1 ಕೋಟಿ ರೂ ಮೌಲ್ಯದ ಹಳೆಯ 500, 1000 ರೂ ಮುಖಬೆಲೆ ನೋಟು ವಶ: ಮೂವರ ಬಂಧನ
ಒಂದು ಕೋಟಿ ರೂಪಾಯಿ ಮೌಲ್ಯದ ಹಳೆಯ 500, 1000 ಮುಖಬೆಲೆಯ ನೋಟುಗಳನ್ನು ವಶಪಡಿಸಿಕೊಂಡಿರುವ ಥಾಣೆ ಪೊಲೀಸರು ಮೂವರನ್ನು ಬಂಧಿಸಿದ್ದಾರೆ.

Published On :
ಥಾಣೆ: ಒಂದು ಕೋಟಿ ರೂಪಾಯಿ ಮೌಲ್ಯದ ಹಳೆಯ 500, 1000 ಮುಖಬೆಲೆಯ ನೋಟುಗಳನ್ನು ವಶಪಡಿಸಿಕೊಂಡಿರುವ ಥಾಣೆ ಪೊಲೀಸರು ಮೂವರನ್ನು ಬಂಧಿಸಿದ್ದಾರೆ.
ಮುಂಬ್ರಾ ಪೊಲೀಸ್ ಠಾಣೆಯ ಅಧಿಕಾರಿಗಳು ಹಳೆಯ ನೋಟುಗಳನ್ನು ಸಾಗಿಸುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದು ದಾಳಿ ನಡೆಸಿ, ಖಾಸಗಿ ಬ್ಯಾಂಕ್ ನ ಉದ್ಯೋಗಿಯೂ ಸೇರಿದಂತೆ ಮೂವರನ್ನು ಬಂಧಿಸಿದ್ದಾರೆ. ಹೊಸ ನೋಟುಗಳ ಬಿಲ್ ಗಳಿಗೆ ಬದಲಾಗಿ ಹಳೆಯ ನೋಟುಗಳನ್ನು ಬದಲಾವಣೆ ಮಾಡುವುದಕ್ಕೆ ಸಂಚು ರೂಪಿಸಿದ್ದರು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.
ಪೊಲೀಸರು ಬಂಧಿತರ ವಿರುದ್ಧ ಪ್ರಕರಣ ದಾಖಲಿಸಿದ್ದು ವಿಚಾರಣೆ ಮುಂದುವರೆದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


