಿಮಾ ರಂಗಕ್ಕೆ ಪಾದಾರ್ಪಣೆ ಮಾಡಿ ಹಲವು ಹಿಂದಿ ಚಿತ್ರಗಳಲ್ಲಿ ಪೋಷಕ ಸೇರಿ ಇತರೆ ಪಾತ್ರಗಳಲ್ಲಿ ಅಭಿನಯಿಸಿ ಸೈ ಎನಿಸಿಕೊಂಡಿದ್ದರು.
ಅನಾರೋಗ್ಯದಿಂದಾಗಿ ಕೆಲ ದಿನಗಳ ಹಿಂದಷ್ಟೇ ರೀಮಾ ಅವರು ಮುಂಬೈನ ಕೋಕಿಲಾ ಬೇನ್ ಅಂಬಾನಿ ಆಸ್ಪತ್ರೆಗೆ ದಾಖಲಾಗಿದ್ದರು. ಇಂದು ಬೆಳಿಗ್ಗೆ ಲಘು ಹೃದಯಾಘಾತದಿಂದಾಗಿ ವಿಧಿವಶರಾಗಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.