ದೇಶ

ಚಿಟ್ ಫಂಡ್ ಹಗರಣ: ಟಿಎಂಸಿ ಸಂಸದ ಸುದೀಪ್ ಬಂಡೋಪಧ್ಯಾಯಗೆ ಜಾಮೀನು

ರೋಸ್ ವ್ಯಾಲಿ ಚಿಟ್ ಫಂಡ್ ಪ್ರಕರಣ ಸಂಬಂಧ ಬಂಧನಕ್ಕೊಳಗಾಗಿದ್ದ ತೃಣಮೂಲ ಕಾಂಗ್ರೆಸ್ ಪಕ್ಷದ ಸಂಸದ ಸುದೀಪ್ ಬಂಡೋಪಧ್ಯಾಯರಿಗೆ ಜಾಮೀನು ಸಿಕ್ಕಿದೆ...

ಚಿಟ್ ಫಂಡ್ ಹಗರಣ: ಟಿಎಂಸಿ ಸಂಸದ ಸುದೀಪ್ ಬಂಡೋಪಧ್ಯಾಯಗೆ ಜಾಮೀನು
ಸುದೀಪ್ ಬಂಡೋಪಧ್ಯಾಯ
Published On :
ಭುವನೇಶ್ವರ್: ರೋಸ್ ವ್ಯಾಲಿ ಚಿಟ್ ಫಂಡ್ ಪ್ರಕರಣ ಸಂಬಂಧ ಬಂಧನಕ್ಕೊಳಗಾಗಿದ್ದ ತೃಣಮೂಲ ಕಾಂಗ್ರೆಸ್ ಪಕ್ಷದ ಸಂಸದ ಸುದೀಪ್ ಬಂಡೋಪಧ್ಯಾಯರಿಗೆ ಜಾಮೀನು ಸಿಕ್ಕಿದೆ. 
ಜಾಮೀನು ಅರ್ಜಿ ವಿಚಾರಣೆ ನಡೆಸಿದ ಒಡಿಶಾ ಹೈಕೋರ್ಟ್ ಬಂಡೋಪಧ್ಯಾಯರಿಗೆ ಜಾಮೀನು ಮಂಜೂರು ಮಾಡಿದ್ದು, ಪಾಸ್ ಪೋರ್ಟ್ ಮತ್ತು ಇಬ್ಬರ ಶ್ಯೂರಿಟಿಯೊಂದಿಗೆ 25 ಲಕ್ಷ ಠೇವಣಿ ಇಡುವಂತೆ ಕೋರ್ಟ್ ಸೂಚಿಸಿದೆ. 
ರೋಸ್ ವ್ಯಾಲಿ ಚಿಟ್ ಫಂಡ್ ಪ್ರಕರಣ ಸಂಬಂಧ ಕಳೆದ ಜನವರಿಯಲ್ಲಿ ಬಂಡೋಪಧ್ಯಾಯರಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಆದೇಶಿಸಲಾಗಿತ್ತು. ಇನ್ನು ಬಂಡೋಪಧ್ಯಾಯ ಅವರನ್ನು ಎಂಟು ದಿನಗಳ ಕಾಲ ತಮ್ಮ ವಶಕ್ಕೆ ನೀಡುವಂತೆ ಇದಕ್ಕೂ ಮುನ್ನ ಸಿಬಿಐ ಕೋರ್ಟ್ ಗೆ ಮನವಿ ಮಾಡಿತ್ತು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.