ದೇಶ

ಗೋವಾದಲ್ಲಿ ಸೇತುವೆ ಕುಸಿತ: ಇಬ್ಬರ ಸಾವು, ಕಾರ್ಯಾಚರಣೆಗೆ ಧಾವಿಸಿದ ನೌಕಾದಳ!

ಸೇತುವೆಯೊಂದು ಕುಸಿದ ಪರಿಣಾಮ ಇಬ್ಬರು ಸಾವನ್ನಪ್ಪಿ ಸುಮಾರು 15ಕ್ಕೂ ಅಧಿಕ ಮಂದಿ ನಾಪತ್ತೆಯಾಗಿರುವ ಘಟನೆ ಗೋವಾದಲ್ಲಿ ನಡೆದಿದೆ.

ಗೋವಾದಲ್ಲಿ ಸೇತುವೆ ಕುಸಿತ: ಇಬ್ಬರ ಸಾವು, ಕಾರ್ಯಾಚರಣೆಗೆ ಧಾವಿಸಿದ ನೌಕಾದಳ!
ಸೇತುವೆ ಕುಸಿತ
Published On :

ಪಣಜಿ: ಸೇತುವೆಯೊಂದು ಕುಸಿದ ಪರಿಣಾಮ ಇಬ್ಬರು ಸಾವನ್ನಪ್ಪಿ ಸುಮಾರು 15ಕ್ಕೂ ಅಧಿಕ ಮಂದಿ ನಾಪತ್ತೆಯಾಗಿರುವ ಘಟನೆ ಗೋವಾದಲ್ಲಿ ನಡೆದಿದೆ.

ದಕ್ಷಿಣ ಗೋವಾದ ಕರ್ಚೊರೆಮ್ ನಿಂದ ಸನ್ವೋರ್ ಡೆಮ್ ಪ್ರದೇಶಕ್ಕೆ ಸಂಪರ್ಕ ಕಲ್ಪಿಸುವ ಪೋರ್ಚುಗೀಸ್ ಕಾಲದ ಕಬ್ಬಿಣದ ಸೇತುವೆ ಕುಸಿದಿದ್ದು. ಈ ವೇಳೆ ಸುಮಾರು 50ಕ್ಕೂ ಅಧಿಕ ಮಂದಿ ನೀರಿಗೆ ಬಿದ್ದಿದ್ದರು. ಈ ಪೈಕಿ 20 ಮಂದಿ  ಈಜಿ ದಡ ಸೇರಿದ್ದರೆ, 14 ಮಂದಿಯನ್ನು ಕಾರ್ಯಾಚರಣೆ ನಡೆಸಿ ರಕ್ಷಿಸಲಾಯಿತು. ಇನ್ನೂ 15ಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದು, ನಾಪತ್ತೆಯಾದವರಿಗಾಗಿ ತೀವ್ರ ಕಾರ್ಯಾಚರಣೆ ನಡೆಸಲಾಗುತ್ತಿದೆ.

ಇದೀಗ ಕಾರ್ಯಾಚರಣೆಗಾಗಿ ಭಾರತೀಯ ನೌಕಾದಳಕ್ಕೆ ಬುಲಾವ್ ನೀಡಲಾಗಿದ್ದು, ಸ್ಥಳಕ್ಕೆ ದೌಡಾಯಿಸಿರುವ ನೌಕಾದಳದ ಸಿಬ್ಬಂದಿ ಸತತ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಗೋವಾ ಸಿಎಂ ಮನೋಹರ್ ಪರಿಕ್ಕರ್ ಅವರು  ಕಾರ್ಯಚರಣೆಯನ್ನು ಪರಿಶೀಲಿಸುತ್ತಿದ್ದಾರೆ.

ಆತ್ಮಹತ್ಯೆ ಮಾಡಿಕೊಂಡವನ ನೋಡಲು ಹೋದಾಗ ದುರ್ಘಟನೆ
ಇನ್ನು ಸೇತುವೆ ಕುಸಿತಕ್ಕೂ ಮುನ್ನ ಅದೇ ಸೇತುವೆಯಿಂದ ವ್ಯಕ್ತಿಯೋರ್ವ ನೀರಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದನಂತೆ. ನೀರಿಗೆ ಬಿದ್ದ ಆ ವ್ಯಕ್ತಿಯನ್ನು ನೋಡಲು ಸುಮಾರು 50 ಜನ ಸೇತುವೆ ಒಂದು ತುದಿಗೆ ಬಂದು ನಿಂತಿದ್ದಾರೆ.  ಮೊದಲೇ ಶಿಥಿಲಗೊಂಡಿದ್ದ ಸೇತುವೆ ಅಷ್ಟು ಜನರ ಭಾರ ತಾಳಲಾರದೆ ಕುಸಿದಿದೆ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.